nammatumakuru

    Subscribe to Updates

    Get the latest creative news from FooBar about art, design and business.

    What's Hot

    ಶುಂಠಿ ಬೇಗ ಹಾಳಾಗದಂತೆ ಇಡುವುದು ಹೇಗೆ?

    July 25, 2026

    ಶಿವಮೊಗ್ಗ ಜಿಲ್ಲಾ ನ್ಯಾಯಾಲಯದಲ್ಲಿ 56 ಜವಾನ ಹುದ್ದೆಗಳ ಭರ್ತಿ: ಆನ್‌ ಲೈನ್ ಅರ್ಜಿ ಆಹ್ವಾನ

    July 25, 2026

    ಮಾಜಿ ಸಚಿವ ಸಿ. ವೀರಣ್ಣ ಇನ್ನಿಲ್ಲ: ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಸಂಸ್ಕಾರ | ಡಿಸಿಎಂ ಡಾ.ಜಿ.ಪರಮೇಶ್ವರ್ ಸೇರಿದಂತೆ ಹಲವು ನಾಯಕರಿಂದ ಸಂತಾಪ

    July 25, 2026
    Facebook Twitter Instagram
    ಟ್ರೆಂಡಿಂಗ್
    • ಶುಂಠಿ ಬೇಗ ಹಾಳಾಗದಂತೆ ಇಡುವುದು ಹೇಗೆ?
    • ಶಿವಮೊಗ್ಗ ಜಿಲ್ಲಾ ನ್ಯಾಯಾಲಯದಲ್ಲಿ 56 ಜವಾನ ಹುದ್ದೆಗಳ ಭರ್ತಿ: ಆನ್‌ ಲೈನ್ ಅರ್ಜಿ ಆಹ್ವಾನ
    • ಮಾಜಿ ಸಚಿವ ಸಿ. ವೀರಣ್ಣ ಇನ್ನಿಲ್ಲ: ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಸಂಸ್ಕಾರ | ಡಿಸಿಎಂ ಡಾ.ಜಿ.ಪರಮೇಶ್ವರ್ ಸೇರಿದಂತೆ ಹಲವು ನಾಯಕರಿಂದ ಸಂತಾಪ
    • NEET ವಿವಾದ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ
    • ಜು. 29ರಂದು ಔರಾದ್‌ನಲ್ಲಿ ತಾಲೂಕು ಪತ್ರಿಕಾ ದಿನಾಚರಣೆ: ಶಾಸಕ ಪ್ರಭು ಚವ್ಹಾಣ್ ಉದ್ಘಾಟನೆ
    • ಡಾ.ದರಗೊಂಡ ಉದಯಸಿಂಗ್ ‘ಜೈ ಕರವೇ’ ವೈದ್ಯಕೀಯ ಘಟಕದ ಬೀದರ್ ಜಿಲ್ಲಾಧ್ಯಕ್ಷರಾಗಿ ಆಯ್ಕೆ
    • ಗ್ರಾಮೀಣ ಪ್ರತಿಭೆಯ ವೈದ್ಯಕೀಯ ಕನಸು ನನಸು: ನೀಟ್ ನಲ್ಲಿ ಕೊರಟಗೆರೆಯ ಸುಭಾಷ್ ಗೆ ಭರ್ಜರಿ ಸಾಧನೆ!
    • ಕೊರಟಗೆರೆ: ಮತದಾರರ ಗಣಕೀಯ ನಮೂನೆ ತಲುಪಿಸುವಲ್ಲಿ 100% ಸಾಧನೆ; ಶೇ.82.25 ರಷ್ಟು ಡಿಜಿಟಲ್ ಸೇರ್ಪಡೆ ಪೂರ್ಣ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ನಮ್ಮ ಪೊಲೀಸರ ಬಗ್ಗೆ ವಿಶ್ವಾಸವಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ
    ರಾಜ್ಯ ಸುದ್ದಿ May 10, 2024

    ನಮ್ಮ ಪೊಲೀಸರ ಬಗ್ಗೆ ವಿಶ್ವಾಸವಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ

    By adminMay 10, 2024No Comments2 Mins Read
    mysore

    ಮೈಸೂರು: ಪ್ರಜ್ವಲ್‌ ರೇವಣ್ಣ ಪ್ರಕರಣವನ್ನು ಸಿಬಿಐಗೆ ವಹಿಸುವ ಅಗತ್ಯವಿಲ್ಲ. ನನಗೆ ನಮ್ಮ ಪೊಲೀಸರ ಬಗ್ಗೆ ವಿಶ್ವಾಸವಿದೆ. ಅವರು ಕಾನೂನು ರೀತಿಯ ತನಿಖೆ ನಡೆಸಲಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಶ್ವಾಸ ವ್ಯಕ್ತಪಡಿಸಿದರು.

    ಅವರು ಇಂದು ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಕುಮಾರಸ್ವಾಮಿ ಅವರು ಪ್ರಜ್ವಲ್‌ ರೇವಣ್ಣ ಪ್ರಕರಣವನ್ನು ಸಿಬಿಐ ಗೆ ವಹಿಸುವಂತೆ ರಾಜ್ಯಪಾಲರಿಗೆ ಮನವಿ ಮಾಡಿರುವ ಕುರಿತಾಗಿ ಮಾಧ್ಯಮದವರ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿಗಳು, ನನಗೆ ನಮ್ಮ ಪೊಲೀಸರ ಬಗ್ಗೆ ವಿಶ್ವಾಸ ನಂಬಿಕೆ ಇದೆ. ಅವರು ಕಾನೂನು ರೀತಿಯ ತನಿಖೆ ನಡೆಸಲಿದ್ದಾರೆ ಎಂದು ತಿಳಿಸಿದರು.

    ಬಿಜೆಪಿಯವರು ಯಾವತ್ತೂ ಸಿಬಿಐಗೆ ಒಂದು ಪ್ರಕರಣವಾದರೂ ಕೊಟ್ಟಿದ್ದಾರಾ? ಹಿಂದೆ ಕಾಂಗ್ರೆಸ್‌ ಸರ್ಕಾರದ ಅವಧಿಯಲ್ಲಿ ಡಿ.ಕೆ. ರವಿ ಪ್ರಕರಣ, ಲಾಟರಿ ಪ್ರಕರಣ, ಸಚಿವರಾದ ಕೆ.ಜೆ. ಜಾರ್ಜ್‌ ಅವರ ಮೇಲಿನ ಆರೋಪ, ಪರೇಶ್‌ ಮೇಸ್ತ ಪ್ರಕರಣಗಳನ್ನು ಸಿಬಿಐಗೆ ವಹಿಸಲಾಯಿತು. ಈ ಪ್ರಕರಣಗಳಲ್ಲಿ ಯಾರಿಗಾದರೂ ಶಿಕ್ಷೆಯಾಗಿದೆಯೇ ಎಂದು ಪ್ರಶ್ನಿಸಿದರು.

    ಹಿಂದೆ ಬಿಜೆಪಿಯವರೇ ಸಿಬಿಐ ಯನ್ನು ಕರಪ್ಷನ್‌ ಬ್ಯೂರೋ ಆಫ್‌ ಇನ್ವೆಸ್ಟಿಗೇಷನ್ ಎಂದು ಬಣ್ಣಿಸಿದ್ದಾರೆ. ದೇವೇಗೌಡರು ಚೋರ್‌ ಬಚಾವೋ ಸಂಸ್ಥೇ ಎಂದು ಹೇಳಿದ್ದರು. ಈಗ ಸಿಬಿಐ ಮೇಲೆ ವಿಶ್ವಾಸ ಬಂತಾ? ನನಗೆ ಸಿಬಿಐ ಮೇಲೆ ವಿಶ್ವಾಸವಿದೆ. ಆದರೆ, ನಮ್ಮ ಪೊಲೀಸರ ಬಗ್ಗೆ ನಂಬಿಕೆ ಇದೆ. ಅದಕ್ಕಾಗಿ ವಿಶೇಷ ತನಿಖಾ ತಂಡ ರಚನೆ ಮಾಡಿದ್ದೇವೆ ಎಂದು ವಿವರಿಸಿದರು.

    ನಮ್ಮ ಸರ್ಕಾರ ಕಾನೂನು ರೀತಿ ನಡೆಯುತ್ತಿರುವ ಕೆಲಸದಲ್ಲಿ, ಮಧ್ಯಪ್ರವೇಶ ಮಾಡುವುದಿಲ್ಲ. ತನಿಖೆಯಾಗಲಿ. ಅವರು ಸರಿಯಾದ ರೀತಿಯಲ್ಲಿ ಕೆಲಸ ಮಾಡುವ ನಂಬಿಕೆ ಇದೆ. ನಾನು ಯಾವತ್ತೂ ಕಾನೂನಿಗೆ ವಿರುದ್ಧವಾಗಿ ಕೆಲಸ ಮಾಡಿ ಎಂದು ಹೇಳಿಲ್ಲ. ಅಂತರರಾಷ್ಟ್ರೀಯ ಮಟ್ಟದ ತನಿಖೆಯ ಅಗತ್ಯವಿಲ್ಲ. ನಮ್ಮ ಪೊಲೀಸರ ಮೇಲೆ ನಂಬಿಕೆ ಇಟ್ಟಿರಬೇಕಲ್ಲ. ಎಲ್ಲ ಅಪರಾಧ ಪ್ರಕರಣಗಳ ತನಿಖೆ ಯಾರು ಮಾಡುತ್ತಾರೆ? ನಮ್ಮ ಪೊಲೀಸರಲ್ಲವೇ? ಅವರದ್ದೇ ವಿಶೇಷ ತನಿಖಾದಳ ರಚಿಸಿರುವುದಲ್ಲವೇ? ನಮ್ಮ ಪೊಲೀಸರನ್ನು ನಂಬಬೇಕಲ್ಲವೆ ಎಂದು ಪ್ರಶ್ನಿಸಿದರು.

    ಈ ಪ್ರಕರಣದಲ್ಲಿ ನಾನಾಗಲೀ, ಡಿ.ಕೆ. ಶಿವಕುಮಾರ್‌ ಆಗಲೀ, ಯಾರೂ ಭಾಗಿಯಾಗಿಲ್ಲ ಎಂದು ಸ್ಪಷ್ಟ ಪಡಿಸಿದ ಮುಖ್ಯಮಂತ್ರಿಗಳು, ನನಗೆ ಎಸ್.ಐ.ಟಿ. ಮೇಲೆ ವಿಶ್ವಾಸವಿದೆ. ಸತ್ಯಾಸತ್ಯತೆ ಹೊರಬರುವ ನಂಬಿಕೆ ಇದೆ ಎಂದು ತಿಳಿಸಿದರು.

    ರೇವಣ್ಣ ಬಂಧನದಲ್ಲಿ ರಾಜಕೀಯ ಹಸ್ತಕ್ಷೇಪ ಇಲ್ಲ:

    ರೇವಣ್ಣ ಅವರ ಬಂಧನದಲ್ಲಿ ರಾಜಕೀಯ ಹಸ್ತಕ್ಷೇಪವಿದೆ ಎಂಬ ಆರೋಪಕ್ಕೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿಗಳು, ಅವರ ಮೇಲಿನ ಆರೋಪದಲ್ಲಿ ಹುರುಳೇ ಇಲ್ಲದಿದ್ದರೆ ನಿರೀಕ್ಷಣಾ ಜಾಮೀನು ಕೋರಿದ್ದೇಕೆ? ನಿರೀಕ್ಷಣಾ ಜಾಮೀನು ಅರ್ಜಿ ಯಾಕೆ ತಿರಸ್ಕೃತವಾಯಿತು ಎಂದು ಪ್ರಶ್ನಿಸಿದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


    Provided by
    Provided by
    admin
    • Website

    Related Posts

    ಸರ್ಕಾರಿ ಶಾಲೆಗಳ ಕಾರ್ಪೊರೇಟ್ ದತ್ತು ನೀತಿಗೆ ಎಐಡಿಎಸ್ ಒ ತೀವ್ರ ಆಕ್ರೋಶ: ಜನಾಂದೋಲನಕ್ಕೆ ಕರೆ

    July 25, 2026

    ತುಮಕೂರು: ಬಂಟ್ವಾಳದಲ್ಲಿ ನಡೆದ ಯುವತಿಯ ಭೀಕರ ಹತ್ಯೆಗೆ ಮಹಿಳಾ ಸಾಂಸ್ಕೃತಿಕ ಸಂಘಟನೆ ಖಂಡನೆ

    July 20, 2026

    ಸಂಕಷ್ಟದಲ್ಲೂ ಕೈಬಿಡದ ಸಂಗಾತಿ: ದೇವೇಗೌಡರ 72 ವರ್ಷಗಳ ಪಯಣಕ್ಕೆ ನೆರಲಾಗಿದ್ದ ಚೆನ್ನಮ್ಮ

    July 19, 2026

    Comments are closed.

    Our Picks

    NEET ವಿವಾದ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

    July 25, 2026

    ನೀಟ್ ಅಕ್ರಮ: ಕಪ್ಪು ಪಟ್ಟಿ ಧರಿಸಿ ಮೌನ ಪ್ರತಿಭಟನೆ: ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ

    July 21, 2026

    ಕೇಂದ್ರ ಸರ್ಕಾರವು ತಕ್ಷಣವೇ ಸೋನಮ್ ವಾಂಗ್ಚುಕ್ ಜೊತೆ ಚರ್ಚಿಸಲು ಆಗ್ರಹಿಸಿ ರಾಷ್ಟ್ರಪತಿಯವರಿಗೆ ಮನವಿ: ತುಮಕೂರಿನಲ್ಲಿ ಆನ್‌ ಲೈನ್ ಸಹಿ ಸಂಗ್ರಹ

    July 18, 2026

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    Uncategorized

    ಶುಂಠಿ ಬೇಗ ಹಾಳಾಗದಂತೆ ಇಡುವುದು ಹೇಗೆ?

    July 25, 2026

    ಶುಂಠಿಯು ಪ್ರತಿಯೊಬ್ಬರ ಅಡುಗೆಮನೆಯಲ್ಲಿಯೂ ಅತ್ಯಗತ್ಯವಾಗಿ ಬಳಸುವ ಒಂದು ಪ್ರಮುಖ ಪದಾರ್ಥ. ಚಹಾ, ಸಾರು, ಕರ್ರಿ ಅಥವಾ ವಿವಿಧ ಖಾದ್ಯಗಳಿಗೆ ಶುಂಠಿ…

    ಶಿವಮೊಗ್ಗ ಜಿಲ್ಲಾ ನ್ಯಾಯಾಲಯದಲ್ಲಿ 56 ಜವಾನ ಹುದ್ದೆಗಳ ಭರ್ತಿ: ಆನ್‌ ಲೈನ್ ಅರ್ಜಿ ಆಹ್ವಾನ

    July 25, 2026

    ಮಾಜಿ ಸಚಿವ ಸಿ. ವೀರಣ್ಣ ಇನ್ನಿಲ್ಲ: ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಸಂಸ್ಕಾರ | ಡಿಸಿಎಂ ಡಾ.ಜಿ.ಪರಮೇಶ್ವರ್ ಸೇರಿದಂತೆ ಹಲವು ನಾಯಕರಿಂದ ಸಂತಾಪ

    July 25, 2026

    NEET ವಿವಾದ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

    July 25, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.