ಚಿಕ್ಕಮಗಳೂರು: ನಕ್ಸಲಿಸಂ ತೊರೆದು ಮುಖ್ಯವಾಹಿನಿಗೆ ಬಂದಿದ್ದ 6 ನಕ್ಸಲರು ಕಾಡಿನಲ್ಲಿ ಬಚ್ಚಿಟ್ಟಿದ್ದ ಶಸ್ತ್ರಾಸ್ತ್ರಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಮೇಗೂರು ಅರಣ್ಯ ಪ್ರದೇಶದಲ್ಲಿ ಆರು ಬಂದೂಕು ಹಾಗೂ ಮದ್ದು ಗುಂಡು ದೊರೆತಿವೆ. ಅಂತೆಯೇ ಒಂದು ಎ.ಕೆ–56, ಮೂರು 303 ರೈಫಲ್, ಹನ್ನೆರಡು ಬೋರ್ ಎಸ್ ಬಿಬಿಎಲ್, ಒಂದು ಸ್ವದೇಶ ನಿರ್ಮಿತ ಬಂದೂಕು ಸಿಕ್ಕಿದೆ. 7.62 ಎಂಎಂ ಎ.ಕೆ. ಮದ್ದುಗುಂಡು–11, 303– ರೈಫಲ್ ಮದ್ದುಗುಂಡು -– 133, 12 ಬೋರ್ ಕಾರ್ಟ್ರಿಡ್ಜಸ್ -– 24, ಸ್ವದೇಶ ನಿರ್ಮಿತ ಪಿಸ್ತೂಲ್ ಮದ್ದುಗುಂಡುಗಳು -– 8 ಸೇರಿ ಒಟ್ಟು 176 ಮದ್ದುಗುಂಡು, ಎ.ಕೆ–56 ಖಾಲಿ ಮ್ಯಾಗ್ಜಿನ್- – 01 ದೊರೆತಿದೆ.
ಜಯಪುರ ಠಾಣೆಯಲ್ಲಿ ಪ್ರಕರಣವನ್ನು ದಾಖಲಿಸಲಾಗಿದೆ. ಶಸ್ತ್ರಾಸ್ತ್ರ ಕಾಯ್ದೆಯ ಸೆಕ್ಷನ್ 251 (1) (ಬಿ), 7 ಮತ್ತು 25 (1ಎ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಕ್ರಮ ಅಮಟೆ ತಿಳಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx