ತಿಪಟೂರು: ರಾಜ್ಯದ ವೃತ್ತಿಪರ ನೇಕಾರರ ಹಕ್ಕೊತ್ತಾಯಗಳನ್ನು ಈಡೇರಿಸುವಂತೆ ಒತ್ತಾಯಿಸಿ, ತಿಪಟೂರು ತಾಲ್ಲೂಕು ಜಯಕರ್ನಾಟಕ ಜನಪರ ವೇದಿಕೆ ಕಾರ್ಮಿಕ ಘಟಕದ ವತಿಯಿಂದ ಪ್ರತಿಭಟನೆ ನಡೆಯಿತು.
ತಿಪಟೂರಿನ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದಿಂದ ಮೆರವಣಿಗೆ ಹೊರಟು, ಉಪವಿಭಾಗಾಧಿಕಾರಿಗಳ ಕಚೇರಿಯ ತಹಶೀಲ್ದಾರ್ ಕೆ. ಎಲ್.ಪರಮೇಶ್ವರಯ್ಯ ರವರಿಗೆ ಮನವಿ ಪತ್ರ ಸಲ್ಲಿಸಲಾಯಿತು.
ತಾಲ್ಲೂಕು ಕಾರ್ಯದರ್ಶಿ ರವಿ ಹಿಂಡಿಸ್ಕೆರೆ, ಕಾರ್ಮಿಕ ಘಟಕದ ಉಪಾಧ್ಯಕ್ಷ ಉಮಾಶಂಕರ್ ಮತ್ತು ಹಿಂದುಳಿದ ವರ್ಗಗಳ ರಾಜ್ಯ ಸಂಘಟನ ಕಾರ್ಯದರ್ಶಿ ಲೋಕೇಶ್ ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದರು.
ಅಧ್ಯಕ್ಷ ಬಿ.ಟಿ.ಕುಮಾರ್, ಜಿಲ್ಲಾ ಯುವ ಘಟಕದ ಉಪಾಧ್ಯಕ್ಷ ಬಿ.ಬಿ.ಬಸವರಾಜ್, ಮಾಜಿ ತಾ.ಪಂ.ಅಧ್ಯಕ್ಷ ವಿರುಪಾಕ್ಷಯ್ಯ, ಗ್ರಾ.ಪಂ. ಸದಸ್ಯ ಜಗನ್ನಾಥ್, ತಾಲ್ಲೂಕು ಉಪಾಧ್ಯಕ್ಷ ಸಿದ್ದೇಶ್, ನಗರ ಕಾರ್ಯದರ್ಶಿ ಲೋಕೇಶ್, ಮುಖಂಡರಾದ ದಸರೀಘಟ್ಟ ಬಾಬು, ಲೋಕೇಶ್, ಧನ್ ಪಾಲ್ ತಿಮ್ಮರಾಜು, ವಿದ್ಯಾರ್ಥಿ ಘಟಕದ ರಾಖಿ, ರಾಹುಲ್ ಕಾರ್ಮಿಕ ಘಟಕದ ಗುರುಮೂರ್ತಿ, ರಾಮಚಂದ್ರ, ಸತೀಶ್ಚಂದ್ರ, ನಾಗೇಶ್, ರಘು ಸತೀಶ್ ಬಾಬು ದರ್ಶನ್, ಮಧು ಮತ್ತು ರಾಜಣ್ಣ ಸೇರಿದಂತೆ ಕಾರ್ಮಿಕ, ವಿದ್ಯಾರ್ಥಿ ಘಟಕ ಮತ್ತು ನೇಕಾರರ ಹೋರಾಟ ಹಾಗೂ ಒಕ್ಕೂಟದ ಪದಾಧಿಕಾರಿಗಳು ಹಾಜರಿದ್ದರು.
ವರದಿ: ಆನಂದ ತಿಪಟೂರು
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB