ಶಿರಾ : ಶಿರಾ ನಗರದಲ್ಲಿ ಸುಸಜ್ಜಿತವಾದ ಕಾರ್ಮಿಕರ ಭವನ ನಿರ್ಮಾಣಕ್ಕೆ ಅನುದಾನವನ್ನು ನೀಡುವುದಾಗಿ ಶಾಸಕ ಟಿ.ಬಿ.ಜಯಚಂದ್ರ ಅವರು ಹೇಳಿದರು.
ಅವರು ನಗರದ ಕೋಟೆ ಬಡಾವಣೆಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಮಂಡಳಿ ಹಾಗೂ ನವ ಕರ್ನಾಟಕ ಕಟ್ಟಡ ಕಾರ್ಮಿಕರ ಒಕ್ಕೂಟದ ಆಶ್ರಯದಲ್ಲಿ ನಡೆದ ಕಾರ್ಮಿಕರ ಕಿಟ್ ವಿತರಿಸಿ ಮಾತನಾಡಿದರು.
ಕಟ್ಟಡ ಕಾರ್ಮಿಕರಿಗೆ ಶಿರಾ ನಗರದಲ್ಲಿ ಮೂರು ಎಕರೆ ಜಾಗದಲ್ಲಿ ನಿವೇಶನ ಕೊಡಲಾಗುವುದು ಕಟ್ಟಡ ಕಾರ್ಮಿಕರು ಸೌಲಭ್ಯ ಪಡೆಯಲು ಮಂಡಳಿಯ ಸದಸ್ಯರಾಗಿ ಸದಸ್ಯತ್ವವನ್ನು ಪಡೆದು ಪ್ರತಿವರ್ಷ ನವೀಕರಣ ಮಾಡಿಕೊಂಡು ಇರುವ ಸೌಲಭ್ಯಗಳನ್ನು ಪಡೆಯಬೇಕಿದೆ ಎಂದರು.
ನಗರಸಭೆ ಅಧ್ಯಕ್ಷ ಜೀಶನ್ ಮಹಮೂದ್ ,ಸದಸ್ಯ ಅಜಯ್,ಕೆ.ಪಿ.ಸಿ.ಸಿ ಸದಸ್ಯ ಲೋಕೇಶ್ ಮಾತನಾಡಿದರು.
ನಗರಸಭೆ ಉಪಾಧ್ಯಕ್ಷ ಲಕ್ಷ್ಮಿಕಾಂತ್ , ಆಯುಕ್ತ ರುದ್ರೇಶ್, ಕಾರ್ಮಿಕ ನಿರೀಕ್ಷಕ ಸೈಯದ್ ಘವೂಪ್, ಕಾರ್ಮಿಕರ ಒಕ್ಕೂಟದ ರಾಜ್ಯಾಧ್ಯಕ್ಷರಾದ ನಾಗರಾಜ್, ಬೇಬಿರಾಣಿ, ನಗರ ಆಶ್ರಯ ಸಮಿತಿ ಸದಸ್ಯೆ ಜಯಲಕ್ಷ್ಮಿ ಮತ್ತಿತರರು ಇದ್ದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4