ನವದೆಹಲಿ: ಮುಂದಿನ ತಿಂಗಳು ನಡೆಯಲಿರುವ ದೆಹಲಿ ವಿಧಾನಸಭಾ ಚುನಾವಣೆಯ ಪ್ರಚಾರದ ವೇಳೆ ಕಲ್ಕಾಜಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ರಮೇಶ್ ಬಿಧುರಿ ನೀಡಿರುವ ಹೇಳಿಕೆ ಇದೀಗ ವಿವಾದಕ್ಕೀಡಾಗಿದೆ.
ಚುನಾವಣೆಯಲ್ಲಿ ಗೆದ್ದರೆ ಕಾಂಗ್ರೆಸ್ ಸಂಸದೆ ಪ್ರಿಯಾಂಕಾ ಗಾಂಧಿಯ ಕೆನ್ನೆಯಂತೆ ನಯವಾದ ರಸ್ತೆಗಳನ್ನು ಮಾಡುತ್ತೇವೆ ಎಂದು ರಮೇಶ್ ಬಿಧುರಿ ಹೇಳಿಕೆ ನೀಡಿದ್ದು, ಇದರ ವಿರುದ್ಧ ಕಾಂಗ್ರೆಸ್ ನಾಯಕರು ತೀವ್ರ ವಾಗ್ದಾಳಿ ನಡೆಸಿದ್ದಾರೆ.
ಸದ್ಯ ರಮೇಶ್ ಬಿಧುರಿ ನೀಡಿರುವ ಹೇಳಿಕೆ ಸೋಶಿಯಲ್ ಮೀಡಿಯಾದಲ್ಲಿ ಸಾಕಷ್ಟು ಸದ್ದು ಮಾಡುತ್ತಿದ್ದು, ಭಾರೀ ಚರ್ಚೆಗೀಡಾಗಿದೆ.
ಬಿಧುರಿ ಅವರ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿರುವ ಕಾಂಗ್ರೆಸ್ ನಾಯಕಿ ಸುಪ್ರಿಯಾ ಶ್ರೀನೇಟ್, ಇದು ನಾಚಿಕೆಗೇಡು” ಮತ್ತು ಬಿಜೆಪಿ ಮಹಿಳಾ ವಿರೋಧಿ ಮನಸ್ಥಿತಿಯನ್ನು ಹೊಂದಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಆಪ್ ಸಂಸದ ಸಂಜಯ್ ಸಿಂಗ್ ಕೂಡ ರಮೇಶ್ ಬಿಧುರಿಯವರ ಹೇಳಿಕೆಯನ್ನು ಖಂಡಿಸಿದ್ದಾರೆ. ಎಕ್ಸ್ನಲ್ಲಿ ವಿಡಿಯೋವೊಂದನ್ನು ಹಂಚಿಕೊಳ್ಳುವ ಮೂಲಕ ಬಿಜೆಪಿಯ ನಾಯಕತ್ವದಲ್ಲಿ ದೆಹಲಿಯ ಮಹಿಳೆಯರು ಸುರಕ್ಷಿತವಾಗಿರಬಹುದೇ ಎಂದು ಪ್ರಶ್ನಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx