nammatumakuru

    Subscribe to Updates

    Get the latest creative news from FooBar about art, design and business.

    What's Hot

    ತುರುವೇಕೆರೆ | ನೂರನೇ ವರ್ಷದ ಸಂಭ್ರಮಾಚರಣೆ:  ಆರ್ ಎಸ್ ಎಸ್ ಪಥಸಂಚಲನ

    October 20, 2025

    ವೀರಶೈವ ಲಿಂಗಾಯತ ಸಮಾಜ ಒಗ್ಗಟ್ಟಾದರೆ ತಡೆಯುವ ಶಕ್ತಿ ಯಾರಿಗೂ ಇಲ್ಲ: ಶಿವಾಚಾರ್ಯ ಸ್ವಾಮೀಜಿ

    October 20, 2025

    ತುಮಕೂರು | ರಾಜ್ಯದಮಟ್ಟದ ಕಬಡ್ಡಿ: ದಕ್ಷಿಣ ಕನ್ನಡ ತಂಡಕ್ಕೆ ಅವಳಿ ಪ್ರಶಸ್ತಿ

    October 20, 2025
    Facebook Twitter Instagram
    ಟ್ರೆಂಡಿಂಗ್
    • ತುರುವೇಕೆರೆ | ನೂರನೇ ವರ್ಷದ ಸಂಭ್ರಮಾಚರಣೆ:  ಆರ್ ಎಸ್ ಎಸ್ ಪಥಸಂಚಲನ
    • ವೀರಶೈವ ಲಿಂಗಾಯತ ಸಮಾಜ ಒಗ್ಗಟ್ಟಾದರೆ ತಡೆಯುವ ಶಕ್ತಿ ಯಾರಿಗೂ ಇಲ್ಲ: ಶಿವಾಚಾರ್ಯ ಸ್ವಾಮೀಜಿ
    • ತುಮಕೂರು | ರಾಜ್ಯದಮಟ್ಟದ ಕಬಡ್ಡಿ: ದಕ್ಷಿಣ ಕನ್ನಡ ತಂಡಕ್ಕೆ ಅವಳಿ ಪ್ರಶಸ್ತಿ
    • ಜಿಲ್ಲಾಧಿಕಾರಿ ಜೊತೆಗೆ ಬೆಟ್ಟಿಂಗ್ ಕಟ್ಟಿ ಹಣ ಕಳೆದುಕೊಂಡ ಗೃಹ ಸಚಿವ ಪರಮೇಶ್ವರ್ !
    • ತಿಪಟೂರು: ದೀಪಾವಳಿ ಪ್ರಯುಕ್ತ ಲಕ್ಷ್ಮೀ ಪೂಜೆ
    • ಬೀದರ್: ಜಿಲ್ಲಾ ಮಟ್ಟದಲ್ಲಿ ಪೋಷಕತ್ವ ಯೋಜನೆ ಹೊಸ ಪೋಸ್ಟರ್ ಬಿಡುಗಡೆ
    • ನಮಾಜ್ ಮಾಡಲು ಮುಸ್ಲಿಮರು ಅನುಮತಿ ಪಡೆದುಕೊಳ್ಳುತ್ತಾರೆಯೇ?: ಕೆ.ಎನ್.ರಾಜಣ್ಣ ಪ್ರಶ್ನೆ
    • ಆರ್‌ ಎಸ್‌ ಎಸ್  ಶತಮಾನೋತ್ಸವ: ತುಮಕೂರಿನಲ್ಲಿ ಪಥ ಸಂಚಲನ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಊಳಿಗಮಾನ್ಯ ಪದ್ಧತಿಯ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಬದುಕುತ್ತಿದ್ದೇವೆ: ಪ್ರೊ. ಬರಗೂರುರಾಮಚಂದ್ರಪ್ಪ
    ತುಮಕೂರು December 25, 2024

    ಊಳಿಗಮಾನ್ಯ ಪದ್ಧತಿಯ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಬದುಕುತ್ತಿದ್ದೇವೆ: ಪ್ರೊ. ಬರಗೂರುರಾಮಚಂದ್ರಪ್ಪ

    By adminDecember 25, 2024No Comments2 Mins Read

    ತುಮಕೂರು:ಪ್ರಜಾಪ್ರಭುತ್ವದ ಕಾಳಜಿಗಳ, ಅಸ್ಮಿತೆಯ, ಬಹುತ್ವದ ಹಾಗೂ ಸಂಯುಕ್ತರಾಜಕಾರಣದ ಬಿಕ್ಕಟ್ಟನ್ನುಎದುರಿಸುತ್ತಿದ್ದೇವೆ. ಊಳಿಗಮಾನ್ಯ ಪದ್ಧತಿಯ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಬದುಕುತ್ತಿರುವುದುದುರ್ದೈವದ ಸಂಗತಿ ಎಂದು ಹಿರಿಯ ಸಾಹಿತಿ ಪ್ರೊ. ಬರಗೂರುರಾಮಚಂದ್ರಪ್ಪ  ಬೇಸರ ವ್ಯಕ್ತಪಡಿಸಿದರು.

    ತುಮಕೂರು ವಿಶ್ವವಿದ್ಯಾನಿಲಯದಲ್ಲಿ ಕರ್ನಾಟಕ ರಾಜ್ಯ ರಾಜ್ಯಶಾಸ್ತ್ರ ಶಿಕ್ಷಕರ ಸಂಘ, ತುಮಕೂರು ವಿವಿ ರಾಜ್ಯಶಾಸ್ತ್ರ ಶಿಕ್ಷಕರ ಅಕಾಡೆಮಿ, ಸ್ನಾತಕೋತ್ತರ ರಾಜ್ಯ ಶಾಸ್ತ್ರ ಅಧ್ಯಯನ ಮತ್ತು ಸಂಶೋಧನ ವಿಭಾಗ ಹಾಗೂ ಸ್ನಾತಕೋತ್ತರ ಸಾರ್ವಜನಿಕ ಆಡಳಿತ ಅಧ್ಯಯನ ಮತ್ತು ಸಂಶೋಧನ ವಿಭಾಗದ  ಸಹಯೋಗದಲ್ಲಿ ಆಯೋಜಿಸಿರುವ ‘ಭಾರತೀಯ ಪ್ರಜಾಪ್ರಭುತ್ವದ ಕಾಳಜಿಗಳು: ಅಸ್ಮಿತೆ, ಬಹುತ್ವ ಹಾಗೂ ಸಂಯುಕ್ತರಾಜಕಾರಣ’ ವಿಷಯದ ಕುರಿತ ಎರಡು ದಿನಗಳ 20ನೆಯ ಕರ್ನಾಟಕ ರಾಜ್ಯ ರಾಜ್ಯಶಾಸ್ತ್ರ ಶಿಕ್ಷಕರ ಸಮ್ಮೇಳನದ ಸಮಾರೋಪ  ಸಮಾರಂಭದಲ್ಲಿ ಮಾತನಾಡಿದರು.


    Provided by
    Provided by
    Provided by

    ದೇಶದ ಹಿತಚಿಂತನೆಯು ಪಕ್ಷದಿಂದ ನಾಯಕರ ಹಿತಚಿಂತನೆಗೆ ಇಳಿದಿದೆ. ವ್ಯಕ್ತಿಗತ ರಾಜಕಾರಣ ಎಂದಿಗೂ ಅಸಮಾನತೆಯನ್ನುತೋರಿಸುತ್ತದೆ. ಸರ್ಕಾರವನ್ನು, ದುರಾಡಳಿತವನ್ನು ಟೀಕಿಸಿದರೆ ದೇಶವನ್ನು ಟೀಕಿಸಿದಂತೆ ಎಂದು, ದೇಶ ವಿರೋಧಿ ಚಟುವಟಿಕೆಯ ಕಾನೂನಿನ ಅಡಿಯಲ್ಲಿ ಬಂಧಿಸುತ್ತಾರೆ. ನಾಯಕತ್ವಏಕತ್ವವಾಗಿ ಸರ್ವಾಧಿಕಾರ ತಲೆದೂರಿದೆ. ಬಹುತ್ವದ ನಾಯಕತ್ವ ಇಂದಿನ ಅಗತ್ಯವಾಗಿದೆ. ನಾಯಕನಲ್ಲಿ ಬಹುತ್ವಜೀವಿಸಬೇಕು ಎಂದರು.

    ಮುಖ್ಯಮಂತ್ರಿ ಹಾಗೂ ಪ್ರಧಾನ ಮಂತ್ರಿಯ ಮುಖವನ್ನು ಪ್ರಕಟಿಸಿ ಚುನಾವಣೆಗಳನ್ನು ಎದುರಿಸುತ್ತಿರುವುದು ಸಂಸದೀಯ ಪ್ರಜಾಪ್ರಭುತ್ವವೇ? ಈ ನಡೆ ಶಾಸಕರ ಮತ್ತು ಸಂಸದರ ಹಕ್ಕಿಗೆ ಚ್ಯುತಿತಂದಂತೆ. ಇದನ್ನು ಪ್ರಜೆಗಳು ಹಾಗೂ ಮಾಧ್ಯಮದವರು ಪ್ರಶ್ನಿಸುತ್ತಿಲ್ಲವೇಕೆ? ವ್ಯಕ್ತಿ ಪೂಜೆಯಲ್ಲಿ ನಿರತರಾಗಿರುವ ಪ್ರಜೆಗಳಿಗೆ ಉಳಿಗಾಲವಿಲ್ಲ ಎಂದು ತಿಳಿಸಿದರು.

    ತಾತ್ವಿಕ ಪ್ರಜಾಪ್ರಭುತ್ವದಲ್ಲಿ ಪ್ರಜೆಗಳು, ಜನಪ್ರತಿನಿಧಿಗಳು ಬದುಕುತ್ತಿಲ್ಲ. ಬೌದ್ಧಿಕ ವಲಯದ ವಿಭಜಿತರೂಪವು ವಿರಾಟರೂಪ ತಾಳಿದೆ. ಸೈದ್ಧಾಂತಿಕ ಬದ್ಧತೆಯೊಂದಿಗೆ ಸಂವಹನ, ಸಂವಾದವಿರಬೇಕು. ಜಾತಿ, ಧರ್ಮವುರಾಜಕೀಯ ನೆಲೆಯಲ್ಲಿ ದ್ವೇಷಕ್ಕೆ ಕಾರಣವಾಗುತ್ತಿದೆ. ದ್ವೇಷೋತ್ಪಾದನೆಯ ದೇಶವಾಗಿ ಭಾರತ ಬದಲಾಗುತ್ತಿದೆ. ನುಡಿ ನೈತಿಕತೆಯ ನಾಶದ ಸಂದರ್ಭದಲ್ಲಿದ್ದೇವೆ.  ಪ್ರಜಾಪ್ರಭುತ್ವದ ಪರಿಭಾಷೆಯನ್ನು ಮರೆತಿದ್ದೇವೆ ಎಂದರು.

    ಶಾಸಕರು ಹಾಗೂ ಸಂಸದರು ಜನಪ್ರತಿನಿಧಿಗಳ ಮಟ್ಟದಿಂದ ಸಂಖ್ಯೆಯ ಮಟ್ಟಕ್ಕೆ ಇಳಿದಿರುವುದು ಪ್ರಜಾಪ್ರಭುತ್ವದ ಅವನತಿ. ರಾಜಕೀಯ ಸಾಕ್ಷರತೆ ಇಲ್ಲದವನೇ ನಿಜವಾದ ಅನಕ್ಷರಸ್ಥ. ಪಂಚೇದ್ರಿಯಗಳು ಮಲಿನವಾಗಿರುವ ಸಂದರ್ಭದಲ್ಲಿ ಅಸ್ಪೃಶ್ಯತೆಯು ತಾಂಡವವಾಡುತ್ತಿದೆ ಎಂದರು.

    ಕರ್ನಾಟಕ ರಾಜ್ಯ ರಾಜ್ಯಶಾಸ್ತ್ರ ಶಿಕ್ಷಕರ ಸಂಘದ ಸಂಸ್ಥಾಪಕ ಕಾರ್ಯದರ್ಶಿ ಪ್ರೊ.ಜಯಪ್ರಕಾಶ್ ಮಾವಿನಕುಳಿ, ತುಮಕೂರು ವಿವಿ ರಾಜ್ಯಶಾಸ್ತ್ರ ಶಿಕ್ಷಕರ ಅಕಾಡೆಮಿಯ ಸಂಸ್ಥಾಪಕ ಅಧ್ಯಕ್ಷ ಪ್ರೊ.ಲಿಂಗರಾಜು ಬಿ.ಎಸ್., ತುಮಕೂರು ವಿವಿ ರಾಜ್ಯಶಾಸ್ತ್ರ ಶಿಕ್ಷಕರ ಅಕಾಡೆಮಿಯಅಧ್ಯಕ್ಷ ಡಾ.ಟಿ.ಜಿ.ನಾಗಭೂಷಣ, ಉಪಾಧ್ಯಾಕ್ಷ ಡಾ. ಹೊನ್ನಾಂಜನೇಯ, ಕಾರ್ಯಕಾರಿ ಸಮಿತಿ ಸದಸ್ಯ ಪ್ರೊ. ಶಿವಾನಂದಯ್ಯ, ಪರೀಕ್ಷಾಂಗ ಕುಲಸಚಿವ ಪ್ರೊ.ಪ್ರಸನ್ನಕುಮಾರ್ ಕೆ., ಕಾಲೇಜು ಶಿಕ್ಷಣ ಇಲಾಖೆಯಜಂಟಿ ನಿರ್ದೇಶಕ ಪ್ರೊ.ರಾಮಕೃಷ್ಣರೆಡ್ಡಿ,  ಸಮ್ಮೇಳದ ಅಧ್ಯಕ್ಷ ಪ್ರೊ.ಬಸವರಾಜ ಜಿ., ಸಂಘಟನಾ ಕಾರ್ಯದರ್ಶಿಗಳಾದ  ಡಾ.ನಾಗರಾಜು ಎಂ.ಎಸ್., ಡಾ. ಕೆ. ಸಿ. ಸುರೇಶ, ಕೋಶಾಧಿಕಾರಿ ಡಾ. ಮಂಜುನಾಥ್‌ ಆರ್. ಉಪಸ್ಥಿತರಿದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

    admin
    • Website

    Related Posts

    ತುಮಕೂರು | ರಾಜ್ಯದಮಟ್ಟದ ಕಬಡ್ಡಿ: ದಕ್ಷಿಣ ಕನ್ನಡ ತಂಡಕ್ಕೆ ಅವಳಿ ಪ್ರಶಸ್ತಿ

    October 20, 2025

    ಜಿಲ್ಲಾಧಿಕಾರಿ ಜೊತೆಗೆ ಬೆಟ್ಟಿಂಗ್ ಕಟ್ಟಿ ಹಣ ಕಳೆದುಕೊಂಡ ಗೃಹ ಸಚಿವ ಪರಮೇಶ್ವರ್ !

    October 20, 2025

    ನಮಾಜ್ ಮಾಡಲು ಮುಸ್ಲಿಮರು ಅನುಮತಿ ಪಡೆದುಕೊಳ್ಳುತ್ತಾರೆಯೇ?: ಕೆ.ಎನ್.ರಾಜಣ್ಣ ಪ್ರಶ್ನೆ

    October 19, 2025

    Comments are closed.

    Our Picks

    ಭಾರತ—ರಷ್ಯಾ ಸಂಬಂಧ ಮತ್ತಷ್ಟು ಬಲ: ಪ್ರಧಾನಿ ನರೇಂದ್ರ ಮೋದಿ

    September 25, 2025

    ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

    September 20, 2025

    ಖ್ಯಾತ ತಮಿಳು ಹಾಸ್ಯ ನಟ ರೋಬೋ ಶಂಕರ್‌ ನಿಧನ

    September 19, 2025

    ಸರ್ಕಾರಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಇಲಿ ಕಚ್ಚಿ ನವಜಾತ ಶಿಶು ಸಾವು!

    September 4, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುರುವೇಕೆರೆ

    ತುರುವೇಕೆರೆ | ನೂರನೇ ವರ್ಷದ ಸಂಭ್ರಮಾಚರಣೆ:  ಆರ್ ಎಸ್ ಎಸ್ ಪಥಸಂಚಲನ

    October 20, 2025

    ತುರುವೇಕೆರೆ: ರಾಷ್ಟ್ರೀಯ ಸ್ವಯಂ ಸೇವಕ ಸಂಘದ ನೂರನೇ ವರ್ಷದ ಸಂಭ್ರಮಾಚರಣೆ ಅಂಗವಾಗಿ ಪಟ್ಟಣದಲ್ಲಿ ಗಣವೇಷಧಾರಿಗಳ ಪಥಸಂಚಲನ ನಡೆಯಿತು. ಪಟ್ಟಣದ ಉಡಸಲಮ್ಮ…

    ವೀರಶೈವ ಲಿಂಗಾಯತ ಸಮಾಜ ಒಗ್ಗಟ್ಟಾದರೆ ತಡೆಯುವ ಶಕ್ತಿ ಯಾರಿಗೂ ಇಲ್ಲ: ಶಿವಾಚಾರ್ಯ ಸ್ವಾಮೀಜಿ

    October 20, 2025

    ತುಮಕೂರು | ರಾಜ್ಯದಮಟ್ಟದ ಕಬಡ್ಡಿ: ದಕ್ಷಿಣ ಕನ್ನಡ ತಂಡಕ್ಕೆ ಅವಳಿ ಪ್ರಶಸ್ತಿ

    October 20, 2025

    ಜಿಲ್ಲಾಧಿಕಾರಿ ಜೊತೆಗೆ ಬೆಟ್ಟಿಂಗ್ ಕಟ್ಟಿ ಹಣ ಕಳೆದುಕೊಂಡ ಗೃಹ ಸಚಿವ ಪರಮೇಶ್ವರ್ !

    October 20, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.