ರಾಜ್ಯದಲ್ಲಿ ಸಮಾನತೆ, ಸಾಮರಸ್ಯ ಇರಬೇಕು. ಉತ್ತರ ಯೂರೋಪ್ ದೇಶಗಳಲ್ಲಿ Universal basic income ನ್ನು ಪಾಲಿಸುತ್ತಿದ್ದಾರೆ. ಅದಕ್ಕೆ ನಾವು ಜನರ ಜೇಬಿಗೆ ದುಡ್ಡು ಹಾಕುತ್ತಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಅವರು ಶುಕ್ರವಾರ ವಿಧಾನ ಪರಿಷತ್ ನಲ್ಲಿ ರಾಜ್ಯಪಾಲರ ಭಾಷಣದ ಮೇಲೆ ನಡೆದ ಚರ್ಚೆಗೆ ಉತ್ತರಿಸುತ್ತಾ ಮಾತನಾಡಿದರು.
ಪಂಚ ಗ್ಯಾರೆಂಟಿಗಳ ಮೂಲಕ ಎಲ್ಲರಿಗೂ 5000 ರೂ. ಸಿಗುತ್ತದೆ. ಬಿಜೆಪಿಯವರು, ಅಕ್ಕಿ ಗೋಧಿ ಮೇಲೆ, ಹಾಲು ಮೊಸರು, ಪೆನ್ನು ಪೆನ್ಸಿಲ್ ಮೇಲೆ ಜಿಎಸ್ ಟಿ ಹಾಕುವ ಮೂಲಕ ಜೇಬಿನಿಂದ ಹಣ ಕಿತ್ತರು. ನಾವು ನೀಡುವ ಗೃಹ ಲಕ್ಷ್ಮಿ, ಗೃಹ ಜ್ಯೋತಿ, ಅನ್ನಭಾಗ್ಯ, ಶಕ್ತಿ, ಯುವನಿಧಿ ಗಳ ಮೂಲಕ ವರ್ಷಕ್ಕೆ ಸುಮಾರು 52, 000 ಕೋಟಿಗೂ ಹೆಚ್ಚು ಖರ್ಚಾಗುತ್ತದೆ. ಜನರಿಗೆ ಮಾಹೆಯಾನ ಸುಮಾರು 5 ಸಾವಿರ ನೀಡಲಾಗುತ್ತವೆ. ಜನರ ಕೈಯಲ್ಲಿ ದುಡ್ಡು ಇದ್ದರೆ, ವ್ಯಾಪಾರ, ವಹಿವಾಟು ನಡೆಯುತ್ತದೆ.
ಕೊರೋನಾ ಸಂದರ್ಭದಲ್ಲಿ ಜನರ ಕೈಯಲ್ಲಿ ದುಡ್ಡು ಇರದೇ ತೊಂದರೆ ಅನುಭವಿಸಿದರು. ಗ್ಯಾರೆಂಟಿಗಳಿಂದ ರಾಜ್ಯದಿವಾಳಿಯಾಗುತ್ತದೆ ಎಂದು ಪ್ರಧಾನಿಗಳೇ ಹೇಳಿದ್ದಾರೆ. ಆದರೆ ನಾವು ಗ್ಯಾರಂಟಿಗಳನ್ನು ಈಡೇರಿಸುತ್ತೇವೆ ಹಾಗೂ ರಾಜ್ಯ ದಿವಾಳಿಯಾಗುವುದಕ್ಕೂ ಬಿಡುವುದಿಲ್ಲ ಎಂದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


