ಮೈಸೂರು: ನಾವು ಧರ್ಮದ ಆಧಾರದ ಮೇಲೆ ಮೀಸಲಾತಿ ಕೊಟ್ಟಿಲ್ಲ. ಹಿಂದುಳಿದ ವರ್ಗ ಅನ್ನೋ ಕಾರಣಕ್ಕೆ ಕೊಟ್ಟಿದ್ದೇವೆ ಎಂದು ವಿಧಾನ ಪರಿಷತ್ ಸದಸ್ಯ ಯತೀಂದ್ರ ಸಿದ್ದರಾಮಯ್ಯ ಹೇಳಿಕೆ ನೀಡಿದ್ದಾರೆ.
ಮೈಸೂರಿನಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಅಲ್ಪ ಸಂಖ್ಯಾತರು, ಹಿಂದುಳಿದ ವರ್ಗಕ್ಕೆ ಮೀಸಲಾತಿ ಕೊಟ್ಟಾಗ ಮುಸ್ಲಿಂ ಧರ್ಮದವರಿಗೂ ಕೊಡಬೇಕಾಗುತ್ತೆ ಎಂದು ತಿಳಿಸಿದ್ದಾರೆ.
ಮುಸ್ಲಿಂ ಮೀಸಲಾತಿ ಕರ್ನಾಟಕ ಮಾತ್ರವಲ್ಲದೇ ಬೇರೆ ರಾಜ್ಯದಲ್ಲೂ ಇದೆ. ಆದ್ರೆ ನಾವು ಕೇವಲ ಮುಸ್ಲಿಂರಿಗೆ ಮಾತ್ರ ಮೀಸಲಾತಿ ಕೊಟ್ಟಿಲ್ಲ. ಮುಸ್ಲಿಂ ಸಮುದಾಯದ 70 ಜಾತಿಗೆ ಮೀಸಲಾತಿ ಕೊಟ್ಟಿದ್ದೇವೆ ಎಂದು ಪ್ರಧಾನಿ ಮೋದಿಯವರು ಹೆಮ್ಮೆಯಿಂದ ಹೇಳಿದ್ದಾರೆ. ಮೋದಿಯವರು ಮಾಡಿದರೆ ಸರಿ ನಾವು ಮಾಡಿದ್ರೆ ತಪ್ಪಾಗುತ್ತಾ? ಎಂದು ಅವರು ಪ್ರಶ್ನಿಸಿದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4