ಬೆಂಗಳೂರು: ನೀರಿನ ದರ ಏರಿಕೆ ಮಾಡುವಂತೆ ಜಲಮಂಡಳಿ ಡಿಸಿಎಂ ಡಿ.ಕೆ.ಶಿವಕುಮಾರ್ ಅವರಿಗೆ ಮನವಿ ಸಲ್ಲಿಸಲು ಸಿದ್ಧತೆ ನಡೆಸಿದ್ದು, ನೀರಿನ ದರ ಏರಿಕೆಯಾಗುವ ಸಾಧ್ಯತೆಗಳಿವೆ ಎಂದು ಹೇಳಲಾಗಿದೆ.
ಕೆಲ ತಿಂಗಳ ಹಿಂದೆಯಷ್ಟೇ ಡಿಸಿಎಂ ಡಿ.ಕೆ.ಶಿವಕುಮಾರ್ ಕಾವೇರಿ ನೀರಿನ ದರ ಪರಿಷ್ಕರಣೆ ಮಾಡುವ ಬಗ್ಗೆ ಸುಳಿವು ನೀಡಿದ್ದರು. ಮುಂದಿನ ದಿನಗಳಲ್ಲಿ ನೀರಿನ ದರ ಪರಿಷ್ಕರಣೆ ಸಂಬಂಧ ಡಿಸಿಎಂ ಡಿಕೆ ಶಿವಕುಮಾರ್ ಸಭೆ ಕರೆಯಲಿದ್ದು, ದರ ಪರಿಷ್ಕರಣೆ ಪ್ರಸ್ತಾವನೆಗೆ ಸಂಪೂರ್ಣ ಬೆಂಬಲ ನೀಡುವಂತೆ ಎಲ್ಲ ಜನಪತ್ರಿನಿಧಿಗಳಿಗೆ ಜಲಮಂಡಳಿ ಅಧ್ಯಕ್ಷ ರಾಮ್ ಪ್ರಸಾದ್ ಮನವಿ ಮಾಡಿದ್ದಾರೆ ಎಂದು ವರದಿಗಳಿಂದ ತಿಳಿದು ಬಂದಿದೆ
ಜಲಮಂಡಳಿ ನೌಕರರು, ಸಿಬ್ಬಂದಿಗಳ ವೇತನ ಹೆಚ್ಚಳವಾಗಿದೆ. ಜಲಮಂಡಳಿಗೆ ಪ್ರತಿ ತಿಂಗಳು 81 ಕೋಟಿ ಹೊರೆಯಾಗುತ್ತಿದೆ, ಆದ್ದರಿಂದ ನೀರಿನ ದರ ಹೆಚ್ಚಳ ಮಾಡಲು ಸಿದ್ಧತೆ ನಡೆಸಲಾಗಿದೆ ಎನ್ನಲಾಗಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx