ಹಾಸನ: ರಾಜ್ಯ ಕಾಂಗ್ರೆಸ್ ನಲ್ಲಿ ಕ್ಷಿಪ್ರ ರಾಜಕೀಯ ಬೆಳವಣಿಗಳ ಮನ್ಸೂಚನೆ ಸಿಕ್ಕಿದೆ, ಕಾಂಗ್ರೆಸ್ ಪಕ್ಷದಲ್ಲಿ ದಿನೇ ದಿನೇ ಒಳ ಜಗಳಗಳು ಹೆಚ್ಚಾಗಿವೆ ಎಂದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡಿಕೆಶಿ ದಿನೇ ದಿನೇ ಬಿಜೆಪಿಗೆ ಹತ್ತಿರವಾಗುತ್ತಿದ್ದಾರಾ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದರು.
ಇಶಾ ಫೌಂಡೇಶನ್ ಶಿವರಾತ್ರಿ ಹಬ್ಬದ ಪ್ರಯುಕ್ತ ಹಮ್ಮಿಕೊಂಡಿದ್ದ ಧಾರ್ಮಿಕ ಕಾರ್ಯಕ್ರಮದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಭಾಗಿಯಾಗಿದ್ದರು. ಆ ಕಾರ್ಯಕ್ರಮದಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸಹ ಪಾಲ್ಗೊಂಡಿದ್ದರು ಎಂದಷ್ಟೇ ಹೇಳಿದರು. ಡಿ.ಕೆ.ಶಿವಕುಮಾರ್ ಬಿಜೆಪಿಗೆ ಬರುವುದಿಲ್ಲ ಎಂದು ವಿಜಯೇಂದ್ರ ತಿಳಿಸಿದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4