ಕೇರಳ: ವಯನಾಡಿನಲ್ಲಿ ಸಂಭವಿಸಿದ ಭೀಕರ ಪರ್ವತ ಸ್ಫೋಟಕ್ಕೆ ಇಡೀ ದೇಶವೇ ಕಣ್ಣೀರು ಹಾಕಿದೆ. 200ಕ್ಕೂ ಅಧಿಕ ಜನರು ಸಾವನ್ನಪ್ಪಿದ್ದಾರೆ. ನೂರಾರು ಕುಟುಂಬಗಳು ತಮ್ಮವರನ್ನು ಕಳೆದುಕೊಂಡು ನಿರಾಶ್ರಿತರ ಕೇಂದ್ರದಲ್ಲಿ ಆಶ್ರಯ ಪಡೆದುಕೊಂಡಿದ್ದಾರೆ.
ಆಂಬುಲೆನ್ಸ್ ಗಳು ಬಂದಾಗ ಕಳೆದುಕೊಂಡವರನ್ನು ಹುಡುಕುವವರ ದೃಶ್ಯ ಎಂಥವರ ಕರುಳು ಹಿಂಡುವಂತಿದೆ. ಮೃತದೇಹಗಳ ಸಂಖ್ಯೆ ಹೆಚ್ಚಾಗುತ್ತಿರುವುದರಿಂದಾಗಿ ಮಲ್ಪಾಡಿಯಲ್ಲಿನ ಸರ್ಕಾರಿ ಆಸ್ಪತ್ರೆಯ ಶವಾಗಾರವನ್ನು ತಾತ್ಕಾಲಿಕವಾಗಿ ಸಭಾಂಗಣಕ್ಕೆ ಶಿಫ್ಟ್ ಮಾಡಲಾಗಿದೆ. ಸ್ಮಶಾನಗಳಲ್ಲಿ ಸಾಮೂಹಿಕವಾಗಿ ಅಂತ್ಯಸಂಸ್ಕಾರ ಮಾಡುತ್ತಿರುವುದು ಕಣ್ಣೀರು ತರಿಸುವಂತಿದೆ.
ನದಿಗಳಲ್ಲಿ ಕೊಚ್ಚಿಕೊಂಡು ಹೋಗುತ್ತಿರುವ ಮೃತದೇಹದಿಂದ ಬೇರ್ಪಟ್ಟ ದೇಹದ ಭಾಗಗಳು ಇದೆಲ್ಲವೂ ವಯನಾಡಿನ ಭೂಕುಸಿತ ಸಂಭವಿಸಿದ ಪ್ರದೇಶದ ಸದ್ಯದ ಪರಿಸ್ಥಿತಿಯಾಗಿದೆ.
ಕೆಲವು ಕುಟುಂಬಗಳು ತಮ್ಮ ಕನಸಿನ ಮನೆ, ವಾಹನ ಆಸ್ತಿ ಎಲ್ಲವನ್ನು ಕಳೆದುಕೊಂಡು ಬರಿಗೈಯಲ್ಲಿ ನಿಂತು ಮುಂದೇನು ? ಎಂದು ಕಣ್ಣೀರು ಇಡುತ್ತಿದ್ದಾರೆ. ಸಾಕು ಪ್ರಾಣಿಗಳು ತಮ್ಮನ್ನು ಪ್ರೀತಿಯಿಂದ ಸಾಕಿದ ಯಜಮಾನರನ್ನು ಹುಡುಕುತ್ತಿರುವುದು ಭೂಕುಸಿತ ಸಂಭವಿಸಿದ ಪ್ರದೇಶದಲ್ಲಿ ಕಾಣಬಹುದು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296