nammatumakuru

    Subscribe to Updates

    Get the latest creative news from FooBar about art, design and business.

    What's Hot

    ಸ್ತನ್ಯಪಾನ ಬೆಂಬಲಿಸಿ, ಸದೃಢ ಜಗತ್ತು ನಿರ್ಮಿಸಿ: ಡಾ.ರವಿಕುಮಾರ್ ಕರೆ

    August 7, 2026

    ಆಗಸ್ಟ್ 8ರಂದು ಸರಗೂರಿನಲ್ಲಿ ಹೆಚ್.ಡಿ. ಕೋಟೆ ಹಾಗೂ ಸರಗೂರು ತಾಲೂಕು ಮಾದರ ಮಹಾಸಭಾ ಉದ್ಘಾಟನೆ ಮತ್ತು ಪ್ರತಿಭಾ ಪುರಸ್ಕಾರ

    August 7, 2026

    ಡಾ.ಎಚ್.ಸಿ.ಮಹದೇವಪ್ಪಗೆ ಸಚಿವ ಸ್ಥಾನ ನೀಡಲು ಆಗ್ರಹ: ಸರಗೂರಿನಲ್ಲಿ ಅಧಿಕರ್ನಾಟಕ ಮಹಾಸಭಾ ಸಭೆ

    August 7, 2026
    Facebook Twitter Instagram
    ಟ್ರೆಂಡಿಂಗ್
    • ಸ್ತನ್ಯಪಾನ ಬೆಂಬಲಿಸಿ, ಸದೃಢ ಜಗತ್ತು ನಿರ್ಮಿಸಿ: ಡಾ.ರವಿಕುಮಾರ್ ಕರೆ
    • ಆಗಸ್ಟ್ 8ರಂದು ಸರಗೂರಿನಲ್ಲಿ ಹೆಚ್.ಡಿ. ಕೋಟೆ ಹಾಗೂ ಸರಗೂರು ತಾಲೂಕು ಮಾದರ ಮಹಾಸಭಾ ಉದ್ಘಾಟನೆ ಮತ್ತು ಪ್ರತಿಭಾ ಪುರಸ್ಕಾರ
    • ಡಾ.ಎಚ್.ಸಿ.ಮಹದೇವಪ್ಪಗೆ ಸಚಿವ ಸ್ಥಾನ ನೀಡಲು ಆಗ್ರಹ: ಸರಗೂರಿನಲ್ಲಿ ಅಧಿಕರ್ನಾಟಕ ಮಹಾಸಭಾ ಸಭೆ
    • ಸರಗೂರು: ಎಸ್.ಸಿ. ಮಹದೇವಪ್ಪ ಅವರನ್ನು ಸಚಿವ ಸಂಪುಟದಿಂದ ಕೈಬಿಟ್ಟಿರುವುದಕ್ಕೆ ಆಕ್ರೋಶ — ಪ್ರತಿಭಟನೆಯ ಎಚ್ಚರಿಕೆ
    • ರಸ್ತೆ ಗುಂಡಿ ತಪ್ಪಿಸಲು ಹೋಗಿ ಲಾರಿ ಡಿಕ್ಕಿ: ನವವಿವಾಹಿತೆ ದಾರುಣ ಸಾವು, ಸಾರ್ವಜನಿಕರ ತೀವ್ರ ಆಕ್ರೋಶ
    • ಸರಗೂರು: ಸಾಧಕ ಪ್ರಸನ್ನ ಕುಮಾರ್ ಅವರಿಗೆ ‘ಪಟ್ಟಣದ ಸ್ನೇಹಿತರು’ ಬಳಗದಿಂದ ಸನ್ಮಾನ
    • ಔರಾದ್: ಗ್ರಾಮೀಣ ಬದುಕಿಗೆ ಆಸರೆಯಾದ ‘ವಿಬಿ-ಜಿ ರಾಮ್ ಜಿ’ ಯೋಜನೆ – 125 ದಿನಗಳ ಉದ್ಯೋಗ, ದಿನಗೂಲಿ ₹382ಕ್ಕೆ ಏರಿಕೆ
    • ಎದೆಹಾಲು ಮಗುವಿನ ಮೊದಲ ಸಂಪೂರ್ಣ ಆಹಾರ: ಸಾಗರೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ವಿಶ್ವ ಸ್ತನ್ಯಪಾನ ಸಪ್ತಾಹ ಆಚರಣೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಮಾಲಿ ಪಾಟೀಲ್ ಬಂಧುಗಳ ಮದುವೆ ಸಮಾರಂಭದಲ್ಲಿ 501 ಸಸಿಗಳ ವಿತರಣೆ ಕಾರ್ಯ ಶ್ಲಾಘನೀಯ: ಚನ್ನಪ್ಪ ಕೆ. ಹೊಸಹಳ್ಳಿ
    ರಾಜ್ಯ ಸುದ್ದಿ December 22, 2024

    ಮಾಲಿ ಪಾಟೀಲ್ ಬಂಧುಗಳ ಮದುವೆ ಸಮಾರಂಭದಲ್ಲಿ 501 ಸಸಿಗಳ ವಿತರಣೆ ಕಾರ್ಯ ಶ್ಲಾಘನೀಯ: ಚನ್ನಪ್ಪ ಕೆ. ಹೊಸಹಳ್ಳಿ

    By adminDecember 22, 2024No Comments2 Mins Read
    raichur

    ರಾಯಚೂರು: ಜಿಲ್ಲೆಯ ಲಿಂಗಸೂಗೂರು ಪಟ್ಟಣದ ಸಾಯಿ ಮಂದಿರದಲ್ಲಿ ಹುಲಿಗುಡ್ಡ ಗ್ರಾಮದ ಪರಿಸರ ಪ್ರೇಮಿಗಳಾದ ಗಣೇಶ ಮಾಲಿ ಪಾಟೀಲ್ ಅವರ ಮದುವೆ ಸಮಾರಂಭದಲ್ಲಿ ಮಾಲಿ ಪಾಟೀಲ್ ಬಂಧುಗಳ ಮತ್ತು ವನಸಿರಿ ಫೌಂಡೇಶನ್ ತಾಲೂಕು ಘಟಕ ಲಿಂಗಸಗೂರು ಸಹಯೋಗದೊಂದಿಗೆ “ಮದುವೆ ಮಂಟಪದಲ್ಲಿ ಪರಿಸರ ಜಾಗೃತಿ”ಎಂಬ ದ್ಯೇಯ ವಾಕ್ಯದೊಂದಿಗೆ 501 ಉಚಿತ ಸಸಿ ವಿತರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.

    ಈ ಕಾರ್ಯಕ್ರಮ ತುಂಬಾ ಅರ್ಥಪೂರ್ಣವಾಗಿ ಜರಗಿತು. ಈ ಸಂಧರ್ಭದಲ್ಲಿ ಕುಟುಂಬದ ವತಿಯಿಂದ ವಿವಿಧ ತಳಿಗಳ 501 ಸಸಿಗಳನ್ನು ವಿತರಿಸಲಾಯಿತು.ವೇದಿಕೆಯ ಮೇಲೆ ನೂತನ ವಧುವರರಿಗೂ ಸಸಿಗಳನ್ನು ಕೊಡುವುದರ ಮೂಲಕ ಶುಭ ಹಾರೈಸಲಾಯಿತು.
    ಮದುವೆಗೆ ಆಗಮಿಸಿದ ಬಂಧುಗಳು ತುಂಬಾ ಆಸಕ್ತಿ ವಹಿಸಿ ವಿವಿಧ ತಳಿಗಳ ಸಸಿಗಳ ಬಗ್ಗೆ ಮಾಹಿತಿ ತಿಳಿದುಕೊಂಡರು ಮತ್ತು ಕೊಂಡೊಯ್ದರು.ಇದೇ ವೇಳೆ ವನಸಿರಿ ಪೌಂಡೇಶನ್ ವತಿಯಿಂದ ಸಸಿಗಳ ವಿತರಣೆಯ ಜೊತೆಗೆ ನೋಂದಣಿ ಕಾರ್ಯ ಕೂಡ ಯಶಸ್ವಿಯಾಗಿ ಜರುಗಿತು.

    ಕಾರ್ಯಕ್ರಮದ ನೇತೃತ್ವದವಹಿಸಿದ ವನಸಿರಿ ಜಾಲತಾಣದ ಅಧ್ಯಕ್ಷರಾದ ಚನ್ನಪ್ಪ ಕೆ. ಹೊಸಹಳ್ಳಿ ಅವರು ಮಾತನಾಡಿ, ಮಾಲಿ ಪಾಟೀಲ್ ಬಂಧುಗಳು ಮದುವೆ ಸಮಾರಂಭದಲ್ಲಿ”ಮದುವೆ ಮಂಟಪದಲ್ಲಿ ಪರಿಸರ ಜಾಗೃತಿ”ಎಂಬ ದ್ಯೇಯ ವಾಕ್ಯದೋದಿಗೆ 501 ಸಸಿಗಳ ಉಚಿತ ವಿತರಣೆ ಕಾರ್ಯಕ್ರಮ ಹಮ್ಮಿಕೊಡಿರುವುದು ತುಂಬಾ ಶ್ಲಾಘನೀಯ. ಈ ಪರಿಸರ ಜಾಗೃತಿ ಕಾರ್ಯಕ್ರಮ ಜನರಲ್ಲಿ ಪರಿಸರ ಸಂರಕ್ಷಣೆಯ ಅರಿವು ಮೂಡಿಸಲು,ಮನೆಯ ಆವರಣದಲ್ಲಿ ಅಂದವಾದ ಕೈತೋಟ ನಿರ್ಮಾಣ ಮಾಡಲು,ಶೋ ಪ್ಲಾಂಟ್, ಇನ್ನಿತರ ಹೂಗಳ ಸಸಿಗಳ ಬಗ್ಗೆ ಅರಿವನ್ನ ಮೂಡಿಸುವುದರ ಜೊತೆಗೆ ಸಸ್ಯ ಸಂರಕ್ಷಣೆಯ ಬಗ್ಗೆ ಅರಿವು ಮೂಡಿಸಲು ನಮಗೆ ಅನುಕೂಲ ಆಯಿತು.

    ಪ್ರತಿಯೊಂದು ಕಾರ್ಯಕ್ರಮದಲ್ಲಿ ನಮ್ಮ ವನಸಿರಿ ಪೌಂಡೇಶನ್ ಇನ್ನೊಬ್ಬರಿಗೆ ಮಾರ್ಗದರ್ಶನವಾಗಲೆಂದು ಇಂತಹ ಕಾರ್ಯಗಳನ್ನು ಮಾಡುತ್ತಾ ಬಂದಿದ್ದೇವೆ ಇಂದು ಈ ಕಾರ್ಯ ತುಂಬಾ ಅದ್ಭುತವಾಗಿ ನೆರವೇರಿತು. ಇದೀರೀತಿ ನಮ್ಮ ಮುಂದಿನ ಪಳಿಗೆಗೆ ಪರಿಸರ ಉಳಿಸುವ ನಿಟ್ಟಿನಲ್ಲಿ ಬರುವಂತಹ ನೂತನ ವಧು ವರರು ಇಂತಹ ಮಾದರಿಯಾದ ಪರಿಸರ ಕಾರ್ಯಕ್ರಮವನ್ನು ತಮ್ಮ ಮದುವೆ ಮಂಟಪದಲ್ಲಿ ಹಮ್ಮಿಕೊಳ್ಳುವುದರ ಜೊತೆಗೆ ಸಪ್ತಪದಿ ತುಳಿಯಬೇಕೆಂಬುದೇ ನಮ್ಮ ವನಸಿರಿಯ ಆಶಯ. ಕಾರ್ಯಕ್ರಮದ ಯಶಸ್ವಿಗೆ ಕಾರಣರಾದ ಮಾಲಿ ಪಾಟೀಲ್ ಕುಟುಂಬಕ್ಕೆ ಮತ್ತು ಇದಕ್ಕೆ ಸಹಕರಿಸಿದ ಕುಟುಂಬದ ವರ್ಗದವರು,ವಕೀಲರ ಸಂಘದ ಪದಾಧಿಕಾರಿಗಳಿಗೆ,ಸ್ನೇಹಿತರಿಗೆ ನಮ್ಮ ವನಸಿರಿ ಪೌಂಡೇಷನ್ ವತಿಯಿಂದ ಹೃತ್ಪೂರ್ವಕ ಧನ್ಯವಾದಗಳನ್ನು ಅರ್ಪಿಸುತ್ತೇನೆ ಎಂದು ತಿಳಿಸಿದರು.

    ಈ ಸಂದರ್ಭದಲ್ಲಿ ಮಸ್ಕಿ ತಾಲೂಕ ಅಧ್ಯಕ್ಷರಾದ ರಾಜು ಬಳಗನೂರ, ವನಸಿರಿ ಪೌಂಡೇಷನ್ ದತ್ತು ಪುತ್ರ ಮುದಿಯಪ್ಪ ಹೊಸಳ್ಳಿ ಕ್ಯಾಂಪ್,ವನಸಿರಿ ಪೌಂಡೇಷನ್ ಒಡನಾಡಿ ಪರಿಸರ ಪ್ರೇಮಿ ಹುಸೇನ್ ಸಾಬ್ ಲಿಂಗಸೂರು, ವನಸಿರಿ ಪೌಂಡೇಷನ್ ಮಾರ್ಗದರ್ಶಕರಾದ ಸುರೇಶ ಕುಲಕರ್ಣಿ ಲಿಂಗಸೂರು, ಪರಿಸರ ಪ್ರೇಮಿ ತೋಷಿಪ್ ಪಾಷಾ ಮುದುಗಲ್ಲು, ಶಿವಾನಂದ ಹುಲಿಗುಡ್ಡ, ಹನುಮಗೌಡ ನಾಯಕ, ವೀರೇಶ ಹುಲಿಗುಡ್ಡ, ಕುಟುಂಬ ವರ್ಗದವರು,ವಕೀಲರ ಸಂಘದ ಸದಸ್ಯರು,ಶಾಲಾ ವಿದ್ಯಾರ್ಥಿಗಳು ಭಾಗವಹಿಸಿದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

     

    admin
    • Website

    Related Posts

    ಸಚಿವ ಸಂಪುಟ ವಿಸ್ತರಣೆ: ಎಚ್.ಕೆ. ಪಾಟೀಲ್ ಗೆ ಸಚಿವ ಸ್ಥಾನ ಕೈತಪ್ಪಿದ್ದಕ್ಕೆ ಗದಗ–ಬೆಟಗೇರಿ ನಗರಸಭೆಯ 22 ಸದಸ್ಯರ ಸಾಮೂಹಿಕ ರಾಜೀನಾಮೆ

    August 5, 2026

    ತುಮಕೂರು ಕಾಂಗ್ರೆಸ್ ನಲ್ಲಿ ಆಕ್ರೋಶ ಸ್ಫೋಟ: ವಿಪಕ್ಷ ಸಾಲಿನಲ್ಲಿ ಆಸನ ಕೋರಿದ ಟಿ.ಬಿ. ಜಯಚಂದ್ರ, ಹೆಚ್ ಡಿಕೆಯನ್ನು ಹೊಗಳಿದ ಶಾಸಕ ಶ್ರೀನಿವಾಸ್

    August 5, 2026

    ಸಚಿವ ಸ್ಥಾನ ಸಿಗಲಿಲ್ಲವೆಂದು ಪಕ್ಷದ ವಿರುದ್ಧ ಮಾತಾಡುವುದು ಸರಿಯಲ್ಲ: ಪ್ರಿಯಾಂಕ್ ಖರ್ಗೆ

    August 5, 2026

    Comments are closed.

    Our Picks

    NEET ವಿವಾದ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

    July 25, 2026

    ನೀಟ್ ಅಕ್ರಮ: ಕಪ್ಪು ಪಟ್ಟಿ ಧರಿಸಿ ಮೌನ ಪ್ರತಿಭಟನೆ: ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ

    July 21, 2026

    ಕೇಂದ್ರ ಸರ್ಕಾರವು ತಕ್ಷಣವೇ ಸೋನಮ್ ವಾಂಗ್ಚುಕ್ ಜೊತೆ ಚರ್ಚಿಸಲು ಆಗ್ರಹಿಸಿ ರಾಷ್ಟ್ರಪತಿಯವರಿಗೆ ಮನವಿ: ತುಮಕೂರಿನಲ್ಲಿ ಆನ್‌ ಲೈನ್ ಸಹಿ ಸಂಗ್ರಹ

    July 18, 2026

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಸ್ತನ್ಯಪಾನ ಬೆಂಬಲಿಸಿ, ಸದೃಢ ಜಗತ್ತು ನಿರ್ಮಿಸಿ: ಡಾ.ರವಿಕುಮಾರ್ ಕರೆ

    August 7, 2026

    ಸರಗೂರು: ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ವಿಶ್ವ ಸ್ತನ್ಯಪಾನ ಸಪ್ತಾಹದ ಅಂಗವಾಗಿ ಜಾಗೃತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ…

    ಆಗಸ್ಟ್ 8ರಂದು ಸರಗೂರಿನಲ್ಲಿ ಹೆಚ್.ಡಿ. ಕೋಟೆ ಹಾಗೂ ಸರಗೂರು ತಾಲೂಕು ಮಾದರ ಮಹಾಸಭಾ ಉದ್ಘಾಟನೆ ಮತ್ತು ಪ್ರತಿಭಾ ಪುರಸ್ಕಾರ

    August 7, 2026

    ಡಾ.ಎಚ್.ಸಿ.ಮಹದೇವಪ್ಪಗೆ ಸಚಿವ ಸ್ಥಾನ ನೀಡಲು ಆಗ್ರಹ: ಸರಗೂರಿನಲ್ಲಿ ಅಧಿಕರ್ನಾಟಕ ಮಹಾಸಭಾ ಸಭೆ

    August 7, 2026

    ಸರಗೂರು: ಎಸ್.ಸಿ. ಮಹದೇವಪ್ಪ ಅವರನ್ನು ಸಚಿವ ಸಂಪುಟದಿಂದ ಕೈಬಿಟ್ಟಿರುವುದಕ್ಕೆ ಆಕ್ರೋಶ — ಪ್ರತಿಭಟನೆಯ ಎಚ್ಚರಿಕೆ

    August 7, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.