ಬೆಂಗಳೂರು: ಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ ಬಂಧಿತರಾಗಿರುವ ನಟಿ ರನ್ಯಾ ರಾವ್ ಅವರ ಮೇಲೆ ಹಲ್ಲೆ ನಡೆಸಲಾಗಿದೆ ಎನ್ನುವ ಆರೋಪ ಕೇಳಿ ಬಂದಿದ್ದು, ಈ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ನಟಿಯ ಫೋಟೋ ವೈರಲ್ ಆಗಿದೆ.
ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಟಿಯನ್ನು ಬಂಧಿಸಿದ ಕೂಡಲೇ, ಊದಿಕೊಂಡ ಕಣ್ಣುಗಳು ಮತ್ತು ಮೂಗೇಟುಗಳಿರುವ ಅವರ ಫೋಟೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದ್ದು, ಇದು ವಿಮಾನ ನಿಲ್ದಾಣದಲ್ಲಿ ಬಂಧನದ ಸಮಯದಲ್ಲಿ ಅಥವಾ ನಂತರ ನಟಿಯ ಮೇಲೆ ಹಲ್ಲೆ ನಡೆದಿರಬಹುದು ಎಂಬ ಊಹಾಪೋಹಕ್ಕೆ ಕಾರಣವಾಗಿದೆ.
ಇನ್ನು ಈ ಬಗ್ಗೆ ಪ್ರತಿಕ್ರಿಯಿಸಿದ ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ ಚೌಧರಿ ಅವರು, ಹಲ್ಲೆ ಬಗ್ಗೆ ಅಧಿಕೃತವಾಗಿ ದೂರು ದಾಖಲಿಸದ ಹೊರತು ಆಯೋಗ ತನಿಖೆ ನಡೆಸಲು ಸಾಧ್ಯವಿಲ್ಲ. ವಾಸ್ತವವಾಗಿ, ಯಾರಾದರೂ ನಮಗೆ ದೂರು ನೀಡಬೇಕು. ಮಹಿಳಾ ಆಯೋಗವು ದೂರು ನೀಡಿದರೆ ತನಿಖೆ ನಡೆಸುತ್ತದೆ ಎಂದು ಅವರು ಹೇಳಿದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4