ಕೊಳ್ಳೇಗಾಲ: ತಾಲೂಕಿನ ಮಧುವನಹಳ್ಳಿ ಗ್ರಾಮದ ಜಿ.ವಿ.ಗೌಡ ನಗರದ ನಿವಾಸಿಯೊಬ್ಬನನ್ನು ತಲೆಗೆ ಹೊಡೆದು ಹತ್ಯೆ ಮಾಡಲಾಗಿದ್ದು ಈ ಸಂಬಂಧ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಹದೇವಸ್ವಾಮಿ( 45) ಕೊಲೆಯಾದ ವ್ಯಕ್ತಿ. ಈತನಿಗೆ ಪತ್ನಿ , ಇಬ್ಬರು ಮಕ್ಕಳಿದ್ದಾರೆ. ಪತ್ನಿ ಹಾಗೂ ಮಗ ಪ್ರವಾಸಕ್ಕೆ ತೆರಳಿದ್ದರು. ಈ ನಡುವೆ ಮನೆಯಲ್ಲಿ ಯಾರು ಇಲ್ಲದ ವೇಳೆ ಮಹದೇವ ಸ್ವಾಮಿ ತಲೆಗೆ ಯಾರೋ ಹೊಡೆದು ಹತ್ಯೆಮಾಡಿದ್ದಾರೆ ಎನ್ನಲಾಗಿದೆ.
ಘಟನಾ ಸ್ಥಳಕ್ಕೆ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತ ದೇಹವನ್ನು ಚಾಮರಾಜನಗರ ಜಿಲ್ಲಾ ಆಸ್ಪತ್ರೆಗೆ ರವಾನಿಸಲಾಗಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy