nammatumakuru

    Subscribe to Updates

    Get the latest creative news from FooBar about art, design and business.

    What's Hot

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026

    ಕೊಡಗಿನಲ್ಲಿ ಭೀಕರ ರಸ್ತೆ ಅಪಘಾತ: ಚಲನಚಿತ್ರ ನಟ ಹರೀಶ್ ಸ್ಥಳದಲ್ಲೇ ಸಾವು

    April 12, 2026

    ಬೆಳಗಾವಿ: ಪ್ರಿಯಕರನ ಜೊತೆ ಸೇರಿ ಪತಿಯನ್ನೇ ಹತ್ಯೆ ಮಾಡಿದ ಪತ್ನಿ; ಸಿನಿಮೀಯ ಮಾದರಿಯಲ್ಲಿ ಕೊಲೆ

    April 12, 2026
    Facebook Twitter Instagram
    ಟ್ರೆಂಡಿಂಗ್
    • ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ
    • ಕೊಡಗಿನಲ್ಲಿ ಭೀಕರ ರಸ್ತೆ ಅಪಘಾತ: ಚಲನಚಿತ್ರ ನಟ ಹರೀಶ್ ಸ್ಥಳದಲ್ಲೇ ಸಾವು
    • ಬೆಳಗಾವಿ: ಪ್ರಿಯಕರನ ಜೊತೆ ಸೇರಿ ಪತಿಯನ್ನೇ ಹತ್ಯೆ ಮಾಡಿದ ಪತ್ನಿ; ಸಿನಿಮೀಯ ಮಾದರಿಯಲ್ಲಿ ಕೊಲೆ
    • ಗಾನ ಕೋಗಿಲೆ ಆಶಾ ಭೋಂಸ್ಲೆ ನಿಧನ: ಸಪ್ತ ದಶಕಗಳ ಗಾಯನ ಪಯಣ ಅಂತ್ಯ
    • ತಿಪಟೂರಿನ ಟೈಮ್ ಕಾಲೇಜಿಗೆ ನೂರಕ್ಕೆ ನೂರು ಫಲಿತಾಂಶ: ರಾಜ್ಯಕ್ಕೆ ನಾಲ್ಕನೇ ಸ್ಥಾನ ಪಡೆದ ವಿದ್ಯಾರ್ಥಿನಿ ರಶ್ಮಿಗೆ 1 ಲಕ್ಷ ರೂ. ಬಹುಮಾನ ಘೋಷಣೆ
    • ಊಹಾ ಪತ್ರಿಕೋದ್ಯಮ ಅತ್ಯಂತ ಅಪಾಯಕಾರಿ: ಸಿಎಂ ಸಿದ್ದರಾಮಯ್ಯ
    • ಮನೆ ಮುಂದೆ ನಿಲ್ಲಿಸಿದ್ದ ವಾಹನಗಳಿಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು: ಕಾರು, ಬೈಕ್ ಗಳು ಸುಟ್ಟು ಭಸ್ಮ
    • ಎನ್‌ ಎಸ್‌ ಎಸ್ ವಿದ್ಯಾರ್ಥಿಗಳು ನಾಯಕತ್ವ ಮನೋಭಾವ ಬೆಳೆಸಿಕೊಳ್ಳಿ: ಈರಪ್ಪ ನಾಯಕ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಸ್ವಾತಂತ್ರ್ಯದ  ನೆರಳಿನಲ್ಲಿ ಬದುಕುತ್ತಿರುವ ನಾವುಗಳು ಸ್ವಚ್ಚಂದದ ಹಕ್ಕಿಗಳು: ತಹಶೀಲ್ದಾರ್ ಕೆ. ಮಂಜುನಾಥ್
    ಕೊರಟಗೆರೆ August 17, 2025

    ಸ್ವಾತಂತ್ರ್ಯದ  ನೆರಳಿನಲ್ಲಿ ಬದುಕುತ್ತಿರುವ ನಾವುಗಳು ಸ್ವಚ್ಚಂದದ ಹಕ್ಕಿಗಳು: ತಹಶೀಲ್ದಾರ್ ಕೆ. ಮಂಜುನಾಥ್

    By adminAugust 17, 2025No Comments2 Mins Read

    ಕೊರಟಗೆರೆ: ಸ್ವಾತಂತ್ರ್ಯ ಭಾರತದಲ್ಲಿ ಇಂದು ನಾವು ಬದುಕಿದ್ದೇವೆ ಎಂದರೆ ಸ್ವಾತಂತ್ರ್ಯ ಪೂರ್ವದ ಬ್ರಿಟಿಷ್ ವಸಾಹತುಶಾಹಿಯ ಕಪಿಮುಷ್ಠಿಯಿಂದ ನಲುಗಿ ನರಳಿದಂತಹ ಸಹಸ್ರಾರು ಹಿರಿಯ ಜೀವಗಳ ಹಾಗೂ ಸ್ವಾತಂತ್ರ್ಯ ಹೋರಾಟಗಾರರ ಬಲಿದಾನವೇ ಕಾರಣ ಎಂದು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಅಧ್ಯಕ್ಷ ಕೆ.ಮಂಜುನಾಥ್ ತಿಳಿಸಿದರು.

    ನಗರದ ಜೂನಿಯರ್ ಕಾಲೇಜು ಮೈದಾನದಲ್ಲಿ ತಾಲ್ಲೂಕು ಆಡಳಿತ, ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಆಯೋಜಿಸಲಾದ 79ನೇ ಭಾರತ  ಸ್ವಾತಂತ್ರ್ಯ ದಿನಾಚರಣೆಯಲ್ಲಿ ಧ್ವಜರೋಹಣ ನೆರವೇರಿಸಿ ಅಮೃತ ಮಹೋತ್ಸವ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದರು.


    Provided by
    Provided by

    ಸ್ವಾತಂತ್ರ್ಯದ ನೆರಳಿನಲ್ಲಿ ಬದುಕುತ್ತಿರುವ ನಾವು ನೀವೆಲ್ಲರೂ ಸ್ವಚ್ಛಂದದ ಸ್ವಾತಂತ್ರ್ಯ ಹಕ್ಕಿಗಳು. ಸ್ವತಂತ್ರ ಕೇವಲ ಬದುಕುವುದಕ್ಕೋಸ್ಕರ ಅಲ್ಲ. ಸಂವಿಧಾನದ ಆಶಯದಲ್ಲಿ ದೇಶದ ಘನತೆ, ಗೌರವ, ಸಂಸ್ಕಾರ, ಸಂಪ್ರದಾಯ, ಜಲ, ನೆಲವನ್ನು ರಕ್ಷಿಸುವುದಲ್ಲದೇ ನಾಡಿನ ಪ್ರಗತಿ–ಅಭಿವೃದ್ಧಿಗೆ ಶ್ರಮಿಸುವುದು ನಮ್ಮ ನಿಮ್ಮೆಲ್ಲರಾ ಆಧ್ಯ ಕರ್ತವ್ಯ. ಪ್ರಜಾಪ್ರಭುತ್ವದ ಸ್ಥಿರ ಪ್ರಗತಿಯು ಸಾಮಾಜಿಕ ಪ್ರಜಾಪ್ರಭುತ್ವದ ಬಲವರ್ತನೆಯ ಕಡೆಗೆ ಸಾಧಿಸಿದ ಪ್ರಗತಿಗೆ ಸಾಕ್ಷಿಯಾಗಿದೆ ಎಂದು ಹೇಳಿದರು.

    ಸ್ವಾತಂತ್ರ್ಯ ಬಂದು ೭೯ವರ್ಷ ಪೂರೈಸಿದರೂ ದೇಶದಲ್ಲಿ ಜಾತಿ ವ್ಯವಸ್ಥೆಯ ಆಧಾರದಲ್ಲಿ ಅಪರಾಧಗಳು ನಡೆಯುತ್ತಿರುವುದು ವಿಷಾಧನೀಯ. ೧೯ನೇ ಶತಮಾನದಲ್ಲಿ ಮಹಿಳೆಯರ ಕುರಿತಾಗಿ ಇದ್ದಂತಹ ಅನಿಷ್ಟ ಪದ್ಧತಿಗಳಿಗೆ ಕಡಿವಾಣ ಹಾಕಿರುವುದೇ ವಿಶ್ವದ ಅತಿದೊಡ್ಡ ಭಾರತದ ಸಂವಿಧಾನ. 2023– 24 ನೇ ಸಾಲಿನಿಂದ ಭಾರತವು ವೇಗವಾಗಿ ಬೆಳೆಯುತ್ತಿರುವ ಪ್ರಮುಖ ಆರ್ಥಿಕತೆಗಳಲ್ಲಿ ಒಂದಾಗಿದೆ. ಈ ಮೂಲಕ ಭಾರತವು ವಿಶ್ವದ ಐದನೇ ಅತಿದೊಡ್ಡ ಆರ್ಥಿಕತೆಯಾಗಿ ಹೊರಹೊಮ್ಮಿದ್ದರೆ ಕರ್ನಾಟಕ ಭಾರತದಲ್ಲೇ ಅತಿ ಹೆಚ್ಚು ತಲಾದಾಯ ಹೊಂದಿರುವ ದೇಶದ ಎರಡನೇ ರಾಜ್ಯವಾಗಿದೆ ಎಂದರು.

    ವಿವಿಧ ಕ್ಷೇತ್ರದ ಸಾಧಕರಿಗೆ ಗೌರವ:

    79ನೇ ಸ್ವಾತಂತ್ರೋತ್ಸವ ಸಂಭ್ರಮದಲ್ಲಿ ಭಾರತದ ಸೇನೆಯಲ್ಲಿ, ಪೊಲೀಸ್ ಇಲಾಖೆಯಲ್ಲಿ, ಮಾಧ್ಯಮ ಕ್ಷೇತ್ರದಲ್ಲಿ ಹಾಗೂ ನಗರದ ಸ್ವಚ್ಛತೆಯಲ್ಲಿ ನಿಷ್ಠೆಯಿಂದ ಪ್ರಮಾಣ ಕ ಸೇವೆ ಸಲ್ಲಿಸುತ್ತಿರುವ ಪೌರಕಾರ್ಮಿಕ ಮಹಿಳೆಗೆ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಗೌರವಿಸಿ ನೆನಪಿನ ಕಾಣಿಕೆ ನೀಡಲಾಯಿತು.

    ಸಾಂಸ್ಕೃತಿಕ ಕಾರ್ಯಕ್ರಮ: 79ನೇ ಸ್ವಾತಂತ್ರ್ಯ ದಿನಾಚರಣೆಯ ಅಮೃತ ಮಹೋತ್ಸವ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಪಥ ಸಂಚಲನ ಮೂಲಕ ಹೆಜ್ಜೆ ಹಾಕಿ ಗಣ್ಯರಿಗೆ ಗೌರವ ಸೂಚಿಸಿದರು. ಶಾಲಾ ಮಕ್ಕಳು ದೇಶದ ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ ಬಲಿದಾನದ ಅಂಶವನ್ನು ನೃತ್ಯದಲ್ಲಿ ಅಳವಡಿಸಿಕೊಂಡು ದೇಶದ ಇತಿಹಾಸದ ಬಗ್ಗೆ ಪ್ರತಿಯೊಬ್ಬರಿಗೂ ಅರ್ಥೈಸಿದ್ದು ಕಾರ್ಯಕ್ರಮದಲ್ಲಿ ವಿಶೇಷವಾಗಿತ್ತು.

     ಶಾಲಾ ಮಕ್ಕಳಿಗೆ ಸಿಹಿ ವಿತರಣೆ:

    ವಾಸವಿ ಯುವಜನ ಸಂಘದ ಅಧ್ಯಕ್ಷ ಬಾಲಾಜಿ ದರ್ಶನ್, ಉಪಾಧ್ಯಕ್ಷ ಸಾಗರ್ ಹೆಚ್.ಪಿ., ಕಾರ್ಯದರ್ಶಿ ಹೇಮಂತ್, ಸಹ ಕಾರ್ಯದರ್ಶಿ ವರುಣ್, ಖಚಾಂಚಿ ಸುಭಾಷ್ ಹಾಗೂ ನಿರ್ದೇಶಕರು ಸ್ವಾತಂತ್ರ್ಯ ದಿನಾಚರಣೆಯ ಅಮೃತ ಮಹೋತ್ಸವ ಕಾರ್ಯಕ್ರಮದಲ್ಲಿ ಸುಮಾರು 2,000ಕ್ಕೂ ಹೆಚ್ಚಿನ ವಿದ್ಯಾರ್ಥಿಗಳಿಗೆ ಸಿಹಿ ವಿತರಿಸಿ ಸಂಭ್ರಮಿಸಿದರು.

    ಈ ಕಾರ್ಯಕ್ರಮದಲ್ಲಿ ಪ.ಪಂ ಅಧ್ಯಕ್ಷೆ ಅನಿತಾ, ಉಪಾಧ್ಯಕ್ಷೆ ಉಸ್ನಾಫಾರಿಯಾ, ಸ್ಥಾಯಿ ಸಮಿತಿ ಅಧ್ಯಕ್ಷೆ ಹೇಮಲತಾ, ತಾ.ಪಂ ಇಓ ಅಪೂರ್ವ, ಸಿಪಿಐ ಅನಿಲ್, ಸ್ಕೌಟ್ಸ್ ಅಂಡ್ ಗೈಡ್ಸ್ ಅಧ್ಯಕ್ಷ ಕೆ.ಆರ್ ಓಬಳರಾಜು, ಗ್ಯಾರಂಟಿ ಸಮಿತಿ ಅಧ್ಯಕ್ಷ ವೆಂಕಟೇಶ್‌ ಮೂರ್ತಿ, ಪಿಎಲ್‌ಡಿ ಬ್ಯಾಂಕ್ ಅಧ್ಯಕ್ಷ ಚಿಕ್ಕರಂಗಯ್ಯ, ಕಸಾಪ ಅಧ್ಯಕ್ಷ ಈರಣ್ಣ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅಶ್ವತ್ಥ್ ನಾರಾಯಣ್, ಅರಕೆರೆ ಶಂಕರ್, ಪ.ಪಂ ಮುಖ್ಯಾಧಿಕಾರಿ ಉಮೇಶ್, ಸದಸ್ಯರಾದ ಲಕ್ಷ್ಮಿನಾರಾಯಣ್, ಮಂಜುಳ ಗೋವಿಂದರಾಜು, ಮಾಜಿ ಅಧ್ಯಕ್ಷ ನಯಾಜ್ ಅಹಮದ್ ಸೇರಿದಂತೆ ಇತರರು ಇದ್ದರು.

    ವರದಿ: ಮಂಜುಸ್ವಾಮಿ ಎಂ.ಎನ್.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಮನೆ ಮುಂದೆ ನಿಲ್ಲಿಸಿದ್ದ ವಾಹನಗಳಿಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು: ಕಾರು, ಬೈಕ್ ಗಳು ಸುಟ್ಟು ಭಸ್ಮ

    April 12, 2026

    ಎನ್‌ ಎಸ್‌ ಎಸ್ ವಿದ್ಯಾರ್ಥಿಗಳು ನಾಯಕತ್ವ ಮನೋಭಾವ ಬೆಳೆಸಿಕೊಳ್ಳಿ: ಈರಪ್ಪ ನಾಯಕ

    April 12, 2026

    ಏ.15ರ ನಂತರ ಮನೆ ಮನೆಗೆ ಜನ ಗಣತಿ ಕಾರ್ಯಕರ್ತರು ಭೇಟಿ | ನಾಗರಿಕರು ಸ್ವಯಂ ಗಣತಿಯಲ್ಲಿ ಭಾಗವಹಿಸಿ: ತಹಶೀಲ್ದಾರ್ ಮಂಜುನಾಥ್ ಕೆ. ಕರೆ

    April 6, 2026

    Comments are closed.

    Our Picks

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026

    ಗಾನ ಕೋಗಿಲೆ ಆಶಾ ಭೋಂಸ್ಲೆ ನಿಧನ: ಸಪ್ತ ದಶಕಗಳ ಗಾಯನ ಪಯಣ ಅಂತ್ಯ

    April 12, 2026

    ಎಲ್‌ ಪಿಜಿ ಸಂಕಷ್ಟ: ವಿದೇಶಾಂಗ ನೀತಿ ಬದಲಿಸಿ ಬೇರೆ ದೇಶಗಳಿಂದ ಅನಿಲ ಆಮದು ಮಾಡಿಕೊಳ್ಳಿ: ಕೇಂದ್ರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

    April 5, 2026

    ವರ್ಷಾಂತ್ಯಕ್ಕೆ ಮೋದಿ ಆಡಳಿತ ಅಂತ್ಯ: ಅರವಿಂದ ಕೇಜ್ರಿವಾಲ್ ಭವಿಷ್ಯ

    March 24, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಷ್ಟ್ರೀಯ ಸುದ್ದಿ

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026

    ನವದೆಹಲಿ: ಭಾರತದಲ್ಲಿ ಸಮಾನತೆಯನ್ನು ಹೋಗಲಾಡಿಸಿ, ಸಂವಿಧಾನವನ್ನು ನಾಶಪಡಿಸುವುದೇ ಆರ್‌ಎಸ್‌ಎಸ್ ಮತ್ತು ಬಿಜೆಪಿಯ ಮುಖ್ಯ ಉದ್ದೇಶವಾಗಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್…

    ಕೊಡಗಿನಲ್ಲಿ ಭೀಕರ ರಸ್ತೆ ಅಪಘಾತ: ಚಲನಚಿತ್ರ ನಟ ಹರೀಶ್ ಸ್ಥಳದಲ್ಲೇ ಸಾವು

    April 12, 2026

    ಬೆಳಗಾವಿ: ಪ್ರಿಯಕರನ ಜೊತೆ ಸೇರಿ ಪತಿಯನ್ನೇ ಹತ್ಯೆ ಮಾಡಿದ ಪತ್ನಿ; ಸಿನಿಮೀಯ ಮಾದರಿಯಲ್ಲಿ ಕೊಲೆ

    April 12, 2026

    ಗಾನ ಕೋಗಿಲೆ ಆಶಾ ಭೋಂಸ್ಲೆ ನಿಧನ: ಸಪ್ತ ದಶಕಗಳ ಗಾಯನ ಪಯಣ ಅಂತ್ಯ

    April 12, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.