ತುಮಕೂರು: ಬ್ಯಾಂಕ್ ನ ವಾಚ್ ಮ್ಯಾನ್ ನನ್ನು ಭೀಕರವಾಗಿ ಹತ್ಯೆ ಮಾಡಿ ದರೋಡೆ ಮಾಡಿರುವ ಘಟನೆ ತುಮಕೂರಿನ ನಾಗವಲ್ಲಿ ಗ್ರಾಮದಲ್ಲಿ ಭಾನುವಾರ ನಡೆದಿದ್ದು, ಬ್ಯಾಂಕ್ ನಲ್ಲಿದ್ದ ಹಣವನ್ನು ದರೋಡೆಕೋರರು ದೋಚಿದ್ದಾರೆ ಎಂದು ತಿಳಿದು ಬಂದಿದೆ.
55 ವರ್ಷ ವಯಸ್ಸಿನ ಸಿದ್ದಪ್ಪ ಹತ್ಯೆಗೀಡಾದ ವಾಚ್ ಮ್ಯಾನ್ ಆಗಿದ್ದು, ಇವರು ತುಮಕೂರು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಲ್ಲಿ ವಾಚ್ ಮ್ಯಾನ್ ಆಗಿ ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ. ಬ್ಯಾಂಕ್ ದರೋಡೆ ಮಾಡುವ ಉದ್ದೇಶದಿಂದ ಬಂದ ದರೋಡೆಕೋರರು ಸಿದ್ದಪ್ಪ ಅವರನ್ನು ಭೀಕರವಾಗಿ ಹತ್ಯೆ ಮಾಡಿದ್ದಾರೆ ಎಂದು ತಿಳಿದು ಬಂದಿದೆ.
ಘಟನಾ ಸ್ಥಳಕ್ಕೆ ತುಮಕೂರು ಜಿಲ್ಲಾ ಎಎಸ್ ಪಿ ರಾಹುಲ್ ಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಶ್ವಾನದಳದ ಸುಳಿವಿನ ಆಧಾರದಲ್ಲಿ ಪೊಲೀಸರು ತನಿಖೆ ನಡೆಸುತ್ತಿದ್ದು, ಆರೋಪಿಗಳ ಸುಳಿವಿಗಾಗಿ ಪೊಲೀಸರು ಜಾಲಾಡುತ್ತಿದ್ದಾರೆ.
ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com
ವಾಟ್ಸಾಪ್ ಗ್ರೂಪ್ ಸೇರಿ:
https://chat.whatsapp.com/E7Brl0d8zXCJogP6c6GRcZ
ಜಾಹೀರಾತುಗಳಿಗಾಗಿ ಸಂಪರ್ಕಿಸಿ: 97417 17700