ತಿಪಟೂರು: ರಾಜ್ಯದಲ್ಲಿ ಅಧಿಕಾರದಲ್ಲಿರುವ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗೆ ಮತ ನೀಡುವುದರಿಂದ ಪದವೀಧರ ಸಮಸ್ಯೆಗಳನ್ನು ಬಗೆಹರಿಸಲು ಸಾಧ್ಯವಾಗುತ್ತದೆ ಎಂದು ಆಗ್ನೇಯಪದವೀಧರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಶ್ರೀನಿವಾಸ್ ಹೇಳಿದರು.
ತಿಪಟೂರು ನಗರದ ಕಲ್ಪತರು ಗ್ರಾಂಡ್ ಸಭಾಂಗಣದಲ್ಲಿ ಪದವೀಧರರನ್ನು ಉದ್ದೇಶಿಸಿ ಮಾತನಾಡಿ, ಪಕ್ಷದ ಅಭ್ಯರ್ಥಿಯನ್ನು ನೀವು ಆಯ್ಕೆ ಮಾಡಿದರೆ ನಿಮ್ಮ ಸಮಸ್ಯೆಗಳುಸುಲಭವಾಗಿ ಕೆಲಸಗಳು ಆಗುತ್ತವೆ. ನಾನು ಎಲ್ಲ ಅನುದಾನಿತ ಹಾಗೂ ಅನುದಾನ ರಹಿತ ಶಿಕ್ಷಣ ಸಂಸ್ಥೆಗಳಿಗೆ ಭೇಟಿ ನೀಡಿ ಸಮಸ್ಯೆಗಳನ್ನು ಆಲಿಸಿದ್ದೇನೆ ಸರ್ಕಾರದಿಂದ ಪರಿಹಾರ ಪಡೆಯಲು ಸಾಧ್ಯ ಎಂದು ಕಾಂಗ್ರೆಸ್ ಅಭ್ಯರ್ಥಿ ಶ್ರೀನಿವಾಸ್ ತಿಳಿಸಿದರು.
ಈ ಸಭೆಯಲ್ಲಿ ನಗರಸಭೆ ಅಧ್ಯಕ್ಷ ಟಿ.ಎನ್.ಪ್ರಕಾಶ್, ಸದಸ್ಯರಾದ ಮಹೇಶ್, ಮುಖಂಡರಾದ ಮಾದಿಹಳ್ಳಿ ಪ್ರಕಾಶ್, ಆದಿತ್ಯ, ಜಯಣ್ಣ, ತರಕಾರಿ ಕಿಟ್ಟಿ ಲೋಕನಾಥ್ ಸಿಂಗ್, ನಂದಿನಿ ಹಲವಾರು ಪದವೀಧರರು ಭಾಗವಹಿಸಿದ್ದರು.
ವರದಿ: ಆನಂದ್, ತಿಪಟೂರು
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296