ರಾಮನಗರ: ನಾವು ಯಾರಿಗೂ ವಿಷ ಹಾಕುವವರಲ್ಲ. ನಾನು ಎಲ್ಲರಿಗೂ ಒಳ್ಳೆಯದನ್ನ ಬಯಸುವವರು ಎಂದು ಸಂಸದ ಡಿ.ಕೆ ಸುರೇಶ್ ತಿರುಗೇಟು ನೀಡಿದ್ದಾರೆ.
ದೇವೇಗೌಡರ ಬದುಕಿಗೆ ವಿಷ ಹಾಕಿದ್ದೇ ಡಿ.ಕೆ.ಬ್ರದರ್ಸ್ ಎಂಬ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿಗೆ ವಾಗ್ದಾಳಿ ವಿಚಾರಕ್ಕೆ ಹಾರೋಹಳ್ಳಿಯಲ್ಲಿ ಪ್ರತಿಕ್ರಿಯಿಸಿದರು.
ಅವರು ಏನು ಮಾತನಾಡಿದ್ದಾರೋ ಗೊತ್ತಿಲ್ಲ. ಅವರ ಆರೋಗ್ಯ ಚೆನ್ನಾಗಿಲ್ಲ ಅಂತ ಆಸ್ಪತ್ರೆಗೆ ಹೋಗ್ತಿದ್ದಾರೆ. ಆದಷ್ಟು ಬೇಗ ಆಸ್ಪತ್ರೆಯಿಂದ ಗುಣಮುಖರಾಗಿ ಬರಲಿ ಅಂತ ದೇವರಲ್ಲಿ ಪ್ರಾರ್ಥನೆ ಮಾಡುತ್ತೇನೆ ಎಂದರು.
ಬೆಂಗಳೂರು ಗ್ರಾಮಾಂತರ ಕ್ಷೇತ್ರಕ್ಕೆ ಫ್ಯಾರ ಮಿಲಿಟರಿ ಕರೆಸಬೇಕೆಂಬ ವಿಚಾರ ಸಂಬಂಧ, ಯಾರನ್ನ ಬೇಕಾದ್ರೂ ಕರೆಸಲಿ. ಪ್ಯಾರ ಮಿಲಿಟರಿಯನ್ನೇ ಕರೆಸಲಿ, ಪ್ರಧಾನಿ ಮೋದಿಯನ್ನೇ ಕರೆಸಲಿ. ನಾನು ಕ್ಷೇತ್ರದಲ್ಲಿ ಕೆಲಸ ಮಾಡಿದ್ದೇನೆ, ಕೂಲಿ ಕೇಳ್ತಿದ್ದೇನೆ. ನನಗೆ ಬಲವಂತ ಮಾಡುವ ಅವಶ್ಯಕತೆ ಇಲ್ಲ. ಅವರ ನಾಯಕರನ್ನ ಮೆಚ್ಚಿಸಲು ಸಿಪಿವೈ ಮಾಧ್ಯಮದ ಮುಂದೆ ಹೇಳ್ತಾರೆ ಎಂದು ಹೇಳಿದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


