ಬೆಂಗಳೂರು: ತಮಿಳುನಾಡಿಗೆ ನೀರು ಹರಿಸುವಂತೆ ಸುಪ್ರೀಂಕೋರ್ಟ್ ಆದೇಶ ವಿಚಾರ, ಇನ್ನೆರಡು ದಿನಗಳಲ್ಲಿ ಕನ್ನಡಪರ ಸಂಘಟನೆಗಳು ಚರ್ಚೆ ಮಾಡುತ್ತೇವೆ. ನಂತರ ಹೋರಾಟಕ್ಕೆ ನಿರ್ಧರಿಸುತ್ತೇವೆ ಎಂದು ವಿಧಾನಸೌಧದಲ್ಲಿ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಹೇಳಿದರು.
ಕಾವೇರಿ ನೀರು ಬಿಡಲೇಬೇಕಂದ್ರೆ ಬಂದ್ ಮಾಡಲು ಸಿದ್ಧರಿದ್ದೇವೆ. ನಟರು ಬರುತ್ತೇವೆಂದು ಹೇಳಿದ್ದಾರೆ, ನೋಡೋಣ ಯಾವ ರೀತಿ ಬರುತ್ತಾರೆಂದು. ನಮ್ಮ ಕನ್ನಡ ನಟರು ಎಲ್ಲೆಲ್ಲೋ ಇದ್ದಾರೆ. ನಾಡಿನ ಪರ, ಕನ್ನಡ ಪರ, ರೈತರ ಪರ ಸ್ಯಾಂಡಲ್ ವುಡ್ ನಟರು ಬರಲಿ ಎಂದರು.


