ಬೆಂಗಳೂರು: ಸಾಲು ಮರದ ತಿಮ್ಮಕ್ಕ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಅವರನ್ನು ಉಸಿರಾಟದ ಸಮಸ್ಯೆಯಿಂದಾಗಿ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಸಾಲು ಮರದ ತಿಮ್ಮಕ್ಕ ಅವರು ಇತ್ತೀಚಿಗೆ ಹಾಸನ ಜಿಲ್ಲೆಯ ಬೇಲೂರಿನ ಸಮೀಪದ ಬಳ್ಳೂರಿನಲ್ಲಿ ವಾಸಾಗಿದ್ದು, ಕಳೆದ ಎರಡು ದಿನಗಳಿಂದ ಅವರಿಗೆ ಉಸಿರಾಟ ಸಮಸ್ಯೆ ಕಾಣಿಸಿಕೊಂಡಿತ್ತು. ಸ್ಥಳೀಯ ಚಿಕಿತ್ಸೆಗಳಿಂದ ಗುಣಮುಖರಾಗದ ಕಾರಣ ಉಸಿರಾಟ ಸಮಸ್ಯೆ ಹೆಚ್ಚಾಗಿದ್ದು, ಕೂಡಲೇ ಅವರನ್ನು ಬಳ್ಳೂರಿನಿಂದ ಬೆಂಗಳೂರಿನ ಜಯನಗರದ ಅಪೋಲೋ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ.
ಬೆಂಗಳೂರಿನ ಅಪೋಲೋ ಆಸ್ಪತ್ರೆಯ ವಿಶೇಷ ವಾರ್ಡ್‌ನಲ್ಲಿ ಚಿಕಿತ್ಸೆ ಮುಂದುವರಿದಿದೆ. ಸದ್ಯ ಅವರ ಆರೋಗ್ಯದಲ್ಲಿ ಸ್ವಲ್ಪ ಮಟ್ಟಿನ ಚೇತರಿಕೆ ಕಂಡುಬಂದಿದ್ದು, ವೈದ್ಯರು ಆಸ್ಪತ್ರೆಯಲ್ಲಿ ಇನ್ನಷ್ಟು ದಿನ ನಿಗಾವಹಿಸಲಾಗುವುದು ಎಂದು ತಿಳಿಸಿದ್ದಾರೆ ಎನ್ನಲಾಗಿದೆ.


