ಉತ್ತರ ಕನ್ನಡ: ಜಿಲ್ಲೆಯ ಜೋಯಿಡಾ ತಾಲೂಕಿನಲ್ಲಿ ಆಸ್ಪತ್ರೆಯ ಕೊರತೆಯ ಬಗ್ಗೆ ಪ್ರಶ್ನೆ ಕೇಳಿದ ಪತ್ರಕರ್ತೆಗೆ ಕಾಂಗ್ರೆಸ್ ನ ಹಿರಿಯ ಶಾಸಕ ಹಾಗೂ ಮಾಜಿ ಸಚಿವ ಆರ್.ವಿ. ದೇಶಪಾಂಡೆ ಅವಹೇಳನಾಕಾರಿ ಪದ ಬಳಕೆ ಮಾಡಿರುವ ಘಟನೆ ವರದಿಯಾಗಿದೆ.
ಗ್ಯಾರೆಂಟಿ ನ್ಯೂಸ್ ನ ಮಹಿಳಾ ಪ್ರಧಾನ ಸಂಪಾದಕಿ ರಾಧಾ ಹಿರೇಗೌಡರ್ ಅವರು ಆಸ್ಪತ್ರೆಗೆ ಬಗ್ಗೆ ಪ್ರಶ್ನೆ ಕೇಳಿದ ವೇಳೆ “ನಿನ್ನ ಹೆರಿಗೆಗೆ ಆಸ್ಪತ್ರೆ ಮಾಡಿಸೋಣ, ಚಿಂತಿಸಬೇಡ” ಎಂದು ಪ್ರತಿಕ್ರಿಯೆ ನೀಡಿದ್ದಾರೆ ಎನ್ನಲಾಗಿದೆ.
ಜೋಯಿಡಾ ತಾಲೂಕು ಉತ್ತರ ಕನ್ನಡದ ಅತ್ಯಂತ ಹಿಂದುಳಿದ ಪ್ರದೇಶವಾಗಿದ್ದು, ಇಲ್ಲಿ ಉತ್ತಮ ಆಸ್ಪತ್ರೆಯ ಕೊರತೆಯಿಂದ ಸಾರ್ವಜನಿಕರು ದಶಕಗಳಿಂದ ತೊಂದರೆ ಅನುಭವಿಸುತ್ತಿದ್ದಾರೆ. ನಿಮ್ಮ ಕಾಲಾವಧಿಯಲ್ಲಿ ಜಿಲ್ಲೆಗೆ ಒಂದು ಉತ್ತಮ ಆಸ್ಪತ್ರೆ ನಿರ್ಮಿಸಿಕೊಡಿ ಎಂದು ಮನವಿ ಮಾಡಿದ ವೇಳೆ ಸ್ಪಂದಿಸುವ ಬದಲು, ಉದ್ಧಟತನದ ಮಾತುಗಳನ್ನಾಡಿರುವುದು ಭಾರೀ ಚರ್ಚೆಗೆ ಕಾರಣವಾಗಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC