ಬೆಂಗಳೂರು: ವಿಧಾನಸೌಧ ಪ್ರವೇಶಕ್ಕೆ ಇನ್ಮುಂದೆ ಬೇಕಾಬಿಟ್ಟಿ ಪಾಸ್ ಗಳನ್ನು ವಿತರಿಸುವುದಿಲ್ಲ ಎಂದು ಗೃಹ ಸಚಿವ ಜಿ. ಪರಮೇಶ್ವರ್ ಹೇಳಿದ್ದಾರೆ.
ವಿಧಾನಸೌಧ ದ್ವಾರದ ಮೆಟಲ್ ಡಿಟೆಕ್ಟರ್, ನೂತನ ಬ್ಯಾಗೇಜ್ ಸ್ಕ್ಯಾನರ್ ಯಂತ್ರಗಳನ್ನು ಪರಿಶೀಲಿಸಿ, ಡಿಸಿಪಿ ನೇತೃತ್ವದಲ್ಲಿ ಭದ್ರತಾ ಕ್ರಮಗಳ ಪರಿಶೀಲನೆ ಹಾಗೂ ಮಾಹಿತಿಯನ್ನು ಪಡೆದರು.
ನಂತರ ಮಾತನಾಡಿದ ಅವರು, ವಿಧಾನಸೌಧಕ್ಕೆ ಬರಬೇಕು ಅಂದರೆ ಇನ್ನು ಮುಂದೆ ಕ್ಯೂ ಆರ್ ಕೋಡ್ ಇರುವ ಪಾಸ್ ಗಳನ್ನು ನೀಡಲಾಗುತ್ತದೆ ಎಂದರು. ವಿಧಾನಸೌಧದಲ್ಲಿ ಯಾರಾದರೂ ಮೆಟಲ್ ಸಾಧನ ತೆಗೆದುಕೊಂಡು ಹೋಗುತ್ತಿದ್ದರೆ ಈ ಬ್ಯಾಗೇಜ್ ಸ್ಕ್ಯಾನರ್‌ನಲ್ಲಿ ಪತ್ತೆಯಾಗುತ್ತದೆ. ಕಳೆದ 3 ವರ್ಷಗಳಿಂದ ಈ ಬ್ಯಾಗೇಜ್ ಸ್ಕ್ಯಾನರ್ ಹಾಳಾಗಿತ್ತು. ಈಗ ಸಿಎಂ ಹಣ ಬಿಡುಗಡೆ ಮಾಡಿದ ಮೇಲೆ ಈ ಬ್ಯಾಗೇಜ್ ಸ್ಕ್ಯಾನರ್ ಖರೀದಿಸಿದ್ದೇವೆ ಎಂದು ಹೇಳಿದರು.
ವಿಧಾನಸೌಧದಲ್ಲಿ ಭದ್ರತೆಯನ್ನು ಇನ್ನೂ ಜಾಸ್ತಿ ಮಾಡುತ್ತೇವೆ. ಈ ಬಾರಿಯ ಅಧಿವೇಶನದಲ್ಲಿ ನಾವು ಹೆಚ್ಚು ಭದ್ರತೆ ಕೈಗೊಳ್ಳುತ್ತೇವೆ. ಕಳೆದ ವಿಧಾನ ಸಭೆ ಅಧಿವೇಶನ ಸಮಯದಲ್ಲಿ ಬ್ಯಾಗೇಜ್ ಸ್ಕ್ಯಾನರ್ ಗಳು ಇರಲಿಲ್ಲ. ಈಗ 2-3 ಕೋಟಿ ರೂ. ಖರ್ಚು ಮಾಡಿ 4 ಗೇಟ್ ಗಳಲ್ಲಿ ಹೊಸ ಬ್ಯಾಗೇಜ್ ಸ್ಕ್ಯಾನರ್ ಅಳವಡಿಸಿದ್ದೇವೆ ಎಂದು ಮಾಹಿತಿ ನೀಡಿದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296