nammatumakuru

    Subscribe to Updates

    Get the latest creative news from FooBar about art, design and business.

    What's Hot

    ಸಿಹಿ ತಿನ್ನದಿದ್ದರೂ ಮಧುಮೇಹ ಬರಬಹುದು! ಈ ಲಕ್ಷಣಗಳನ್ನು ನಿರ್ಲಕ್ಷಿಸಬೇಡಿ

    October 13, 2026

    ತುಮಕೂರು ದಸರಾ ಉತ್ಸವ-2026: ಪಂಜಿನ ಕವಾಯತು ತಾಲೀಮು ವೀಕ್ಷಣೆ

    October 13, 2026

    ತುಮಕೂರು ದಸರಾ ಉತ್ಸವ–2026ರ ಅಂಗವಾಗಿ ಮಹಿಳಾ ಕೌಶಲ್ಯ ಮೇಳ ಉದ್ಘಾಟನೆ

    October 13, 2026
    Facebook Twitter Instagram
    ಟ್ರೆಂಡಿಂಗ್
    • ಸಿಹಿ ತಿನ್ನದಿದ್ದರೂ ಮಧುಮೇಹ ಬರಬಹುದು! ಈ ಲಕ್ಷಣಗಳನ್ನು ನಿರ್ಲಕ್ಷಿಸಬೇಡಿ
    • ತುಮಕೂರು ದಸರಾ ಉತ್ಸವ-2026: ಪಂಜಿನ ಕವಾಯತು ತಾಲೀಮು ವೀಕ್ಷಣೆ
    • ತುಮಕೂರು ದಸರಾ ಉತ್ಸವ–2026ರ ಅಂಗವಾಗಿ ಮಹಿಳಾ ಕೌಶಲ್ಯ ಮೇಳ ಉದ್ಘಾಟನೆ
    • ದೆಹಲಿಯ ಬೀದಿಯಲ್ಲಿ ಕಾರ್ಯಕರ್ತರೊಂದಿಗೆ ಸರಳತೆಯ ಸಹಭೋಜನ: ಜನರ ನಡುವಿನ ನಾಯಕ ಬಿ.ಕೆ. ಹರಿಪ್ರಸಾದ್
    • ಅಕ್ಟೋಬರ್ 15ರಂದು ಸಚಿವ ಈಶ್ವರ್ ಖಂಡ್ರೆ ಅವರಿಗೆ ಮಾದಿಗ ಸಮಾಜದಿಂದ ಅಭಿನಂದನಾ ಸಮಾರಂಭ
    • ಸಂಪಾದಕೀಯ: ಇಪಿಎಫ್‌ ಒ ಸಮಯೋಚಿತ ಸುತ್ತೋಲೆ ಮತ್ತು ಉದ್ಯಮ ರಂಗದ ವಾಸ್ತವ
    • ಹೆಚ್.ಐ.ವಿ ನಿಯಂತ್ರಣಕ್ಕೆ ಜನಜಾಗೃತಿ ಅತ್ಯಗತ್ಯ: ಜಿಲ್ಲಾಧಿಕಾರಿ ಸ್ನೇಹಲ್ ಆರ್.
    •  ರಾಜ್ಯದಲ್ಲಿ ಮತ್ತೆ ಮಳೆ ಅಬ್ಬರ?  ಹವಾಮಾನ ವರದಿ ಏನು ಹೇಳುತ್ತದೆ; ನಿಮ್ಮ ಜಿಲ್ಲೆಯಲ್ಲಿ ಮಳೆಯಾಗುತ್ತಾ?
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಮೈಸೂರಿನಲ್ಲಿ ವಿಶ್ವದರ್ಜೆಯ ಫಿಲ್ಮ್ ಸಿಟಿ ನಿರ್ಮಿಸುತ್ತೇವೆ: ಸಿಎಂ ಸಿದ್ದರಾಮಯ್ಯ
    ರಾಜ್ಯ ಸುದ್ದಿ March 1, 2025

    ಮೈಸೂರಿನಲ್ಲಿ ವಿಶ್ವದರ್ಜೆಯ ಫಿಲ್ಮ್ ಸಿಟಿ ನಿರ್ಮಿಸುತ್ತೇವೆ: ಸಿಎಂ ಸಿದ್ದರಾಮಯ್ಯ

    By adminMarch 1, 2025No Comments2 Mins Read
    siddaramaiah

    ಬೆಂಗಳೂರು: ವಿಶ್ವದರ್ಜೆಯ ಫಿಲ್ಮ್ ಸಿಟಿಯನ್ನು ಮೈಸೂರಿನಲ್ಲಿ ನಿರ್ಮಿಸುತ್ತೇವೆ. ಇದಕ್ಕಾಗಿ ಈಗಾಗಲೇ 150 ಎಕರೆ ಜಾಗವನ್ನು ನೀಡಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

    ವಿಧಾನಸೌಧದ ಗ್ರಾಂಡ್ ಸ್ಟೆಪ್ಸ್‌ಗಳ‌ ಮೇಲೆ ಆಯೋಜಿಸಿದ್ದ ವರ್ಣರಂಜಿತ ಕಾರ್ಯಕ್ರಮದಲ್ಲಿ 16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವವನ್ನು ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು.

    ಕರ್ನಾಟಕವೇ ಒಂದು ಜಗತ್ತು. ಇಲ್ಲಿ ಎಲ್ಲ ಅವಕಾಶಗಳನ್ನು ಸೃಷ್ಟಿಸಬಹುದು. ಇದಕ್ಕಾಗಿ ವಿಶ್ವ ದರ್ಜೆಯ ಅತ್ಯುನ್ನತ ಗುಣಮಟ್ಟದ ಫಿಲ್ಮ್ ಸಿಟಿಯನ್ನು ಮೈಸೂರಿನಲ್ಲಿ ನಿರ್ಮಿಸುತ್ತಿದ್ದೇವೆ. ತಂತ್ರಜ್ಞಾನದ ಜೊತೆಗೆ ಮಾನವೀಯ ಮೌಲ್ಯಗಳನ್ನು ಬೆಸೆಯುವ ಸಿನಿಮಾಗಳನ್ನು ವಿಶ್ವದರ್ಜೆಯ ಗುಣಮಟ್ಟದಲ್ಲಿ ಇಲ್ಲಿ ನಿರ್ಮಾಣ ಆಗಬೇಕು ಎಂದರು.

    ಅಂತಾರಾಷ್ಟ್ರೀಯ ಚಿತ್ರೋತ್ಸವ ವಿಶ್ವ ಸಮುದಾಯದ ಸಂಸ್ಕೃತಿಯ ಪ್ರತಿಬಿಂಬ. ಇದನ್ನು ನೋಡುಗರು ಸದುಪಯೋಗಪಡಿಸಿಕೊಳ್ಳಬೇಕು.   ನಮ್ಮಲ್ಲಿ ಅಸಹನೆ ಹೆಚ್ಚುತ್ತಿರುವುದರಿಂದ ಸಮಾಜದಲ್ಲಿ ಅಸಂತೋಷ ಹೆಚ್ಚುತ್ತಿದೆ. ಸಂಪತ್ತಿನ ಅಸಮಾನ ಹಂಚಿಕೆ ಈ ಅಸಂತೋಷಕ್ಕೆ ಕಾರಣ. ದೇಶದ 1% ಜನರ ಕೈಯಲ್ಲಿ ದೇಶದ 50% ಸಂಪತ್ತು ಸೇರಿಕೊಂಡಿದೆ. ಇದಕ್ಕೆ ಕಲಾ ಮಾಧ್ಯಮ ಆಗಿರುವ ಸಿನಿಮಾಗಳು ಪರಿಹಾರ ಹುಡುಕಬೇಕು. ಸಮಾಜವನ್ನು ಕಲಾ ಮಾಧ್ಯಮದ ಮೂಲಕ ಬೆಸೆಯಬೇಕು ಎಂದು ಅವರು ಹೇಳಿದರು.

    ಡಾ.ರಾಜ್ ಕುಮಾರ್ ಅವರ ಸಿನಿಮಾಗಳಲ್ಲಿದ್ದ ಮೌಲ್ಯಗಳು ಮತ್ತು ಘನತೆ ಈಗಿನ ಸಿನಿಮಾಗಳಲ್ಲಿ ಕಾಣುತ್ತಿಲ್ಲ. ರಾಜ್ ಕುಮಾರ್ ಸಿನಿಮಾಗಳಲ್ಲಿ ಸೌಹಾರ್ದ ಮತ್ತು ಮಾನವೀಯ ಮೌಲ್ಯಗಳು ತುಂಬಿರುತ್ತಿದ್ದವು. ಹೀಗಾಗಿ ಸರ್ವರಿಗೂ ಅವರ ಸಿನಿಮಾಗಳು ಇಷ್ಟ ಆಗುತ್ತಿದ್ದವು.

    ಮೌಡ್ಯಗಳನ್ನು ಬಿತ್ತುವ, ಸಂವಿಧಾನದ ಮೌಲ್ಯಗಳಿಗೆ ವಿರುದ್ಧವಾದ ಸಿನಿಮಾಗಳು ಸಮಾಜಕ್ಕೆ ಒಳ್ಳೆಯದಲ್ಲ. ಬಸವಣ್ಣನವರು ಕರ್ಮ ಸಿದ್ಧಾಂತವನ್ನು ತಿರಸ್ಕರಿಸಿದ್ದರು. ಸಿನಿಮಾಗಳು ಮತ್ತೆ ಮೌಢ್ಯಗಳನ್ನು ಬಿತ್ತುವುದಕ್ಕೆ ಹೋಗಬಾರದು ಎಂದು ಸಿಎಂ ಹೇಳಿದರು.

    ಈಗ ತಂತ್ರಜ್ಞಾನ ಬೆಳೆದು ಕೃತಕ ಬುದ್ದಿಮತ್ತೆವರೆಗೂ ಬೆಳೆದು ಬಂದಿದೆ. ನಮ್ಮ ಬದುಕನ್ನು ಪ್ರತಿಬಿಂಬಿಸುವ, ನಮ್ಮ ತಳಮಳಗಳಿಗೆ ಪರಿಹಾರ ಹುಡುಕುವ ಸಿನಿಮಾಗಳು ಬಂದಾಗ ಅಂತಹ ಸಿನಿಮಾಗಳು ಶಾಶ್ವತವಾಗಿ ಸಮಾಜದಲ್ಲಿ ಉಳಿಯುತ್ತವೆ.   ಬೆಂಗಳೂರು, ಕರ್ನಾಟಕವೇ ಒಂದು ಜಗತ್ತು. ಇಲ್ಲಿ ಎಲ್ಲವೂ ಇದೆ. ತಂತ್ರಜ್ಞಾನದ ಅವಕಾಶಗಳನ್ನು ಬಳಸಿಕೊಂಡು ಉತ್ತಮ‌ ಸಿನಿಮಾಗಳನ್ನು ಮಾಡಿದರೆ ಸಮಾಜಕ್ಕೆ ಒಳ್ಳೆಯದಾಗುತ್ತದೆ. ಸಿನಿಮಾ ಕ್ಷೇತ್ರವೂ ಪ್ರಗತಿ ಕಾಣುತ್ತದೆ. ಈ ದಿಕ್ಕಿನಲ್ಲಿ ಸಿನಿಮಾ ಜಗತ್ತು ಮಾನವೀಯಗೊಳ್ಳಲಿ ಎಂದು ಅವರು ಆಶಯ ವ್ಯಕ್ತಪಡಿಸಿದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4

     

    admin
    • Website

    Related Posts

     ರಾಜ್ಯದಲ್ಲಿ ಮತ್ತೆ ಮಳೆ ಅಬ್ಬರ?  ಹವಾಮಾನ ವರದಿ ಏನು ಹೇಳುತ್ತದೆ; ನಿಮ್ಮ ಜಿಲ್ಲೆಯಲ್ಲಿ ಮಳೆಯಾಗುತ್ತಾ?

    October 13, 2026

    ಶಿವಮೊಗ್ಗದಲ್ಲಿ ಕೇಂದ್ರ ಸಚಿವ ವಿ. ಸೋಮಣ್ಣ ಕಾರಿಗೆ ಯುವ ಕಾಂಗ್ರೆಸ್ ಮುತ್ತಿಗೆ ಯತ್ನ

    October 12, 2026

    ‘ಪ್ರೇಮದ ಊರಲಿ’ ಸಿನಿಮಾ ವೀಕ್ಷಣೆಗೆ ಹೋಗಿದ್ದ ಕುಟುಂಬಕ್ಕೆ ಶಾಕ್; ಮಂಚದ ಕೆಳಗೆ ಅವಿತಿದ್ದ ಕಳ್ಳ ರೆಡ್‌ ಹ್ಯಾಂಡ್‌ ಸಿಕ್ಕಿಬಿದ್ದ!

    October 12, 2026

    Comments are closed.

    Our Picks

    ದೆಹಲಿಯ ಬೀದಿಯಲ್ಲಿ ಕಾರ್ಯಕರ್ತರೊಂದಿಗೆ ಸರಳತೆಯ ಸಹಭೋಜನ: ಜನರ ನಡುವಿನ ನಾಯಕ ಬಿ.ಕೆ. ಹರಿಪ್ರಸಾದ್

    October 13, 2026

    ‘We’re Sorry’: ಸಿಜೆಪಿ ನಾಯಕ ಅಭಿಜಿತ್ ದೀಪ್ಕೆಗೆ ಅಜ್ಜಿಯ ಸಾವಿನ ಸುದ್ದಿ ಮುಟ್ಟಿಸಿದ ಪೊಲೀಸ್; ವೈರಲ್ ವೀಡಿಯೊ

    October 12, 2026

    ನಾನಾ ಪಾಟೇಕರ್ ಸಾವಿಗೆ ನಿಜ ಕಾರಣ ಏನು? ಮರಣೋತ್ತರ ಪರೀಕ್ಷೆ ವರದಿ ಬಯಲು!

    October 11, 2026

     CJP ನಾಯಕರ ವಶಕ್ಕೆ ಪುರುಷ ಪೋಲಿಸರ  ಮಹಿಳಾ ಪೊಲೀಸರ ಎಂಟ್ರಿ ಹಿಂದಿನ ಕಾರಣವೇನು?

    October 11, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಆರೋಗ್ಯ

    ಸಿಹಿ ತಿನ್ನದಿದ್ದರೂ ಮಧುಮೇಹ ಬರಬಹುದು! ಈ ಲಕ್ಷಣಗಳನ್ನು ನಿರ್ಲಕ್ಷಿಸಬೇಡಿ

    October 13, 2026

    ಸಿಹಿ ಪದಾರ್ಥಗಳನ್ನು ಹೆಚ್ಚಾಗಿ ತಿಂದರೆ ಮಾತ್ರ ಮಧುಮೇಹ ಬರುತ್ತದೆ ಎಂಬುದು ಹಲವರಲ್ಲಿರುವ ತಪ್ಪು ಕಲ್ಪನೆ. ಆದರೆ ಮಧುಮೇಹಕ್ಕೆ ಸಕ್ಕರೆ ಸೇವನೆಯೊಂದೇ…

    ತುಮಕೂರು ದಸರಾ ಉತ್ಸವ-2026: ಪಂಜಿನ ಕವಾಯತು ತಾಲೀಮು ವೀಕ್ಷಣೆ

    October 13, 2026

    ತುಮಕೂರು ದಸರಾ ಉತ್ಸವ–2026ರ ಅಂಗವಾಗಿ ಮಹಿಳಾ ಕೌಶಲ್ಯ ಮೇಳ ಉದ್ಘಾಟನೆ

    October 13, 2026

    ದೆಹಲಿಯ ಬೀದಿಯಲ್ಲಿ ಕಾರ್ಯಕರ್ತರೊಂದಿಗೆ ಸರಳತೆಯ ಸಹಭೋಜನ: ಜನರ ನಡುವಿನ ನಾಯಕ ಬಿ.ಕೆ. ಹರಿಪ್ರಸಾದ್

    October 13, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.