ಬೆಂಗಳೂರು: ಹುಲಿ ಉಗುರು ಧರಿಸಿದವರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಬೆಂಗಳೂರಿನ ಅರಣ್ಯ ಭವನ ಬಳಿ ವಾಟಾಳ್ ನಾಗರಾಜ್ ಪ್ರತಿಭಟನೆ ನಡೆಸಿದರು.
ಹುಲಿ ಚರ್ಮ ಬಣ್ಣದ ಶಾಲು ಧರಿಸಿ ವಾಟಾಳ್ ವಿನೂತನ ಪ್ರತಿಭಟನೆ ನಡೆಸುತ್ತಿದ್ದಾರೆ. ವನ್ಯಜೀವಿಗಳನ್ನು ರಕ್ಷಣೆ ಮಾಡುವಲ್ಲಿ ಅರಣ್ಯ ಇಲಾಖೆ ವಿಫಲವಾಗುತ್ತಿದೆ. ವನ್ಯಜೀವಿಗಳ ರಕ್ಷಣೆಗೆ ಅರಣ್ಯ ಇಲಾಖೆ ಮುಂದಾಗಬೇಕೆಂದು ಆಗ್ರಹಿಸಿದ್ದಾರೆ.


