ಜೆ.ಕೆ. ಸಿಮೆಂಟ್ ಪ್ಯಾಕ್ಟರಿಯಲ್ಲಿರುವ ಕಾರ್ಮಿಕರಿಗೆ ಮತದಾನ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ಬಾಗಲಕೋಟೆ ಜಿಲ್ಲೆಯ ಲೋಕಾಪೂರದಲ್ಲಿರುವ ಪ್ಯಾಕ್ಟರಿಯ ಕಾರ್ಮಿಕರಿಗೆ ಮತದಾನ ಜಾಗೃತಿ ಮೂಡಿಸಲಾಯಿತು.
ಬಾಗಲಕೋಟೆ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ ಹಾಗೂ ಜಿಲ್ಲಾ ಸ್ವೀಪ್ ಸಮಿತಿ ಸಹಯೋಗದಲ್ಲಿ ಹಮ್ಮಿಕೊಂಡ ನನ್ನ ಮತ ನನ್ನ ಹಕ್ಕು ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಜಿಲ್ಲಾ ಪಂಚಾಯತ ಸಿಇಓ ಆಗಿರುವ ಜಿಲ್ಲಾ ಸ್ವೀಪ್ ಸಮಿತಿಯ ಅಧ್ಯಕ್ಷ ಶಶಿಧರ ಕುರೇರ್, ಮೇ 7 ರಂದು ನಡೆಯಲಿರುವ ಲೋಕಸಭಾ ಚುನಾವಣೆಯಲ್ಲಿ ಪ್ರತಿಯೊಬ್ಬ ಮತದಾರರು, ತಮ್ಮ ಹಾಗೂ ತಮ್ಮ ಕುಟುಂಬ ವರ್ಗದ ಅರ್ಹ ಮತದಾರರು ತಪ್ಪದೇ ತಮ್ಮ ಮತ ಚಲಾಯಿಸಲು ತಿಳಿಸಿದರು.
ಸಿಮೆಂಟ್ ಪ್ಯಾಕ್ಟರಿಯ ಸಿಬ್ಬಂದಿಗಳು ಮತದಾನ ಜಾಗೃತಿಯ ಸಂದೇಶವುಳ್ಳ ರಂಗೋಲಿ ಬಿಡಿಸಿರುವುದು ಎಲ್ಲರ ಗಮನ ಸೆಳೆಯಿತು. ಪ್ರತಿಜ್ಞಾವಿಧಿ ಬೋಧಿಸುವ ಮೂಲಕ ಅರಿವು ಮೂಡಿಸಲಾಯಿತು.
ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ ಉಪ ಕಾರ್ಯದರ್ಶಿ ಅಮರೇಶ ನಾಯಕ, ಜಿಲ್ಲಾ ಪಂಚಾಯತ ಯೋಜನಾ ನಿರ್ದೇಶಕ ಶಶಿಕಾಂತ ಶಿವಪೂರೆ ಸೇರಿದಂತೆ ಜೆಕೆ ಸಿಮೆಂಟ್ ಪ್ಯಾಕ್ಟರಿಯ ಅಧಿಕಾರಿಗಳು, ಸಿಬ್ಬಂದಿ ವರ್ಗದವರು ಹಾಗೂ ಕಾರ್ಮಿಕರು ಪಾಲ್ಗೊಂಡಿದ್ದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA


