ತುಮಕೂರು : ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ತುಮಕೂರು, ಡಿ.ಸಿ.ಐ.ಎಲ್. ಹಾಗೂ ದಾಬಸ್ಪೇಟೆ ರೋಟರಿ ಕನೆಕ್ಟರ್ ಸಂಸ್ಥೆಯ ಸಹಯೋಗದಲ್ಲಿ ಖಾಲಿ ಇರುವ ಟೆಕ್ನಿಕಲ್ ಅಸೋಸಿಯೇಟ್, ಆಪರೇಟರ್ ಹಾಗೂ ಕ್ವಾಲಿಟಿ ಇನ್ಸ್ಪೆಕ್ಟರ್ ಹುದ್ದೆಗಳ ಭರ್ತಿಗಾಗಿ ನವೆಂಬರ್ 20ರಂದು ನೇರ ಸಂದರ್ಶನ ಆಯೋಜಿಸಲಾಗಿದೆ.
ಐಟಿಐ, ಡಿಪ್ಲೊಮಾ ಹಾಗೂ ಯಾವುದೇ ಪದವಿ ಪೂರ್ಣಗೊಳಿಸಿರುವ ಅರ್ಹ ಅಭ್ಯರ್ಥಿಗಳು ಸಂದರ್ಶನದಲ್ಲಿ ಭಾಗವಹಿಸಬಹುದಾಗಿದೆ. ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ₹15,000 ರಿಂದ ₹20,000 ವರೆಗೆ ವೇತನ ನೀಡಲಾಗುವುದು.
ಆಸಕ್ತ ಅಭ್ಯರ್ಥಿಗಳು ನವೆಂಬರ್ 20ರಂದು ಬೆಳಿಗ್ಗೆ 10 ಗಂಟೆಗೆ ತಮ್ಮ ಬಯೋಡೇಟಾದೊಂದಿಗೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಡಿಡಿಪಿಐ ಬಸ್ ನಿಲ್ದಾಣದ ಬಳಿ, ವಾಸನ್ ಕಣ್ಣಿನ ಆಸ್ಪತ್ರೆ ಹತ್ತಿರ, ಮೂಲಮನೆ ಹೋಟೆಲ್ ಪಕ್ಕ, ಸೋಮೇಶ್ವರಪುರಂ 14ನೇ ಕ್ರಾಸ್, ತುಮಕೂರು–572102 ವಿಳಾಸದಲ್ಲಿ ನಡೆಯುವ ನೇರ ಸಂದರ್ಶನಕ್ಕೆ ಹಾಜರಾಗಬಹುದು.
ಹೆಚ್ಚಿನ ಮಾಹಿತಿಗಾಗಿ 0816-2278488, 8792669410 ಹಾಗೂ 7760174554 ದೂರವಾಣಿ ಸಂಖ್ಯೆಗಳನ್ನು ಸಂಪರ್ಕಿಸಬಹುದು ಎಂದು ಉದ್ಯೋಗಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವರದಿ: ಮಂಜುಸ್ವಾಮಿ ಎಂ.ಎನ್.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/CtZPUt7bwkaJkX2T6hAwZI
