ತುರುವೇಕೆರೆ : ಪಟ್ಟಣ ಪಂಚಾಯಿತಿ ವತಿಯಿಂದ ಮತದಾನ ಜಾಗೃತಿ ಅಭಿಯಾನವನ್ನು ಆಯೋಜನೆ ಮಾಡಲಾಗಿತ್ತು.
ಪಟ್ಟಣದ ಪ್ರಮುಖ ಬೀದಿಗಳಲ್ಲಿ ಅಂಗನವಾಡಿ ಕಾರ್ಯಕರ್ತರು ಆಶಾ ಕಾರ್ಯಕರ್ತರು ಪೌರಕಾರ್ಮಿಕರೊಂದಿಗೆ ಜಾಥಾ ಮೂಲಕ ಸಂಚರಿಸಿ ಮತದಾನದ ಅರಿವು ಮೂಡಿಸಲಾಯಿತು.
ಈ ಸಂದರ್ಭದಲ್ಲಿ ಪಟ್ಟಣ ಪಂಚಾಯಿತಿಯ ಮುಖ್ಯ ಅಧಿಕಾರಿ ಶ್ರೀನಾಥ್ ಬಾಬು ಮಾತನಾಡಿ, ಕಡ್ಡಾಯವಾಗಿ ಮತದಾನ ಮಾಡಿ, ಮತದಾನವನ್ನು ಹಬ್ಬವನ್ನಾಗಿ ಆಚರಿಸಿ ತಮ್ಮ ಹಕ್ಕನ್ನು ತಪ್ಪದೇ ಚಲಾವಣೆ ಮಾಡಿ ಎಂದು ಹೇಳಿದರು.
ಈ ಅಭಿಯಾನದಲ್ಲಿ ಸೆಕ್ಟರ್ ಆಫೀಸರ್ ರಾಘವೇಂದ್ರ, ಕಂದಾಯ ಹಾಗೂ ಆರೋಗ್ಯ ನಿರೀಕ್ಷಕ ರಂಗನಾಥ್, ಸಿಬ್ಬಂದಿಗಳಾದ ಸದಾನಂದ, ನರಸಿಂಹಮೂರ್ತಿ, ಕೃಷ್ಣಮೂರ್ತಿ ಸೇರಿದಂತೆ ಅಂಗನವಾಡಿ ಆಶಾ ಕಾರ್ಯಕರ್ತೆಯರು ಮತ್ತು ಪೌರಕಾರ್ಮಿಕರು ಭಾಗವಹಿಸಿದ್ದರು.
ವರದಿ: ಸುರೇಶ್ ಬಾಬು ಎಂ. ತುರುವೇಕೆರೆ
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296