ಬೆಂಗಳೂರು: ನೀರು ಹರಿಸದಿದ್ರೆ ಆದೇಶ ಉಲ್ಲಂಘನೆ ಅಂತಾ ಸಚಿವರು ಹೇಳಿದ್ದಾರೆ. ಜಲಸಂಪನ್ಮೂಲ ಸಚಿವರು ಜನರ ಜೀವದ ಜೊತೆ ಚೆಲ್ಲಾಟವಾಡುತ್ತಿದ್ದಾರೆ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಕಿಡಿಕಾರಿದ್ದಾರೆ.
ತಮಿಳುನಾಡಿಗೆ ಕಾವೇರಿ ನೀರು ಬಿಡಲು CWMA ಆದೇಶ ವಿಚಾರ ಸಂಬಂಧ ರಾಮನಗರದಲ್ಲಿ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಪ್ರತಿಕ್ರಿಯೆ ನೀಡಿದರು. ಹಿಂದಿನ ಸರ್ಕಾರ ನೀರು ಬಿಟ್ಟಿಲ್ಲ ಅಂತಾ ಹೇಳಬಹುದು. ಹೌದು ನೀರು ಬಿಟ್ಟಿದ್ದಾರೆ ಅನಿವಾರ್ಯತೆ ಇದೆ ಅದನ್ನು ಒಪ್ಪುತ್ತೇನೆ. ಆದರೆ ಮಳೆ ಕೊರತೆಯಿಂದ ನಮ್ಮ ರೈತರ ಬೆಳೆ ನಾಶವಾಗ್ತಿದೆ.
ರಾಜ್ಯ ಸರ್ಕಾರದ ನಡೆ ಖಂಡಿಸಿ ರೈತರು ಪ್ರತಿಭಟನೆ ಮಾಡ್ತಿದ್ದಾರೆ. ಕಾವೇರಿ ನದಿ ಸಂಬಂಧ ಸಭೆಗಳಲ್ಲಿ ತಮಿಳುನಾಡಿನ 10-15 ಅಧಿಕಾರಿಗಳು ಭಾಗಿಯಾಗ್ತಾರೆ. ಆದರೆ ನಮ್ಮ ಅಧಿಕಾರಿಗಳು ಒಬ್ಬರೋ ಇಬ್ಬರೂ ಕಾಟಾಚಾರಕ್ಕೆ ಭಾಗಿಯಾಗುತ್ತಿದ್ದಾರೆ ಎಂದರು.


