ಬೆಂಗಳೂರು: ಮುಂಬರುವ ಲೋಕಸಭಾ ಚುನಾವಣೆಯ ಟಿಕೆಟ್ ಕೈ ತಪ್ಪಿದ ಹಿನ್ನೆಲೆಯಲ್ಲಿ , ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಸ್ವತಂತ್ರ್ಯ ಅಭ್ಯರ್ಥಿಯಾಗಿ ಬಿಜೆಪಿ ವಿರುದ್ದ ಸ್ಪರ್ಧಿಸುತ್ತಿರುವ ಬಗ್ಗೆ, ಮಾಜಿ ಸಿಎಂ ಯಡಿಯೂರಪ್ಪ ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಇಂಥಾ ತೀರ್ಮಾನ ಬೇಡ ಎಂದು ಸಾಕಷ್ಟು ಬಾರಿ ಹೇಳಿದ್ದೇವೆ ಎಂದರು.
ನಾನೂ ಸೇರಿದಂತೆ ಹಲವು ಹಿರಿಯ ನಾಯಕರು ಈಶ್ವರಪ್ಪ ಅವರನ್ನು ಮನವೊಲಿಸಲು ಯತ್ನಿಸಿದ್ದೇವೆ. ಆದರೆ ಈಶ್ವರಪ್ಪ ಕೇಳುತ್ತಿಲ್ಲ. ಮುಂದೆ ಏನಾಗುತ್ತದೆಯೋ ನೋಡೋಣ. ಎಲ್ಲವರೂ ಸರಿ ಹೋಗಲಿದೆ ಎಂದು ಭಾವಿಸುತ್ತೇನೆ ಎಂದು ಬಿ.ಎಸ್.ವೈ ಹೇಳಿದರು. ಜೊತೆಗೆ, ಮಾಧುಸ್ವಾಮಿಯವರ ಜೊತೆಗೂ ಮಾತನಾಡಲಿದ್ದೇನೆ ಎಂದರು.
ಟಿಕೆಟ್ ಘೋಷಣೆಯಾಗುತ್ತಿದ್ದಂತೆಯೇ ಜೆಡಿಸ್ ಮತ್ತು ಬಿಜೆಪಿ ಒಟ್ಟಾಗಿ ಪ್ರಚಾರ ನಡೆಸಲಿದೆ. ಮಾಜಿ ಪ್ರಧಾನಿ ದೇವೇಗೌಡರೂ ಸಹ ಪ್ರಚಾರದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಬಿ.ಎಸ್. ಯಡಿಯೂರಪ್ಪ ಹೇಳಿದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


