nammatumakuru

    Subscribe to Updates

    Get the latest creative news from FooBar about art, design and business.

    What's Hot

    ತುಮಕೂರು: ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ

    July 29, 2026

    ಹಡಪದ ಅಪ್ಪಣ್ಣರ ತತ್ವಾದರ್ಶಗಳು ಸಮಾಜಕ್ಕೆ ದಾರಿದೀಪ: ತಹಶೀಲ್ದಾರ್ ಮೋಹನಕುಮಾರಿ

    July 29, 2026

    ಸಂತಪೂರ ಗ್ರಾಮ ಪಂಚಾಯತಿಯಲ್ಲಿ ‘ನನ್ನ ಸ್ವತ್ತು ನನ್ನ ಹಕ್ಕು’ ಅಭಿಯಾನಕ್ಕೆ ಚಾಲನೆ

    July 29, 2026
    Facebook Twitter Instagram
    ಟ್ರೆಂಡಿಂಗ್
    • ತುಮಕೂರು: ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ
    • ಹಡಪದ ಅಪ್ಪಣ್ಣರ ತತ್ವಾದರ್ಶಗಳು ಸಮಾಜಕ್ಕೆ ದಾರಿದೀಪ: ತಹಶೀಲ್ದಾರ್ ಮೋಹನಕುಮಾರಿ
    • ಸಂತಪೂರ ಗ್ರಾಮ ಪಂಚಾಯತಿಯಲ್ಲಿ ‘ನನ್ನ ಸ್ವತ್ತು ನನ್ನ ಹಕ್ಕು’ ಅಭಿಯಾನಕ್ಕೆ ಚಾಲನೆ
    • ಡ್ರಗ್ಸ್ ಮುಕ್ತ ಕರ್ನಾಟಕಕ್ಕೆ ಸಂಕಲ್ಪ: ಕೊರಟಗೆರೆಯಲ್ಲಿ ಪೊಲೀಸ್ ಇಲಾಖೆಯಿಂದ ಬೃಹತ್ ಜಾಗೃತಿ ಅಭಿಯಾನ
    • ಕುಣಿಗಲ್: ಗ್ರಾಮ ದೇವತೆ ಜಾತ್ರಾ ಮಹೋತ್ಸವದ ಜಮಾ–ಖರ್ಚು ವಿವರ ಘೋಷಣೆ
    • ಬೀದರ್ ಜಿಲ್ಲೆಯನ್ನು ಬರಪೀಡಿತ ಎಂದು ಘೋಷಿಸಲು ಭಾಲ್ಕಿ ವಕೀಲರ ಸಂಘ ಆಗ್ರಹ
    • ಬಡವರಿಗೆ ಮಾಡುವ ಸಹಾಯ ದೇವರಿಗೆ ಸಾಲ ಕೊಟ್ಟಂತೆ: ಇಮ್ಯಾನುವೆಲ್ ದರ್ಬಾರೆ
    • ನೀಟ್ ಹಗರಣ ವಿರುದ್ಧದ ಒಂದು ತಿಂಗಳ ಐತಿಹಾಸಿಕ ಹೋರಾಟಕ್ಕೆ ಸಂದ ಜಯ: ತುಮಕೂರಿನಲ್ಲಿ AIDSO, AIMSS ವಿಜಯೋತ್ಸವ!
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಜೆಜೆಎಂ ಯೋಜನೆಯಿಂದಲೇ ನೀರಿನ ಸಮಸ್ಯೆ ಉಲ್ಬಣ: ಟಾಸ್ಕ್ ಫೋರ್ಸ್ ಸಭೆಯಲ್ಲಿ ಶಾಸಕ ಎಸ್.ಆರ್.ಶ್ರೀನಿವಾಸ್
    ಗುಬ್ಬಿ April 14, 2026

    ಜೆಜೆಎಂ ಯೋಜನೆಯಿಂದಲೇ ನೀರಿನ ಸಮಸ್ಯೆ ಉಲ್ಬಣ: ಟಾಸ್ಕ್ ಫೋರ್ಸ್ ಸಭೆಯಲ್ಲಿ ಶಾಸಕ ಎಸ್.ಆರ್.ಶ್ರೀನಿವಾಸ್

    By adminApril 14, 2026No Comments2 Mins Read
    s r shrinivas

    ಗುಬ್ಬಿ: ತಾಲೂಕಿನಲ್ಲಿ ಬೇಸಿಗೆಯಲ್ಲಿ ನೀರಿನ ಸಮಸ್ಯೆ ಹೆಚ್ಚಾಗಿ ಜಲ ಜೀವನ್ ಮಿಷನ್ ಯೋಜನೆಯಡಿ ನಡೆದ ಕಾಮಗಾರಿಗಳಿಂದ ಕಂಡು ಬರುತ್ತಿದೆ. ಎಲ್ಲೂ ಪೂರ್ಣವಾಗಿ ಕೆಲಸ ಮಾಡಿಲ್ಲ, ಪಂಚಾಯಿತಿಗೆ ಹಸ್ತಾಂತರ ಆಗಿಲ್ಲ. ಕಾಮಗಾರಿ ಅರ್ಧಕ್ಕೆ ನಿಂತ ಬಗ್ಗೆ ದೂರುಗಳು ಹೆಚ್ಚಾಗಿವೆ. ಬೆಸ್ಕಾಂ ಇಲಾಖೆಯ ವಿಳಂಬ ನೀತಿ ನೀರಿನ ಸಮಸ್ಯೆಗೆ ಕಾರಣವಾಗಿದೆ ಎಂದು ಶಾಸಕ ಎಸ್.ಆರ್.ಶ್ರೀನಿವಾಸ್ ಬೇಸರ ವ್ಯಕ್ತಪಡಿಸಿದರು.

    ಪಟ್ಟಣದ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ನಡೆದ ಟಾಸ್ಕ್ ಫೋರ್ಸ್ ಸಭೆಯಲ್ಲಿ ಮಾತನಾಡಿದ ಅವರು, ಶುದ್ಧ ಕುಡಿಯುವ ನೀರಿನ ಘಟಕವನ್ನು ಸ್ಥಳೀಯ ಗ್ರಾಮ ಪಂಚಾಯಿತಿ ಹಸ್ತಾಂತರಕ್ಕೆ ಪಡೆಯುವ ಮುನ್ನ ಸುಸ್ಥಿತಿಯಲ್ಲಿದೆಯೇ ಎಂಬುದನ್ನು ಗಮನಿಸಬೇಕು. ಹಾಗೆಯೇ ವಿಜಿನಿ ಗಡುವು ಮುಗಿದಿದೆಯೇ ಗಮನಿಸಿ ಮುಂದಿನ ಕ್ರಮ ಕೈಗೊಳ್ಳಿ. ಸರ್ಕಾರಿ ಜಾಗ ವಶಕ್ಕೆ ಪಡೆದು ನೀರಿನ ಟ್ಯಾಂಕ್ ನಿರ್ಮಿಸಲು ಅನುವು ಮಾಡಬೇಕು. ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ತಲೆದೋರದಂತೆ ಮುನ್ನೆಚ್ಚರಿಕೆ ಕ್ರಮ ವಹಿಸಬೇಕು ಎಂದು ಸೂಚನೆ ನೀಡಿದರು.

    ಕೊಳವೆಬಾವಿ ಅವಶ್ಯವಿದ್ದಲ್ಲಿ ಕೊರೆಯಲಾಗುವುದು. ವಿದ್ಯುತ್ ಸಂಪರ್ಕ ಎಲ್ಲಿಯೂ ವಿಳಂಬವಾಗದಂತೆ ಬೆಸ್ಕಾಂ ಅಧಿಕಾರಿಗಳು ನಿಗಾ ವಹಿಸಬೇಕು. ಸಮಸ್ಯೆ ಕಂಡಲ್ಲಿ ಮೊದಲ ಆದ್ಯತೆ ನೀರಿಗೆ ನೀಡಿ ತಕ್ಷಣ ಸಮಸ್ಯೆ ಬಗೆಹರಿಸಬೇಕು. ಅರಣ್ಯ ಪ್ರದೇಶದ ಜಾಗವೆಂದು ಕೆಲವು ಸರ್ಕಾರಿ ಯೋಜನೆಗೆ ಅಡ್ಡಿಯಾಗಿದೆ. ಸರ್ವೆ ನಡೆಸಿ ಅರಣ್ಯ ಅಲ್ಲದ್ದನ್ನು ಬಿಟ್ಟುಕೊಡಬೇಕು. ಸರ್ಕಾರಿ ಶಾಲಾ ಆವರಣದಲ್ಲಿ ಅಂಗನವಾಡಿ ಕಟ್ಟಡ ನಿರ್ಮಿಸಲು ಸರ್ಕಾರ ಆದೇಶ ನೀಡಿದೆ. ಅದರಂತೆ ತಾಲೂಕಿನಲ್ಲಿ 38 ಶಾಲೆಯಲ್ಲಿ ಕಾಮಗಾರಿ ನಡೆಯಲಿದೆ.

    ಮಣ್ಣಮ್ಮ ದೇವಸ್ಥಾನದ ಸಮೀಪದಲ್ಲಿ ನಿವೇಶನ ಎಂದು ಹೇಳಿಕೊಂಡೇ ಅರ್ಧ ಎಕರೆ ಒತ್ತುವರಿ ಮಾಡಿರುತ್ತಾರೆ. ಎಲ್ಲವನ್ನೂ ತೆರವು ಮಾಡಿ ಅರ್ಹರಿಗೆ ಸೈಟ್ ನೀಡಬೇಕು. ತಾಲೂಕಿನ ಎಲ್ಲಾ 34 ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಲ್ಲಾ ಗ್ರಾಮದ ಸಮಸ್ಯೆ ಆಲಿಸಿ ಸ್ಥಳೀಯ ಗ್ರಾಮ ಆಡಳಿತಾಧಿಕಾರಿಗಳು ಹಾಗೂ ಅಭಿವೃದ್ಧಿ ಅಧಿಕಾರಿಗಳ ಜೊತೆ ಸುದೀರ್ಘ ಸಭೆ ನಡೆಸಿ ನೀರು ಮತ್ತು ವಿದ್ಯುತ್ ಸಮಸ್ಯೆಗೆ ಸೂಕ್ತ ಪರಿಹಾರ ಸೂಚಿಸಿದರು.

    ಸಭೆಯಲ್ಲಿ ತಹಶೀಲ್ದಾರ್ ಆರತಿ.ಬಿ, ತಾಪಂ ಇಒ ರಂಗನಾಥ್, ಪಪಂ ಮುಖ್ಯಾಧಿಕಾರಿ ಮಂಜುಳಾದೇವಿ, ಕುಡಿಯುವ ನೀರು ನೈರ್ಮಲ್ಯ ಇಲಾಖೆಯ ಎಇಇ ನಾಗೇಂದ್ರಪ್ಪ ಸೇರಿದಂತೆ ತಾಲೂಕು ಮಟ್ಟದ ಅಧಿಕಾರಿಗಳು ಇದ್ದರು.

    “ಕೋಟಿಗಟ್ಟಲೆ ರೂಪಾಯಿ ವೆಚ್ಚದ ಹೋಬಳಿ ಕೇಂದ್ರದ ಜೆಜೆಎಂ ಕಾಮಗಾರಿಗಳು ಹಸ್ತಾಂತರ ಆಗದೇ ತನಿಖೆಗೆ ಒಳಪಟ್ಟಿವೆ ಎಂಬುದು ಬೇಸರ ಮೂಡಿಸಿದೆ. ಈ ಮಹತ್ವಾಕಾಂಕ್ಷಿ ಯೋಜನೆ ಆರಂಭದಲ್ಲೇ ದುರಸ್ತಿಗೆ ಬಂದಿವೆ. ಎರಡೂವರೆ ಕೋಟಿ ರೂ. ಗಳನ್ನು ರಿಪೇರಿಗೆ ಕೇಳಿರುವುದು ಅಚ್ಚರಿ ತಂದಿದೆ. ನೀರಿಗೆ ಸಂಬಂಧಪಟ್ಟ ಇಲಾಖೆಗಳು ಸಹಯೋಗದಲ್ಲಿ ಕೆಲಸ ಮಾಡಬೇಕಿದೆ. ಸಣ್ಣಪುಟ್ಟ ದೂರುಗಳು ಸ್ಥಳೀಯ ಪಿಡಿಒಗಳು ಹಾಗೂ ಗ್ರಾಮ ಆಡಳಿತಾಧಿಕಾರಿಗಳು ಹೇಳುತ್ತಾರೆ. ಅದಕ್ಕೂ ಸಭೆ ನಡೆಸಿಯೇ ಸರಿಪಡಿಸುವ ಸ್ಥಿತಿ ಎದುರಾಗಿದೆ. ಟಿಸಿ ಚಾರ್ಜ್ ಮಾಡಿಲ್ಲ, ಪೈಪ್ ಲೈನ್ ಅರ್ಧಕ್ಕೆ ನಿಂತಿದೆ, ಪಂಪ್ ಮೋಟಾರ್ ಅಳವಡಿಸಿಲ್ಲ. ಹೀಗೆ ಇಲಾಖೆ ಹಂತದಲ್ಲಿ ಆಗುವ ಕೆಲಸವನ್ನು ತುರ್ತು ಸಭೆಯಲ್ಲಿ ಚರ್ಚಿಸುವ ವಾತಾವರಣ ನೋಡಿದರೆ, ಅಧಿಕಾರಿ ವರ್ಗ ಯಾವ ಮಟ್ಟದಲ್ಲಿ ಕೆಲಸ ಮಾಡುತ್ತಿದೆ?”

    — ಎಸ್.ಆರ್. ಶ್ರೀನಿವಾಸ್, ಶಾಸಕರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಮೊರಾರ್ಜಿ ವಸತಿ ಶಾಲೆಯಲ್ಲಿ ಸೌಲಭ್ಯಗಳ ಪರಿಶೀಲನೆ ನಡೆಸಿದ ಜಿಲ್ಲಾಧಿಕಾರಿ ಶುಭಕಲ್ಯಾಣ್

    July 20, 2026

    ಮಾದಕ ವ್ಯಸನಗಳಿಗೆ ಒಳಗಾದರೆ ನಿಮ್ಮ ಇಡೀ ಜೀವನವೇ ನಾಶವಾಗುತ್ತದೆ: ಜನಜಾಗೃತಿ ವೇದಿಕೆ ಸದಸ್ಯ ಶಿವಕುಮಾರ್

    July 14, 2026

    ಗುಬ್ಬಿ: ಜು.13ರಂದು ಎಸ್ ಸಿ–ಎಸ್ ಟಿ ಕುಂದುಕೊರತೆ ಸಭೆ

    July 10, 2026

    Leave A Reply Cancel Reply

    Our Picks

    NEET ವಿವಾದ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

    July 25, 2026

    ನೀಟ್ ಅಕ್ರಮ: ಕಪ್ಪು ಪಟ್ಟಿ ಧರಿಸಿ ಮೌನ ಪ್ರತಿಭಟನೆ: ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ

    July 21, 2026

    ಕೇಂದ್ರ ಸರ್ಕಾರವು ತಕ್ಷಣವೇ ಸೋನಮ್ ವಾಂಗ್ಚುಕ್ ಜೊತೆ ಚರ್ಚಿಸಲು ಆಗ್ರಹಿಸಿ ರಾಷ್ಟ್ರಪತಿಯವರಿಗೆ ಮನವಿ: ತುಮಕೂರಿನಲ್ಲಿ ಆನ್‌ ಲೈನ್ ಸಹಿ ಸಂಗ್ರಹ

    July 18, 2026

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ತುಮಕೂರು: ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ

    July 29, 2026

    ತುಮಕೂರು: ಜಿಲ್ಲೆಯ ಕ್ರೈಸ್ ನ ಅಧೀನದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಮಧುಗಿರಿ ತಾಲೂಕು ಬಡವನಹಳ್ಳಿ ಮೊರಾರ್ಜಿ ದೇಸಾಯಿ ವಸತಿ ವಿಜ್ಞಾನ ಪದವಿ…

    ಹಡಪದ ಅಪ್ಪಣ್ಣರ ತತ್ವಾದರ್ಶಗಳು ಸಮಾಜಕ್ಕೆ ದಾರಿದೀಪ: ತಹಶೀಲ್ದಾರ್ ಮೋಹನಕುಮಾರಿ

    July 29, 2026

    ಸಂತಪೂರ ಗ್ರಾಮ ಪಂಚಾಯತಿಯಲ್ಲಿ ‘ನನ್ನ ಸ್ವತ್ತು ನನ್ನ ಹಕ್ಕು’ ಅಭಿಯಾನಕ್ಕೆ ಚಾಲನೆ

    July 29, 2026

    ಡ್ರಗ್ಸ್ ಮುಕ್ತ ಕರ್ನಾಟಕಕ್ಕೆ ಸಂಕಲ್ಪ: ಕೊರಟಗೆರೆಯಲ್ಲಿ ಪೊಲೀಸ್ ಇಲಾಖೆಯಿಂದ ಬೃಹತ್ ಜಾಗೃತಿ ಅಭಿಯಾನ

    July 29, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.