ನಾಳೆ ನಗರದ ಹಲವೆಡೆ ನೀರಿನ ವ್ಯತ್ಯಯ ಉಂಟಾಗಲಿದೆ ಎಂದು ಬಿಡಬ್ಲ್ಯೂಎಸ್ಎಸ್ ಬಿ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ. ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಕೆಂಗೇರಿ ಹೊರವಲಯದ ರಸ್ತೆಯಲ್ಲಿರುವ ಅಂಬೇಡ್ಕರ್ ಕಾಲೇಜ್ ಕವಾಟ ದುರಸ್ತಿ ಕಾಮಗಾರಿ ಕೈಗೊಂಡಿರುವ ಹಿನ್ನೆಲೆ ಜುಲೈ 13 ರಂದು (ಗುರುವಾರ) ಬೆಳಗ್ಗೆ 8ರಿಂದ ಸಂಜೆ 4ರವರೆಗೆ ಸ್ಟೇಜ್ -4 ಫೇಸ್-1 ಎರಡು ಪಂಪುಗಳು ತುರ್ತಾಗಿ ಸ್ಥಗಿತಗೊಳ್ಳಲಿದೆ. ಮುಂಜಾಗ್ರತ ಕ್ರಮವಾಗಿ ಅಗತ್ಯವಿರುವ ನೀರನ್ನು ಶೇಖರಿಸಿಟ್ಟುಕೊಳ್ಳುವಂತೆ ಜಲಮಂಡಳಿತ ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದೆ.
ಸ್ಟೇಜ್ -4 ಫೇಸ್ -1 ನ ಎರಡು ಪಂಪ್‌ಗಳ ದುರಸ್ತಿ ಮಾಡುವುದರಿಂದ ದಿನವಿಡೀ ನೀರು ಸರಬರಾಜು ಸ್ಥಗಿತಗೊಳ್ಳಲಿದೆ. ಹೀಗಾಗಿ ಸಾರ್ವಜನಿಕರು ಇಂದೇ ಅಗತ್ಯವಿರುವಷ್ಟು ನೀರು ಶೇಖರಿಸಿಕೊಟ್ಟುಕೊಳ್ಳುವಂತೆ ತಿಳಿಸಿದೆ.
ರಾಜರಾಜೇಶ್ವರಿನಗರ, ಕೆಂಗೇರಿ, ವಿಜಯನಗರ, ಗೋವಿಂದರಾಜನಗರ, ಲಗ್ಗೆರೆ, ಕಾಮಾಕ್ಷಿಪಾಳ್ಯ, ಪೀಣ್ಯ, ದಾಸರಹಳ್ಳಿ, ಜಾಲಹಳ್ಳಿ, ಯಲಹಂಕ, ಹೆಬ್ಬಾಳ, ಮಹಾಲಕ್ಷ್ಮೀ ಲೇಔಟ್, ಬಸವೇಶ್ವರನಗರ, ನಂದಿನಿ ಲೇಔಟ್ ಹಾಗೂ ಸುತ್ತಮುತ್ತಲ ಪ್ರದೇಶಗಳಲ್ಲಿ ಸ್ಥಗಿತಗೊಳ್ಳಲಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


