ಲೋಕಸಭೆ ಚುನಾವಣೆಯಲ್ಲಿ 7 ಲಕ್ಷ ಮತಗಳ ಅಂತರದಲ್ಲಿ ಗೆದ್ದಿರುವ ರಾಹುಲ್ ಗಾಂಧಿ ಅವರ ಅನರ್ಹತೆ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಕರಾಳ ಅಧ್ಯಾಯ ಎಂದು ಗಾಂಧಿ ಪ್ರತಿಮೆ ಬಳಿ ನಡೆದ ಪ್ರತಿಭಟನೆ ಸಂದರ್ಭದಲ್ಲಿ ಡಿ. ಕೆ. ಶಿವಕುಮಾರ್ ಹೇಳಿದರು. ಗಾಂಧಿ ಕುಟುಂಬ ದೇಶಕ್ಕಾಗಿ ತಮಗೆ ಸಿಕ್ಕ ಎಲ್ಲಾ ಸ್ಥಾನಮಾನ ತ್ಯಾಗ ಮಾಡಿದೆ.
ನಮ್ಮ ರಾಜ್ಯದಲ್ಲಿ ಮಾಡಿದ ಭಾಷಣ ಇಟ್ಟುಕೊಂಡು ಬಿಜೆಪಿ ಕುತಂತ್ರ ಮಾಡಿದೆ. ನ್ಯಾಯಾಲಯದಲ್ಲಿ ನ್ಯಾಯ ಸಿಗುವ ನಿರೀಕ್ಷೆ ಇತ್ತು. ತೀರ್ಪಿನ ವಿಚಾರವಾಗಿ ನಾವು ಮಾತನಾಡುವುದಿಲ್ಲ. ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ಪ್ರಧಾನಿ ಆಗಬಹುದಿತ್ತು. ಆದರೆ ದೇಶಕ್ಕೆ ಆರ್ಥಿಕ ತಜ್ಞ ಅಗತ್ಯವಿದೆ ಎಂದು ಅಧಿಕಾರ ತ್ಯಾಗ ಮಾಡಿದರು.
ಅವರು ಭಾರತ ಜೋಡೋ ಯಾತ್ರೆ ಮೂಲಕ ಬೆಲೆ ಏರಿಕೆ, ನಿರುದ್ಯೋಗ ಬಗ್ಗೆ ಧ್ವನಿ ಎತ್ತಿ. ಭಾರತ ಒಂದುಗೂಡಿಸಲು ಪ್ರಯತ್ನಿಸಿದರು. ಇದರಿಂದ ಅವರಿಗೆ ಸಿಕ್ಕ ಜನಬೆಂಬಲ ಸಹಿಸದೆ ಬಿಜೆಪಿ ಅವರ ಸದಸ್ಯತ್ವ ಅನರ್ಹಗೊಳಿಸಲಾಗಿದೆ.
ಈ ದೇಶದಲ್ಲಿ ಪ್ರಜಾಪ್ರಭುತ್ವ ವ್ಯವಸ್ಥೆ ಮೇಲೆ ಆಗುತ್ತಿರುವ ದಾಳಿಯನ್ನು ಇಡೀ ವಿದೇಶಗಳಲ್ಲೂ ಪ್ರಶ್ನಿಸಲಾಗಿದೆ.
ಕರ್ನಾಟಕ ರಾಜ್ಯದ ಪಕ್ಷದ ಅಧ್ಯಕ್ಷನಾಗಿ ರಾಜ್ಯದ ಜನ ಹಾಗೂ ದೇಶ ಅವರ ಜೊತೆ ನಿಲ್ಲಲಿದೆ. ನಾವು ನಮ್ಮ ಕಾನೂನು ಹೋರಾಟ ಮುಂದುವರಿಸುತ್ತೇವೆ. ಇಂದು ಗಾಂಧಿ ಪ್ರತಿಮೆ ಬಳಿ ಪ್ರತಿಭಟನೆ ಮಾಡಲಾಗುತ್ತಿದ್ದು, ಮಳೆ ನಡುವೆ ಪ್ರತಿಭಟನೆ ಮಾಡುತ್ತಿದ್ದೇವೆ. ಮುಂದೆ ಈ ವಿಚಾರದ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವ ಕೆಲಸ ಮಾಡುತ್ತೇವೆ.
ಈ ಕುತಂತ್ರದ ಮೂಲಕ ತಮಗೆ ರಾಜಕೀಯವಾಗಿ ಅನುಕೂಲ ಆಗಲಿದೆ ಎಂದು ಬಿಜೆಪಿ ನಾಯಕರು ಭಾವಿಸಿದ್ದಾರೆ. ರಾಜ್ಯದ ಜನ ಹೇಗೆ ಅವರಿಗೆ ಪಾಠ ಕಲಿಸಿದ್ದಾರೋ ಅದೇರೀತಿ ದೇಶದ ಜನ ಕೂಡ ಪಾಠ ಕಲಿಸಲಿದ್ದಾರೆ. ಬಿಜೆಪಿ ಕುತಂತ್ರಕ್ಕೆ ನಾವು ಧಿಕ್ಕಾರ ಹಾಕುತ್ತೇವೆ. ನಾವು ಗಾಂಧಿ ಕುಟುಂಬದ ಜೊತೆ ನಿಲ್ಲುತ್ತೇವೆ. ರಾಹುಲ್ ಗಾಂಧಿ ಅವರು ಈ ಸಂದರ್ಭದಲ್ಲಿ ಧೈರ್ಯವಾಗಿರಬೇಕು ಎಂದು ತಿಳಿಸಲು ಬಯಸುತ್ತೇವೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


