ಬಳ್ಳಾರಿ: ಲಾರಿಯ ಚಕ್ರಕ್ಕೆ ಸಿಲುಕಿದ ವೃದ್ಧೆಯೊಬ್ಬರು ದಾರುಣವಾಗಿ ಸಾವನ್ನಪ್ಪಿದ ಘಟನೆ ಗಣಿ ಜಿಲ್ಲೆ ಬಳ್ಳಾರಿಯಲ್ಲಿ ನಡೆದಿದ್ದು, ಬಳ್ಳಾರಿಯ ಜಿಂದಾಲ್ ಕಾರ್ಖಾನೆ ಎದುರು ಈ ಘಟನೆ ನಡೆದಿದೆ.
ಕಾರ್ಖಾನೆ ಎದುರು ನಡೆದು ಹೋಗುತ್ತಿದ್ದ ವೃದ್ಧೆಯ ಮೇಲೆ ಲಾರಿಯೊಂದು ಹರಿದಿದೆ. ಲಾರಿಯಡಿಗೆ ಸಿಲುಕಿದ ವೃದ್ಧೆಯ ದೇಹ ಛಿದ್ರಛಿದ್ರವಾಗಿದೆ. ವೃದ್ಧೆಯ ಮೇಲೆ ಲಾರಿ ಹತ್ತಿದರೂ ಲಾರಿ ಚಾಲಕ ಲಾರಿ ನಿಲ್ಲಿಸದೇ ಸ್ಥಳದಿಂದ ಪರಾರಿಯಾಗಿದ್ದಾನೆ.
ಈ ಭೀಕರ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಎದೆ ಝಲ್ ಎನಿಸುವಂತಿದೆ. ಜಿಂದಾಲ್ ಕಾರ್ಖಾನೆ ಓಲ್ಡ್ ಗೇಟ್ ಬಳಿ ಈ ಅಪಘಾತ ಸಂಭವಿಸಿದ್ದು, ತೋರಣಗಲ್ ಪೊಲೀಸರು ಲಾರಿ ಚಾಲಕನ್ನು ವಶಕ್ಕೆ ಪಡೆದಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz