ಕಾಸರಗೋಡು ಸೇರಿದಂತೆ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ, ಮಲೆನಾಡು ಹಾಗೂ ಉತ್ತರ ಒಳನಾಡು ಜಿಲ್ಲೆಗಳಲ್ಲಿ ಒಣಹವೆ ಮುಂದುವರಿಯಲಿದೆ.
ದಕ್ಷಿಣ ಒಳನಾಡಿನ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಬಂಗಾಳಕೊಲ್ಲಿಯ ಚಂಡಮಾರುತದ (ಪೆಂಗಾಲ್) ಪ್ರಭಾವದಿಂದ ಉತ್ತರ ಭಾರತ ಕಡೆಯಿಂದ ಶುಶ್ಕ ಹಾಗೂ ಶೀತ ಗಾಳಿ ಸೆಳೆಯಲ್ಪಡುತ್ತಿರುವುದರಿಂದ ಉತ್ತಮ ಛಳಿಯ ವಾತಾವರಣ ಸೃಷ್ಟಿಯಾಗಿದೆ.
ಈ ಚಂಡಮಾರುತವು ನವೆಂಬರ್ 30ರಂದು ಉತ್ತರ ತಮಿಳುನಾಡು ಕರಾವಳಿಯ ಮೂಲಕ ಭೂ ಪ್ರವೇಶಿಸುತ್ತಿದ್ದಂತೆಯೆ ರಾಜ್ಯದಲ್ಲಿ ಛಳಿಯ ವಾತಾವರಣವು ಕಡಿಮೆಯಾಗಿ ಮಳೆ ಆರಂಭವಾಗುವ ಮುನ್ಸೂಚನೆ ಇದೆ.
ಡಿಸೆಂಬರ್ 2 ಅಥವಾ 3ರಂದು ಚಂಡಮಾರುತವು ಕೇರಳದ ಕಾಸರಗೋಡು ಹಾಗೂ ಕಣ್ಣೂರು ಮಧ್ಯೆ ಅರಬ್ಬಿ ಸಮುದ್ರಕ್ಕೆ ಪ್ರವೇಶಿಸುವ ಸಾಧ್ಯತೆ ಇದೆ.
ಈ ಚಂಡಮಾರುತವು ಅರಬ್ಬಿ ಸಮುದ್ರದಲ್ಲಿ ಇರುವಷ್ಟು ಸಮಯವೂ ( ಬಂಗಾಳಕೊಲ್ಲಿ ಕಡೆಯಿಂದ ಗಾಳಿ ಸೆಳೆಯಲ್ಪಡುವುದರಿಂದ) ರಾಜ್ಯದ ದಕ್ಷಿಣ ಒಳನಾಡು, ಮಲೆನಾಡು ಹಾಗೂ ದಕ್ಷಿಣ ಕರಾವಳಿ ಭಾಗಗಳಲ್ಲಿ ಹಿಂಗಾರು ರೀತಿಯ ಮಳೆ ಮುಂದುವರಿಯುವ ಸಾಧ್ಯತೆಗಳಿವೆ. ಸುಮಾರು ಡಿಸೆಂಬರ್ ಮೊದಲ ವಾರ ಪೂರ್ತಿ ಮಳೆಯ ಸಾಧ್ಯತೆ ಇದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296