ಬೀದರ್: ಒಗ್ಗರಣೆ ಅನ್ನ ಸೇವನೆ ಮಾಡಿದ 50 ಕ್ಕೂ ಅಧಿಕ ವಿದ್ಯಾರ್ಥಿಗಳು ಅಸ್ವಸ್ಥಗೊಂಡಿರುವ ಘಟನೆ ಬೀದರ್ ಜಿಲ್ಲೆ ಹುಮನಾಬಾದ್ ನಲ್ಲಿ ನಡೆದಿದೆ
ಬಸವತೀರ್ಥ ವಿದ್ಯಾಪೀಠ ಶಾಲೆಯಲ್ಲಿ ಈ ಘಟನೆ ನಡೆದಿದೆ. ಒಗ್ಗರಣೆ ಅನ್ನ ತಿಂದು 50 ಮಕ್ಕಳಿಗೆ ವಾಂತಿ ಬೇಧಿ ಕಾಣಿಸಿಕೊಂಡಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ರಾತ್ರಿ ಉಳಿದ ಅನ್ನಕ್ಕೆ ಒಗ್ಗರಣೆ ನೀಡಿ ಮಕ್ಕಳಿಗೆ ಕೊಡಲಾಗಿದೆ ಎಂಬ ಆರೋಪ ಕೇಳಿಬಂದಿದೆ. ಹುಮನಾಬಾದ್ ಪಟ್ಟಣದ ಹೊರವಲಯದ ವಸತಿ ಶಾಲೆಯಲ್ಲಿ ಈ ಘಟನೆ ನಡೆದಿದೆ. ಆಸ್ಪತ್ರೆಗೆ ಎಂಎಲ್ ಸಿ ಭೀಮಾರಾವ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ವರದಿ: ಅರವಿಂದ ಮಲ್ಲಿಗೆ, ಬೀದರ್
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296