ತುರುವೇಕೆರೆ: ತಾಲೂಕಿನ ಮಾಯಸಂದ್ರ , ವ್ಯವಸಾಯ ಸೇವಾ ಸಹಕಾರ ಸಂಘದ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಚುನಾವಣೆ ನಡೆದಿದ್ದು ಅಧ್ಯಕ್ಷ ಹಾಗೂ ಉಪಾಧ್ಯಕ್ಷರನ್ನು ಅವಿರೋಧವಾಗಿ ಆಯ್ಕೆ ಮಾಡಲಾಗಿದೆ.
ಈ ಹಿಂದಿನ ಅಧ್ಯಕ್ಷ ನಂದೀಶ್ ಮತ್ತು ಉಪಾಧ್ಯಕ್ಷರಾಗಿದ್ದ ಗಿರೀಶ್ ತೆರವಾಗಿದ್ದ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ಪಟೇಲ್ ನಟರಾಜು ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಎಂ.ಎಲ್.ಲೋಕೇಶ್ ಅವರು ಅವಿರೋಧವಾಗಿ ಆಯ್ಕೆಯಾದರು.
ಅಧ್ಯಕ್ಷರು, ಉಪಾಧ್ಯಕ್ಷರ ಆಯ್ಕೆಯ ಹಿನ್ನೆಲೆಯಲ್ಲಿ ಬೆಂಬಲಿಗರು ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿದರು. ನೂತನ ಅಧ್ಯಕ್ಷರಾದ ಪಟೇಲ್ ನಟರಾಜ್ ಮತ್ತು ಉಪಾಧ್ಯಕ್ಷರಾದ ಎಂ.ಎಲ್.ಲೋಕೇಶ್ ರವರನ್ನು ಶ್ರೀಧರ್ ಗೌಡ, ಎನ್.ಸಿ. ನಂಜುಂಡಸ್ವಾಮಿ, ರಾಘವೇಂದ್ರ ರವರು, ಪುಷ್ಪ ಮಾಲೆ ಹಾಕಿ ಅಭಿನಂದಿಸಿದರು.
ಇದೇ ವೇಳೆ ಮಾತನಾಡಿದ ಅಧ್ಯಕ್ಷರು ಹಾಗೂ ಉಪಾಧ್ಯಕ್ಷರು, ತಮ್ಮ ಮೇಲೆ ನಂಬಿಕೆ ಇಟ್ಟು ಆಯ್ಕೆ ಮಾಡಿದ ಎಲ್ಲಾ ನಿರ್ದೇಶಕರಿಗೆ ಅಭಿನಂದಿಸಿದರು.
ಈ ಸಂದರ್ಭದಲ್ಲಿ ನಿರ್ದೇಶಕರಾದ ಪಂಚಾಕ್ಷರಿ, ಪುಟ್ಟೇಗೌಡ, ಗಂಗಾಧರ್ ಮುಂತಾದವರು ಹಾಜರಿದ್ದರು.
ವರದಿ: ಸುರೇಶ್ ಬಾಬು ಎಂ., ತುರುವೇಕೆರೆ
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB