ಮೈಸೂರು: ಮಾರ್ಚ್ 22ರಂದು ಕರ್ನಾಟಕ ಬಂದ್ ಮಾಡೇ ಮಾಡುತ್ತೇವೆಂದು ಕನ್ನಡ ಚಳುವಳಿ ಹೋರಾಟಗಾರ ವಾಟಾಳ್ ನಾಗರಾಜ್ ಹೇಳಿದ್ದಾರೆ.
ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆಕಾಶ ಭೂಮಿಗೆ ಇಳಿದರೂ ಸರಿ, ಬಂದ್ ದಿನಾಂಕ ಬದಲಾಯಿಸುವುದಿಲ್ಲ ಎಂದಿದ್ದಾರೆ.
ಗಡಿ ನಾಡು, ಕನ್ನಡ ಹಾಗೂ ಕನ್ನಡಿಗರ ಶಕ್ತಿಯು ಅಖಂಡ ಕರ್ನಾಟಕವನ್ನು ಬಂದ್ ಮಾಡುವ ಮೂಲಕ ಪ್ರದರ್ಶನವಾಗಬೇಕು. ಕನ್ನಡಿಗರ ಶಕ್ತಿ ದೇಶಕ್ಕೆ ಗೊತ್ತಾಗಬೇಕು ಎಂದರೆ ಮಾ.22ರಂದು ಕರ್ನಾಟಕ ಸಂಪೂರ್ಣ ಬಂದ್ ಆಗಬೇಕು ಎಂದು ಒತ್ತಾಯಿಸಿದರು.
ಉತ್ತರ ಕರ್ನಾಟಕ, ಹೈದರಾಬಾದ್ ಕರ್ನಾಟಕ ಭಾಗದ ಜಿಲ್ಲೆಗಳು ಅಭಿವೃದ್ಧಿಯಾಗಬೇಕಾಗಿದೆ. ಕೇಂದ್ರ ಸರ್ಕಾರವು ರಾಜ್ಯವನ್ನು ಕಡೆಗಣಿಸಿದೆ. ಈ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ಎಂದೆಂದೂ ಕಂಡಿರದ ಬಂದ್ ಆಗಬೇಕು. ಈಗಾಗಲೇ 1900ಕ್ಕೂ ಹೆಚ್ಚು ಕನ್ನಡಪರ ಸಂಘಟನೆಗಳು ಬಂದ್ ಗೆ ಬೆಂಬಲ ಸೂಚಿಸಿವೆ. ಈ ಬಂದ್ ಕನ್ನಡಿಗರಿಗಾಗಿ ನಡೆಯುತ್ತಿರುವ ಬಂದ್ ಆಗಿದೆ ಎಂದು ಅವರು ಹೇಳಿದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4