nammatumakuru

    Subscribe to Updates

    Get the latest creative news from FooBar about art, design and business.

    What's Hot

    ತುಮಕೂರು: ದೇವರಾಯಪಟ್ಟಣದಲ್ಲಿ ಚಿರತೆ ಹಾವಳಿ, ಇಸ್ರೋ ಆವರಣದಲ್ಲಿ ಕುರಿ ಬಲಿ – ಬೋನು ಅಳವಡಿಕೆ

    August 1, 2026

    ಗೃಹಲಕ್ಷ್ಮಿ, ಯುವನಿಧಿ: 323 ಕೋಟಿ ರೂ. ಬಿಡುಗಡೆ

    August 1, 2026

    ಜಿಟಿಟಿಸಿ: ವಿವಿಧ ಕೋರ್ಸ್ ಗಳ ಪ್ರವೇಶಾತಿಗೆ ಅರ್ಜಿ

    August 1, 2026
    Facebook Twitter Instagram
    ಟ್ರೆಂಡಿಂಗ್
    • ತುಮಕೂರು: ದೇವರಾಯಪಟ್ಟಣದಲ್ಲಿ ಚಿರತೆ ಹಾವಳಿ, ಇಸ್ರೋ ಆವರಣದಲ್ಲಿ ಕುರಿ ಬಲಿ – ಬೋನು ಅಳವಡಿಕೆ
    • ಗೃಹಲಕ್ಷ್ಮಿ, ಯುವನಿಧಿ: 323 ಕೋಟಿ ರೂ. ಬಿಡುಗಡೆ
    • ಜಿಟಿಟಿಸಿ: ವಿವಿಧ ಕೋರ್ಸ್ ಗಳ ಪ್ರವೇಶಾತಿಗೆ ಅರ್ಜಿ
    • ರಾಜಕಾರಣದಷ್ಟೇ ಶಿಕ್ಷಣ ವ್ಯವಸ್ಥೆ ಕಲುಷಿತ: ಡಾ.ವೈ.ಎ.ನಾರಾಯಣಸ್ವಾಮಿ ಕಳವಳ
    • ತಮಿಳುನಾಡಿಗೆ ನೀರು ಹರಿಸುವ ಆದೇಶಕ್ಕೆ ಸಂಘಟನೆಗಳ ಆಕ್ರೋಶ: ಆದೇಶ ಧಿಕ್ಕರಿಸಿ ರಾಜ್ಯದ ಪರ ನಿಲ್ಲಲು ಒತ್ತಾಯ
    • ಸರಗೂರು: ಕೊಟ್ಟಿಗೆಗೆ ನುಗ್ಗಿ ಕಾಡು ಪ್ರಾಣಿ ದಾಳಿ: 6 ಕುರಿ ಬಲಿ, 12 ಕುರಿಗಳಿಗೆ ಗಂಭೀರ ಗಾಯ
    • ಸರಗೂರು: ಮೂರನೇ ಆಷಾಢ ಶುಕ್ರವಾರ -– ವಾಹನ ಚಾಲಕರ ಸಂಘದಿಂದ ವಿಶೇಷ ಪೂಜೆ ಹಾಗೂ ಖಾಕಿ ಸಮವಸ್ತ್ರ ವಿತರಣೆ
    • ಔರಾದ್: ಜೈ ಕಿಸಾನ್ ಶಾಲೆ ಶಿಕ್ಷಕ, ಬಿಎಲ್ ಒ ಮಲ್ಲಿಕಾರ್ಜುನ ಪಿಟ್ರೆ ನಿಧನ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ವಾಂತಿ, ಭೇದಿ ಪ್ರಕರಣ: ಕಲುಷಿತ ನೀರು ಕಾರಣವಲ್ಲ: ಜಿಲ್ಲಾಧಿಕಾರಿ ಸ್ಪಷ್ಟನೆ
    ತುಮಕೂರು August 28, 2024

    ವಾಂತಿ, ಭೇದಿ ಪ್ರಕರಣ: ಕಲುಷಿತ ನೀರು ಕಾರಣವಲ್ಲ: ಜಿಲ್ಲಾಧಿಕಾರಿ ಸ್ಪಷ್ಟನೆ

    By adminAugust 28, 2024No Comments3 Mins Read
    shubha kalyan

    ತುಮಕೂರು: ಜಿಲ್ಲೆಯ ಮಧುಗಿರಿ ತಾಲ್ಲೂಕು ದೊಡ್ಡೇರಿ ಹೋಬಳಿ ಬುಳಸಂದ್ರ ಗ್ರಾಮದಲ್ಲಿ ವರದಿಯಾದ ವಾಂತಿ, ಭೇದಿ ಪ್ರಕರಣಗಳಿಗೆ ಕಲುಷಿತ ನೀರು ಕಾರಣವಲ್ಲವೆಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅವರು ಸ್ಪಷ್ಟನೆ ನೀಡಿದರು.

    ಅವರು ಬುಳಸಂದ್ರ ಗ್ರಾಮಕ್ಕೆ ಭೇಟಿ ನೀಡಿ ಘಟನೆಯ ಬಗ್ಗೆ ಅಧಿಕಾರಿಗಳು ಹಾಗೂ ಗ್ರಾಮಸ್ಥರಿಂದ ಮಾಹಿತಿ ಪಡೆದರು. ನಂತರ ಮಾತನಾಡಿದ ಅವರು, ನೀರನ್ನು ಕಾಯಿಸಿ–ಆರಿಸಿ ಕುಡಿಯಬೇಕು. ಸ್ವಚ್ಛತೆ ಕಾಪಾಡಿಕೊಳ್ಳಬೇಕು. ಶೌಚಕ್ಕಾಗಿ ಶೌಚಾಲಯವನ್ನೇ ಬಳಸಬೇಕು. ಶೌಚದ ನಂತರ ಕೈಗಳನ್ನು ಸಾಬೂನಿನಿಂದ ಶುಚಿಗೊಳಿಸಬೇಕು ಎಂದು ಗ್ರಾಮಸ್ಥರಲ್ಲಿ ಮನವಿ ಮಾಡಿದರು.

    ಮುನ್ನೆಚ್ಚರಿಕಾ ಕ್ರಮವಾಗಿ ಆಶಾ ಕಾರ್ಯಕರ್ತೆಯರು ಗ್ರಾಮದ ಮನೆ–ಮನೆ ಭೇಟಿ ನೀಡಿ ಮನೆಯ ಸದಸ್ಯರ ಆರೋಗ್ಯದ ಬಗ್ಗೆ ಸಮೀಕ್ಷೆ ಮಾಡಬೇಕು ಎಂದರಲ್ಲದೆ ಬರುವ ಆಗಸ್ಟ್ 31ರಂದು ಶ್ರಾವಣ ಮಾಸದ ಕಡೆಯ ಶನಿವಾರ ಇರುವುದರಿಂದ ಗ್ರಾಮಗಳ ದೇವಾಲಯಗಳಲ್ಲಿ ವಿಶೇಷ ಪೂಜೆ/ಜಾತ್ರೆಗಳು ನಡೆಯುವುದರಿಂದ ಅಧಿಕಾರಿಗಳು ಸ್ವಚ್ಛತೆ, ಕುಡಿಯುವ ನೀರಿನ ಬಗ್ಗೆ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡು ವಾಂತಿ–ಭೇದಿ ಪ್ರಕರಣಗಳು ಮರುಕಳಿಸದಂತೆ ಹೆಚ್ಚಿನ ಜಾಗ್ರತೆ ವಹಿಸಬೇಕೆಂದು ಸೂಚನೆ ನೀಡಿದರು.

    ಜನರ ಆರೋಗ್ಯದ ಹಿತದೃಷ್ಟಿಯಿಂದ ಯಾವುದೇ ಜಾತ್ರಾ ಸಂದರ್ಭಗಳಲ್ಲಿ ಅವಘಡಗಳು ನಡೆಯದಂತೆ ಕಟ್ಟೆಚ್ಚರ ವಹಿಸಲು ತಾಲ್ಲೂಕು ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿ, ತಹಶೀಲ್ದಾರರು, ತಾಲ್ಲೂಕು ಆರೋಗ್ಯಾಧಿಕಾರಿ, ಆಹಾರ ಸುರಕ್ಷತಾಧಿಕಾರಿ, ಉಪ ಪೊಲೀಸ್ ವರಿಷ್ಠಾಧಿಕಾರಿಗಳನ್ನೊಳಗೊಂಡ ತಾಲ್ಲೂಕು ಮಟ್ಟದ ಸಮಿತಿ ರಚಿಸಬೇಕು ಎಂದು ತಾಲ್ಲೂಕು ಪಂಚಾಯತಿ ಕಾರ್ಯನಿರ್ವಾಹಕಾಧಿಕಾರಿ ಲಕ್ಷ್ಮಣ್ ಅವರಿಗೆ ಸೂಚನೆ ನೀಡಿದರಲ್ಲದೆ, ಜಾತ್ರೆಗಳನ್ನು ನಡೆಸುವ ದೇವಸ್ಥಾನದ ಸಮಿತಿಯವರು ಪ್ರಸಾದ ವಿತರಣೆ ಮುನ್ನ ಈ ಸಮಿತಿಯಿಂದ ಕಡ್ಡಾಯವಾಗಿ ಅನುಮತಿ ಪಡೆಯಬೇಕು. ಪ್ರಸಾದ ತಯಾರಿಸುವ ಪಾತ್ರೆಗಳು ಸ್ವಚ್ಛವಾಗಿಡುವ, ಜನ ಸಮೂಹಕ್ಕೆ ಪ್ರಸಾದ ವಿತರಣೆ ಮಾಡುವಾಗ ಹೆಚ್ಚಿನ ಜಾಗ್ರತೆ ವಹಿಸುವ ಬಗ್ಗೆ ಸಮಿತಿ ನಿಗಾವಹಿಸಬೇಕು. ಸಮಿತಿಯ ಸೂಚನೆಗಳನ್ನು ಪಾಲಿಸದೆ ನಿರ್ಲಕ್ಷ್ಯ ತೋರುವ ದೇವಸ್ಥಾನದ ಸಮಿತಿ ಮೇಲೆ ಶಿಸ್ತು ಕ್ರಮ ಕೈಗೊಳ್ಳಲಾಗುವುದೆಂದು ಎಚ್ಚರಿಕೆ ನೀಡಿದರು.

    ನಂತರ ಮಧುಗಿರಿ ತಾಲೂಕು ಸರ್ಕಾರಿ ಅತಿಥಿ ಗೃಹದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಬುಳಸಂದ್ರ ವಾಂತಿ–ಭೇದಿ ಪ್ರಕರಣದ ಬಗ್ಗೆ ಮಾಹಿತಿ ಹಂಚಿಕೊಂಡ ಅವರು ಸುಮಾರು 160 ಮನೆಗಳಿರುವ ಬುಳಸಂದ್ರ ಗ್ರಾಮದಲ್ಲಿ ಶ್ರಾವಣ ಶನಿವಾರ ಪ್ರಯುಕ್ತ ಆಗಸ್ಟ್ 24ರ ಶನಿವಾರದಿಂದ 3 ದಿನಗಳ ಕಾಲ ಹಮ್ಮಿಕೊಂಡಿದ್ದ ಕರಿಯಮ್ಮ, ಮುತ್ರಾಯ, ಭೂತಪ್ಪ ಸ್ವಾಮಿಯ ಜಾತ್ರೆ ಸಂದರ್ಭದಲ್ಲಿ 85 ವರ್ಷದ ತಿಮ್ಮಕ್ಕ, 90 ವರ್ಷದ ಗಿರಿಯಮ್ಮ ಹಾಗೂ 45 ವರ್ಷದ ಕಾಟಮ್ಮ ಸೇರಿ ಮೂರು ಮಂದಿ ಮರಣ ಹೊಂದಿರುವ ಬಗ್ಗೆ ವರದಿಯಾಗಿದೆ.

    ವೈದ್ಯರ ವರದಿ ಪ್ರಕಾರ ತಿಮ್ಮಕ್ಕ ಮತ್ತು ಗಿರಿಯಮ್ಮ ಅವರ ಸಾವು ವಯೋಸಹಜವಾಗಿದ್ದು, ಸಾವನ್ನಪ್ಪುವ ಮುನ್ನ ಇವರಿಬ್ಬರಲ್ಲೂ ವಾಂತಿ, ಭೇದಿ ಕಾಣಿಸಿಕೊಂಡಿರುವುದಿಲ್ಲ. ಕಾಟಮ್ಮ ಎಂಬ ಮಹಿಳೆ ಆಂಧ್ರಪ್ರದೇಶದ ಮಡಕಶಿರಾ ತಾಲ್ಲೂಕು ಸಿದ್ದಗಿರಿ ಗ್ರಾಮದಿಂದ ಜಾತ್ರೆಗಾಗಿ ತವರಿಗೆ ಬಂದಿದ್ದು, ಗ್ರಾಮಕ್ಕೆ ಬರುವ ಮುನ್ನವೇ ಈಕೆಗೆ ವಾಂತಿ ಭೇದಿ ಕಾಣಿಸಿಕೊಂಡಿತ್ತು. ವಾಂತಿ, ಭೇದಿಯಿಂದ ಅಸ್ವಸ್ಥಗೊಂಡು ಕಾಟಮ್ಮ ಮೃತಪಟ್ಟಿದ್ದಾರೆ. ಕಲುಷಿತ ನೀರಿನಿಂದಾಗಿ ಯಾವುದೇ ಸಾವು ಸಂಭವಿಸಿಲ್ಲವೆಂದು ಸ್ಪಷ್ಟಪಡಿಸಿದರು.

    ಜಾತ್ರೆಯ ಸಂದರ್ಭದಲ್ಲಿ ಗ್ರಾಮದವರು ಬಳಸಿದ ನೀರನ್ನು ಪರೀಕ್ಷೆಗೊಳಪಡಿಸಲಾಗಿ ಕುಡಿಯಲು ಯೋಗ್ಯವಿರುವ ಬಗ್ಗೆ ವರದಿ ಬಂದಿದೆ. ಮೃತಪಟ್ಟ ದುರ್ದೈವಿ ತಾವೇ ತಯಾರಿಸಿದ ಟೊಮೊಟೋ ಬಾತ್, ಮಜ್ಜಿಗೆಯನ್ನು ಸೇವಿಸಿದ ನಂತರ ಅಸ್ವಸ್ಥಗೊಂಡಿರುವ ಸಾಧ್ಯತೆ ಇದೆ. ಜಾತ್ರೆಗಳಲ್ಲಿ ಸ್ವಚ್ಛತೆ ಕಾಪಾಡಿಕೊಳ್ಳದಿರುವುದರಿಂದಲೇ ಇಂತಹ ಪ್ರಕರಣಗಳು ಘಟಿಸುತ್ತಿವೆ. ಮಧುಗಿರಿ ತಾಲ್ಲೂಕಿನ ಚಿನ್ನೇನಹಳ್ಳಿ ಗ್ರಾಮದಲ್ಲಿ ವಾಂತಿ-ಭೇದಿಯಿಂದ ಸಾವಿನ ಪ್ರಕರಣ ಮಾಸುವ ಮುನ್ನವೇ ಮತ್ತಿದೇ ತಾಲ್ಲೂಕಿನಲ್ಲಿ ವಾಂತಿ–ಭೇದಿ ಪ್ರಕರಣ ವರದಿಯಾಗಿದೆ. ಸ್ವಚ್ಛತೆ ಇಲ್ಲದಿರುವುದು ಇಂಥ ಪ್ರಕರಣಗಳಿಗೆ ಪ್ರಮುಖ ಕಾರಣವಾಗಿದ್ದು, ಸ್ವಚ್ಛತೆ ಕಾಪಾಡಿಕೊಳ್ಳುವ ಬಗ್ಗೆ ಗ್ರಾಮಸ್ಥರಿಗೆ ಅರಿವು ಮೂಡಿಸಬೇಕೆಂದು ಅಧಿಕಾರಿಗಳಿಗೆ ಈಗಾಗಲೇ ಸೂಚನೆ ನೀಡಲಾಗಿದೆ ಎಂದು ತಿಳಿಸಿದರು.

    ಬುಳಸಂದ್ರ ಗ್ರಾಮದಲ್ಲಿ ಒಟ್ಟು 16 ಮಂದಿಗೆ ವಾಂತಿ–ಭೇದಿ ಕಾಣಿಸಿಕೊಂಡಿದ್ದು, ಈ ಪೈಕಿ 9 ಜನರನ್ನು ಹೆಚ್ಚಿನ ಚಿಕಿತ್ಸೆಗಾಗಿ ಜಿಲ್ಲಾಸ್ಪತ್ರೆ ಹಾಗೂ ಶ್ರೀದೇವಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆಯಲ್ಲದೆ ಇದೇ ಗ್ರಾಮದ 18 ವರ್ಷದ ಯುವಕನೊಬ್ಬನಿಗೆ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ತೆರೆದಿರುವ ತಾತ್ಕಾಲಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಪ್ರಸ್ತುತ ಯಾವುದೇ ಹೊಸ ಪ್ರಕರಣಗಳು ವರದಿಯಾಗಿಲ್ಲವೆಂದು ಮಾಹಿತಿ ನೀಡಿದರು.

    ನಂತರ ಕೊರಟಗೆರೆ ತಾಲ್ಲೂಕಿನ ಮುಗ್ಗೀರನಕಾಲೋನಿಯ ಶಿವಶಂಕರ್ ಹಾಗೂ ವೀರಭದ್ರಯ್ಯ ಅವರ ಜಮೀನಿಗೆ ಭೇಟಿ ನೀಡಿ ಮಳೆ ಹಾನಿಗೊಳಗಾದ ಮುಸುಕಿನ ಜೋಳ ಬೆಳೆಯನ್ನು ಪರಿವೀಕ್ಷಿಸಿದರು. ಮಳೆಯಿಂದ ಬೆಳೆ ಹಾನಿಗೊಳಗಾದ ರೈತರಿಗೆ ಕೂಡಲೇ ಬೆಳೆ ನಷ್ಟದ ಪ್ರಮಾಣವನ್ನು ಅಂದಾಜಿಸಿ ವಿಮಾ ಮೊತ್ತ ಪಾವತಿಗೆ ಕ್ರಮ ಕೈಗೊಳ್ಳಬೇಕೆಂದು ಓರಿಯಂಟಲ್ ಇನ್ಸೂರೆನ್ಸ್ ವಿಮಾ ಕಂಪನಿಯ ಪ್ರತಿನಿಧಿ ದಯಾನಂದ್ ಹಾಗೂ ಕೃಷಿ ಅಧಿಕಾರಿಗಳಿಗೆ ಸೂಚನೆ ನೀಡಿದರು.

    ಸ್ಥಳದಲ್ಲಿದ್ದ ಕೃಷಿ ಜಂಟಿ ನಿರ್ದೇಶಕ ಡಾ.ಎನ್. ರಮೇಶ್ ಮಾತನಾಡಿ, ಹೆಚ್ಚಿನ ಪ್ರಮಾಣದ ಮಳೆಯಿಂದ ಮುತ್ತುಗದ ಕೆರೆ, ಚಿಕ್ಕೆರೆ, ದೇವರಳ್ಳಿ ಕೆರೆ ಕೋಡಿ ತುಂಬಿ ಹೆಚ್ಚುವರಿ ನೀರು ಹರಿದು ಈ ಭಾಗದ ಸುಮಾರು 43 ಹೆಕ್ಟೇರ್ ಬೆಳೆ ಹಾನಿಯಾಗಿದ್ದು, ತ್ವರಿತವಾಗಿ ಪರಿಹಾರ ಒದಗಿಸಲು ಕ್ರಮ ಕೈಗೊಳ್ಳಲಾಗುತ್ತಿದೆ. ಬುಧವಾರದಿಂದ ಕೃಷಿ ಹಾಗೂ ವಿಮಾ ಕಂಪನಿ ಜಂಟಿ ಸಮೀಕ್ಷೆ ಮಾಡಿ ವಿಮಾ ಮೊತ್ತ ನಿರ್ಧರಿಸಿ ಬೆಳೆ ನಷ್ಟ ಹೊಂದಿದ ರೈತರ ಖಾತೆಗೆ ನೇರವಾಗಿ ವಿಮಾ ಪರಿಹಾರ ಮೊತ್ತವನ್ನು ಪಾವತಿ ಮಾಡಲಾಗುವುದು ಎಂದು ಜಿಲ್ಲಾಧಿಕಾರಿಗಳ ಗಮನಕ್ಕೆ ತಂದರು.

    ಈ ಸಂದರ್ಭದಲ್ಲಿ ಮಧುಗಿರಿ ಉಪವಿಭಾಗಾಧಿಕಾರಿ ಗೋಟೂರು ಶಿವಪ್ಪ, ಕೊರಟಗೆರೆ ತಹಶೀಲ್ದಾರ್ ಕೆ.ಮಂಜುನಾಥ್, ಮಧುಗಿರಿ ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಶ್ರೀನಿವಾಸ್, ಆಹಾರ ಸುರಕ್ಷತಾಧಿಕಾರಿ ಡಾ.ಹರೀಶ್, ಸಹಾಯಕ ಕೃಷಿ ನಿರ್ದೇಶಕ ರುದ್ರಪ್ಪ, ಮತ್ತಿತರರು ಹಾಜರಿದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q

    admin
    • Website

    Related Posts

    ತುಮಕೂರು: ದೇವರಾಯಪಟ್ಟಣದಲ್ಲಿ ಚಿರತೆ ಹಾವಳಿ, ಇಸ್ರೋ ಆವರಣದಲ್ಲಿ ಕುರಿ ಬಲಿ – ಬೋನು ಅಳವಡಿಕೆ

    August 1, 2026

    ಜಿಟಿಟಿಸಿ: ವಿವಿಧ ಕೋರ್ಸ್ ಗಳ ಪ್ರವೇಶಾತಿಗೆ ಅರ್ಜಿ

    August 1, 2026

    ರಾಜಕಾರಣದಷ್ಟೇ ಶಿಕ್ಷಣ ವ್ಯವಸ್ಥೆ ಕಲುಷಿತ: ಡಾ.ವೈ.ಎ.ನಾರಾಯಣಸ್ವಾಮಿ ಕಳವಳ

    August 1, 2026

    Comments are closed.

    Our Picks

    NEET ವಿವಾದ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

    July 25, 2026

    ನೀಟ್ ಅಕ್ರಮ: ಕಪ್ಪು ಪಟ್ಟಿ ಧರಿಸಿ ಮೌನ ಪ್ರತಿಭಟನೆ: ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ

    July 21, 2026

    ಕೇಂದ್ರ ಸರ್ಕಾರವು ತಕ್ಷಣವೇ ಸೋನಮ್ ವಾಂಗ್ಚುಕ್ ಜೊತೆ ಚರ್ಚಿಸಲು ಆಗ್ರಹಿಸಿ ರಾಷ್ಟ್ರಪತಿಯವರಿಗೆ ಮನವಿ: ತುಮಕೂರಿನಲ್ಲಿ ಆನ್‌ ಲೈನ್ ಸಹಿ ಸಂಗ್ರಹ

    July 18, 2026

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ತುಮಕೂರು: ದೇವರಾಯಪಟ್ಟಣದಲ್ಲಿ ಚಿರತೆ ಹಾವಳಿ, ಇಸ್ರೋ ಆವರಣದಲ್ಲಿ ಕುರಿ ಬಲಿ – ಬೋನು ಅಳವಡಿಕೆ

    August 1, 2026

    ತುಮಕೂರು: ನಗರದ ದೇವರಾಯಪಟ್ಟಣ ಭಾಗದಲ್ಲಿ ಚಿರತೆಯೊಂದು ಪ್ರತ್ಯಕ್ಷವಾಗಿದ್ದು, ಸ್ಥಳೀಯ ನಿವಾಸಿಗಳಲ್ಲಿ ತೀವ್ರ ಆತಂಕ ಮೂಡಿಸಿದೆ. ದೇವರಾಯಪಟ್ಟಣದಿಂದ ಬಂಡೇಪಾಳ್ಯ ಸಂಪರ್ಕಿಸುವ ರಸ್ತೆಯಲ್ಲಿ…

    ಗೃಹಲಕ್ಷ್ಮಿ, ಯುವನಿಧಿ: 323 ಕೋಟಿ ರೂ. ಬಿಡುಗಡೆ

    August 1, 2026

    ಜಿಟಿಟಿಸಿ: ವಿವಿಧ ಕೋರ್ಸ್ ಗಳ ಪ್ರವೇಶಾತಿಗೆ ಅರ್ಜಿ

    August 1, 2026

    ರಾಜಕಾರಣದಷ್ಟೇ ಶಿಕ್ಷಣ ವ್ಯವಸ್ಥೆ ಕಲುಷಿತ: ಡಾ.ವೈ.ಎ.ನಾರಾಯಣಸ್ವಾಮಿ ಕಳವಳ

    August 1, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.