ತುಮಕೂರು: ಭಕ್ತರ ಪಾಲಿಗೆ ನಡೆದಾಡುವ ದೇವರು ಎನಿಸಿಕೊಂಡಿದ್ದ ಪರಮಪೂಜ್ಯ ಶಿವಕುಮಾರ ಶ್ರೀಗಳ ಜಯಂತೋತ್ಸವ ಇಂದು ಇಡೀ ನಾಡಿನಾದ್ಯಂತ ಅರ್ಥ ಪೂರ್ಣವಾಗಿ ಆಚರಣೆ ಮಾಡಲಾಗ್ತಿದೆ. ಅವರು ತೊರಿಸಿಕೊಟ್ಟ ಮಾರ್ಗದರ್ಶನದಂತೆ ಎಲ್ಲರು ನಡೆದುಕೊಳ್ತಿದ್ದೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ತಿಳಿಸಿದರು.
ತುಮಕೂರಿನ ಸಿದ್ದಗಂಗಾ ಮಠದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಎರಡು ಪ್ರಮುಖ ಹೋರಾಟ ಕೈಗೊಂಡಿದ್ದೇವೆ. ಎರಡು ಹಂತದ ಹೋರಾಟ ನಡೆಸುತ್ತೇವೆ. ರಾಜ್ಯದ ಸರ್ಕಾರದ ನೀತಿ ಖಂಡಿಸಿ, ಬೆಲೆ ಏರಿಕೆ ಖಂಡಿಸಿ ಪ್ರತಿಭಟನೆ ನಡೆಸುವುದಾಗಿ ಅವರು ತಿಳಿಸಿದರು.
ಹಾಲು ಪೆಟ್ರೋಲ್ ನೀರು ವಿದ್ಯುತ್ ದರ ಜಾಸ್ತಿ ಆಗಿದೆ. ಜನ ಸಾಮಾನ್ಯರಿಗೆ ಬರೆ ಎಳೆದಿದ್ದಾರೆ. ಎರಡನೇ ಹಂತದ ಹೋರಾಟ.ಏ 7ಕ್ಕೆ ನಡೆಯಲಿದೆ. ಬೆಲೆ ಏರಿಕೆ ಕುರಿತು ಅಹೋರಾತ್ರಿ ಧರಣಿ ನಡೆಯಲಿದೆ ಎಂದರು.
ಎರಡನೇ ಹಂತದ ಹೋರಾಟ ಮುಸ್ಲಿಮರಿಗೆ ಕೊಟ್ಟ ಮೀಸಲಾತಿ ವಿರುದ್ದ ಹಾಗೂ ಎಸ್ಸಿ ಎಸ್ಟಿ ಹಣ ದುರುಪಯೋಗ ಮಾಡಿದುರ ಕುರಿತು ಹೋರಾಟ ಎಂದು ತಿಳಿಸಿದರು.
ಮೈಸೂರಿನಿಂದ ಜನ ಆಕ್ರೋಶ ಯಾತ್ರೆ ಆರಂಭಗೊಳ್ಳಲಿದೆ. ಏಪ್ರಿಲ್ 7 ರಿಂದ ಮೈಸೂರಿನ ಚಾಮುಂಡಿ ದೇವಿಯ ಆಶೀರ್ವಾದ ಪಡೆದು ಯಾತ್ರೆ ಆರಂಭ ಮಾಡಲಿದ್ದೇವೆ ಎಂದು ತಿಳಿಸಿದರು.
ಇನ್ನೂ ವಿಜಯೇಂದ್ರ ವಿರುದ್ದ ಯತ್ನಾಳ್ ಆರೋಪ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಅವರು ಫ್ರೀ ಆಗಿದ್ದಾರೆ, ಏನು ಮಾತಾಡಲಿ… ಅದಕ್ಕೆ ನಾನು ತಲೆ ಕೆಡಿಸಿಕೊಳ್ಳಲ್ಲ. ಆದರೆ ನಾವೆಲ್ಲ ಒಟ್ಟಾಗಿ ಜನ ವಿರೋಧಿ ಸರ್ಕಾರದ ವಿರುದ್ದ ಹೋರಾಡುತ್ತೇವೆ ಎಂದ ಅವರು, ಮನುಷ್ಯರು ಸೇದುವ ಗಾಳಿ ಬಿಟ್ಟು ಸಿದ್ದರಾಮಯ್ಯ ಸರ್ಕಾರ ಎಲ್ಲದಕ್ಕೂ ತೆರಿಗೆ ಹಾಕುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4