ಬೆಂಗಳೂರಿನ ಕುಂದಲಹಳ್ಳಿಯ ರಾಮೇಶ್ವರಂ ಕೆಫೆಯಲ್ಲಿ ಸಂಭವಿಸಿದ ನಿಗೂಢ ಸ್ಪೋಟಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಡಿಜಿ, ಐಜಿಪಿ ಅಲೋಕ್ ಮೋಹನ್, ಸ್ಪೋಟದಲ್ಲಿ 9 ಮಂದಿಗೆ ಗಾಯಗಳಾಗಿದೆ. ಗಾಯಾಳುಗಳಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು ಘಟನೆಯ ಹಿಂದಿರುವವರನ್ನು ಪತ್ತೆ ಹಚ್ಚುತ್ತೇವೆ ಎಂದು ತಿಳಿಸಿದ್ದಾರೆ.
ಘಟನೆ ಕುರಿತು ಮಾತನಾಡಿದ ಡಿಜಿ, ಐಜಿಪಿ ಅಲೋಕ್ ಮೋಹನ್, ಘಟನೆ ಬಗ್ಗೆ ಸಿಎಂ ಸಿದ್ದರಾಮಯ್ಯ ಹಾಗೂ ಗೃಹ ಸಚಿವರು ಮಾಹಿತಿ ಪಡೆದಿದ್ದಾರೆ. ಮಧ್ಯಾಹ್ನ 1 ಗಂಟೆಗೆ ಸ್ಪೋಟವಾಗಿದೆ. ಘಟನಾ ಸ್ಥಳಕ್ಕೆ ಎಫ್ ಎಸ್ ಎಲ್ ತಂಡ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದೆ. ಎಫ್ ಎಸ್ ಎಲ್ ಸಂಪೂರ್ಣ ಪರೀಶೀಲನೆ ಬಳಿಕ ಮಾಹಿತಿ ನೀಡುತ್ತೇವೆ ಎಂದರು.
ಆರೋಪಿ ಏನು ತಂದಿದ್ದ ಅನ್ನೋದು ಗೊತ್ತಾಗಲಿದೆ. ಎಲ್ಲಾ ತನಿಖಾ ಸಂಸ್ಥೆಗಳಿಗೂ ಮಾಹಿತಿ ಹೋಗಿದೆ. ಐಬಿಗೆ ಮಾಹಿತಿ ನೀಡಿದ್ದೇವೆ. ತನಿಖೆ ನಡೆಸುತ್ತಿದ್ದಾರೆ. ಸ್ಪೋಟದ ಹಿಂದೆ ಇರುವವರನ್ನ ಪತ್ತೆ ಹಚ್ಚುತ್ತೇವೆ ಎಂದು ಅಲೋಕ್ ಮೋಹನ್ ತಿಳಿಸಿದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


