ಸರಗೂರು: ಎಂಟು ವಿಧಾನಸಭಾ ಕ್ಷೇತ್ರಗಳಲ್ಲಿ ಅತಿಹೆಚ್ಚು ಮತಗಳನ್ನು ಪಡೆದುಕೊಳ್ಳುತ್ತೇವೆ. ನೂರು ನೂರಕ್ಕೂ ಅಷ್ಟು ಚಾಮರಾಜನಗರ ಮೀಸಲು ಲೋಕಸಭಾ ಕ್ಷೇತ್ರದಲ್ಲಿ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಸುನಿಲ್ ಬೋಸ್ ನನ್ನು ಗೆಲ್ಲಿಸಿಕೊಂಡು ಬರುತ್ತೇವೆ ಎಂದು ಶಾಸಕ ಅನಿಲ್ ಚಿಕ್ಕಮಾದು ಭರವಸೆ ನೀಡಿದರು.
ತಾಲ್ಲೂಕಿನ ನಾಡ ದೇವತೆ ಚಿಕ್ಕದೇವಮ್ಮನ ಬೆಟ್ಟಕ್ಕೆ ಮಂಗಳವಾರದಂದು, ಕಾಂಗ್ರೆಸ್ ಪಕ್ಷದ ಲೋಕಸಭಾ ಅಭ್ಯರ್ಥಿ ಸುನೀಲ್ ಬೋಸ್ ಹಾಗೂ ಶಾಸಕ ಅನಿಲ್ ಚಿಕ್ಕಮಾದು, ಕಾರ್ಯಕರ್ತರ ಜೊತೆಗೂಡಿ ತಾಯಿ ಚಿಕ್ಕದೇವಮ್ಮನ ದೇವಸ್ಥಾನದ ಭೇಟಿ ನೀಡಿ ತಾಯಿಯ ದರ್ಶನ ಪಡೆದು ಸುದ್ದಿಗಾರರೊಂದಿಗೆ ಮಾತನಾಡಿದರು.

ಸರಗೂರು ಮತ್ತು ಕೋಟೆ ತಾಲ್ಲೂಕಿನ ಜನತೆ ವಿಧಾನಸಭಾ ಚುನಾವಣೆಯಲ್ಲಿ ನನಗೆ ಅತಿಹೆಚ್ಚು ಮತಗಳನ್ನು ನೀಡಿ ಆರ್ಶೀವಾದ ನೀಡಿ ಗೆಲ್ಲಿಸಿದ್ದಾರೆ.
ಇದೇ ಸಂದರ್ಭದಲ್ಲಿ, ನನ್ನ ರಾಜಕೀಯ ಗುರುಗಳಾದ ಆರ್. ಧ್ರುವನಾರಾಯಣ್ ಹಾಗೂ ನಮ್ಮ ತಂದೆ ಚಿಕ್ಕಮಾದುರವರನ್ನು ಸ್ಮರಣೆ ಮಾಡಿಕೊಳ್ಳುತ್ತಾ, ನಮ್ಮ ಎಸಿಸಿ ರಾಷ್ಟ್ರ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಎಚ್ ಸಿ ಮಹದೇವಪ್ಪ ಇವರ ನೇತೃತ್ವದಲ್ಲಿ ಲೋಕಸಭಾ ಚುನಾವಣೆಯನ್ನು ಎದುರಿಸಲು ನಮ್ಮ ನಾಯಕರು ಮುಂದಾಗಿದ್ದಾರೆ ಎಂದರು.
ಎಂಟು ವಿಧಾನಸಭಾ ಕ್ಷೇತ್ರಗಳಲ್ಲಿ ಅತಿಹೆಚ್ಚು ಮತಗಳನ್ನು ಪಡೆದುಕೊಳ್ಳುತ್ತೇವೆ. ನೂರು ನೂರಕ್ಕೂ ಅಷ್ಟು ಚಾಮರಾಜನಗರ ಮೀಸಲು ಲೋಕಸಭಾ ಕ್ಷೇತ್ರದಲ್ಲಿ ಚುನಾವಣೆಯಲ್ಲಿ, ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಸುನೀಲ್ ಬೋಸ್ ರವರು ಗೆದ್ದೇ ಗೆಲ್ಲುತ್ತೇವೆ ಎಂದು ತಾಯಿಯ ದರ್ಶನ ಪಡೆದು ನಮ್ಮ ಪಕ್ಷದ ಅಭ್ಯರ್ಥಿ ಸುನೀಲ್ ಬೋಸ್ ರನ್ನು ಗೆಲ್ಲಿಸಿ ಕೊಂಡು ಬರುತ್ತೇವೆ ಎಂದು ಹೇಳಿದರು. ನಂತರ ಅಸೆಂಬ್ಲಿ ಗೆ ಕಳಿಹಿಸುತ್ತೇವೆ ಎಂದು ನಮಗೆ ಆತ್ಮವಿಶ್ವಾಸ ಇದೆ. ನಮ್ಮ ಜನ ನಮ್ಮ ಪಕ್ಷವನ್ನು ಕೈಬಿಡುವುದಿಲ್ಲ ಎಂದು ಹೇಳಿದರು.
ಎಲ್ಲರ ಜೊತೆ ಬೋಸ್ ರವರು ಒಳ್ಳೆಯ ವ್ಯಕ್ತಿ. ಇವರು ಪ್ರೀತಿ ಸ್ನೇಹ, ವಿಶ್ವಾಸದಿಂದ ನಡೆದುಕೊಂಡು ಬರುತ್ತಿದ್ದಾರೆ. ಸರಳ ಸಜ್ಜನಿಕೆಯ ವ್ಯಕ್ತಿತ್ವ ಇವರದು. ಉತ್ತಮ ವ್ಯಕ್ತಿಯನ್ನು ನಮ್ಮ ಪಕ್ಷದ ನಾಯಕರು ಆಯ್ಕೆ ಮಾಡಿಕೊಂಡಿದ್ದಾರೆ. ಆದ್ದರಿಂದ ನಾವುಗಳು ಈ ಬಾರಿ ಎಚ್ ಡಿ ಕೋಟೆ ವಿಧಾನಸಭಾ ಕ್ಷೇತ್ರವನ್ನು ವಿಶೇಷ ಪ್ರೀತಿಯನ್ನು ಇಟ್ಟುಕೊಂಡಿದ್ದಾರೆ. ಮೈಸೂರು ಉಸ್ತುವಾರಿ ಸಚಿವರಾದ ಮಹದೇವಪ್ಪರವರು ಹೆಚ್ಚಿನ ರೀತಿಯಲ್ಲಿ ಅನುದಾನವನ್ನು ಬಳಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಅದರಿಂದ ಸರಗೂರು ತಾಲ್ಲೂಕಿನಿಂದ ಅತಿಹೆಚ್ಚು ಮತಗಳನ್ನು ನಮ್ಮ ಪಕ್ಷದ ಅಭ್ಯರ್ಥಿ ಸುನೀಲ್ ಬೋಸ್ ರವರ ಕೈ ಬಲಪಡಿಸಿ ಎಂದು ಮನವಿ ಮಾಡಿಕೊಂಡರು.
ಬಿಜೆಪಿ ಮತ್ತು ಜೆಡಿಎಸ್ ಪಕ್ಷದಿಂದ ಹಿರಿಯ ರಾಜಕಾರಣಿ ಮಾಜಿ ಸಚಿವರು ಕೋಟೆ ಎಂ ಶಿವಣ್ಣ ರವರು ನಮ್ಮ ಕಾಂಗ್ರೆಸ್ ಪಕ್ಷಕ್ಕೆ ಸೇರಿದ್ದಾರೆ. ನಮಗೆ ಇನ್ನೂ ಆನೆಬಲ ಬಂದಂತಾಗಿದೆ. ಇದರಿಂದ ಇನ್ನೂ ಕಾಂಗ್ರೆಸ್ ಪಕ್ಷಕ್ಕೆ ಸೇರುವರು ಕಾರ್ಯಕರ್ತರು ಇದ್ದಾರೆ. ಮುಂದಿನ ದಿನಗಳಲ್ಲಿ ನಮ್ಮ ಪಕ್ಷಕ್ಕೆ ಬರಮಾಡಿಕೊಳ್ಳುತ್ತೇವೆ. ನಮ್ಮ ಮುಖ್ಯಮಂತ್ರಿ ಸಿದ್ದರಾಮಯ್ಯರವರ ನೇತೃತ್ವದಲ್ಲಿ, ರಾಜ್ಯದಲ್ಲಿ ಐದು ಗ್ಯಾರಂಟಿ ಯೋಜನೆಗಳನ್ನು ಬಡವರ ಪರವಾಗಿ ಅನುಕೂಲವಾಗಲಿ ಎಂದು ಗ್ಯಾರಂಟಿ ರೂಪಿಸಿದರು . ನಮ್ಮ ತಾಲ್ಲೂಕಿನಿಂದ ಅತಿಹೆಚ್ಚು ಮತಗಳನ್ನು ನೀಡುತ್ತಾ, ಇನ್ನಷ್ಟು ನಮ್ಮ ಪಕ್ಷವನ್ನು ಬಲಪಡಿಸುತ್ತೇವೆ ಎಂದರು.
ನಂತರ ಕಾಂಗ್ರೆಸ್ ಪಕ್ಷದ ಚಾಮರಾಜನಗರ ಮೀಸಲು ಲೋಕಸಭಾ ಅಭ್ಯರ್ಥಿ ಸುನೀಲ್ ಬೋಸ್ ಮಾತನಾಡಿ, ವಿಧಾನಸಭಾ ಕ್ಷೇತ್ರದ ಜನತೆ ನಮ್ಮ ಪಕ್ಷದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ರಾಜ್ಯದ ನಾಯಕರು ಜೊತೆಗೂಡಿ ರಾಜ್ಯದ ಬಡಜನರಿಗೆ ಹಾಗೂ ಸಾರ್ವಜನಿಕರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿ ತಂದು ಜನರಿಗೆ ಅನುಕೂಲವಾಗಿದೆ. ನಮ್ಮ ದಿ ಮಾಜಿ ಸಂಸದ ಆರ್ ಧ್ರುವನಾರಾಯಣ್ ರವರು ಎರಡು ಬಾರಿ ಎಚ್ ಡಿ ಕೋಟೆ ಮತ್ತು ಸರಗೂರು ತಾಲ್ಲೂಕಿನಿಂದ ಬಹುಮತದಿಂದ ಗೆಲ್ಲಿಸಿ ಕೊಟ್ಟಿದ್ದೀರಿ. ಅವರು ರಾಷ್ಟ್ರಕ್ಕೆ ಮೊದಲನೇ ಸಂಸದರು ಎಂದು ಹೆಸರು ಪಡೆದಿದ್ದಾರೆ. ನಾನು ಕೂಡಾ ಅವರಂತೆ ಕೆಲಸ ಮಾಡುತ್ತೇನೆ. ನನ್ನನ್ನು ಗೆಲ್ಲಿಸಿ ಕೊಂಡರೆ ತಾಲ್ಲೂಕಿನ ಅಭಿವೃದ್ಧಿ ಪಡಿಸುತ್ತೇನೆ . ಅನಿಲ್ ಚಿಕ್ಕಮಾದು ಎರಡು ಬಾರಿ ಶಾಸಕರಾಗಿ ಆಯ್ಕೆಯಾದ ನಂತರ ತಾಲ್ಲೂಕಿನ ಬಗ್ಗೆ ತುಂಬಾ ಅಭಿವೃದ್ಧಿ ಕೆಲಸ ಮಾಡಿಕೊಂಡು ಬಂದಿದ್ದಾರೆ. ಅವರ ಮಾರ್ಗದರ್ಶನದಲ್ಲಿ ಈ ಚುನಾವಣೆಯನ್ನು ಎದುರಿಸಲು ನಿಮ್ಮ ಮುಂದೆ ಬಂದಿದ್ದೇನೆ. ಎಲ್ಲರ ಪ್ರೀತಿ ವಿಶ್ವಾಸ ನಮ್ಮ ಮತ್ತು ನಮ್ಮ ಪಕ್ಷದ ಮೇಲೆ ಇರಲಿ ಎಂದು ಮನವಿ ಮಾಡಿದರು.
ತಾಲ್ಲೂಕಿನ ನಾನು ಎಂಟು ವಿಧಾನಸಭಾ ಕ್ಷೇತ್ರದ ಶಾಸಕರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಕೆಲಸ ಮಾಡುತ್ತೇನೆ. ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮಾರ್ಗದರ್ಶನದಲ್ಲಿ ನಡೆಯುವಂತೆ ಕೆಲಸ ಮಾಡುತ್ತೇನೆ. ತಾಲ್ಲೂಕಿನ ಜನತೆ ಸೇವೆ ಮಾಡಲು ಅವಕಾಶ ಮಾಡಿಕೊಡಿ ಎಂದು ಜನತೆ ಸುದ್ದಿಯ ಮೂಲಕ ಮತವನ್ನು ನೀಡಿ ಎಂದು ಮನವಿ ಮಾಡಿಕೊಂಡರು.
ಈ ಸಂದರ್ಭದಲ್ಲಿ ಮೈಮುಲ್ ಈರೇಗೌಡ, ಸಂವಿಧಾನ ಸಂರಕ್ಷಣಾ ಸಮಿತಿ ಅಧ್ಯಕ್ಷ ಬಿರ್ವಾಳ್ ಬಸವರಾಜು, ನಾಯಕ ಸಮಾಜ ಅಧ್ಯಕ್ಷ ಶಂಭುಲಿಂಗನಾಯಕ, ಪಿಎಲ್ಡಿ ಬ್ಯಾಂಕ್ ನಿರ್ದೇಶಕ ಹೂವಿನಕೊಳ ಸಿದ್ಧರಾಜು, ಎಪಿಎಂಸಿ ಮಾಜಿ ಅಧ್ಯಕ್ಷ ದೇವಲಾಪುರ ಸಿದ್ದರಾಜು, ವರಣಾಮಹೇಶ್, ಹಾದನೂರು ಗ್ರಾಪಂ ಉಪಾಧ್ಯಕ್ಷ ಪ್ರಕಾಶ್, ಗ್ರಾಪಂ ಸದಸ್ಯ ಭಾಗ್ಯ ಕೆಂಪಸಿದ್ದ, ವಾಹನ ಚಾಲಕರ ಸಂಘದ ಅಧ್ಯಕ್ಷ ಬಿರ್ವಾಳ್ ಚಿಕ್ಕಣ್ಣ, ಸತೀಶ್ ಗೌಡ,ಶಿವಪ್ಪ ಕೋಟೆ, ಇನ್ನೂ ಮುಖಂಡರು ಸೇರಿದಂತೆ ಕಾರ್ಯಕರ್ತರು ಹಾಜರಿದ್ದರು.
ವರದಿ: ಹಾದನೂರು ಚಂದ್ರ
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


