ದರ್ಶನ್ ಕೇಸ್ ವಿಚಾರದಲ್ಲಿ ಸರ್ಕಾರದ ಮೇಲೆ ಒತ್ತಡದ ಆರೋಪ ವಿಚಾರವಾಗಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ.
ಈ ಸಂಬಂಧ ಮಾತನಾಡಿದ ಅವರು, ಯಾವ ಒತ್ತಡವೂ ಇಲ್ಲ, ಏನು ಇಲ್ಲ ನಾನು ವಿಚಾರಿಸಿದ್ದೇನೆ. 13 ಜನ ಆರೋಪಿಗಳು ಇದಾರೆ. ಬೆಳಗ್ಗೆಯಿಂದ ಟಿವಿಯವರು ಕ್ಯಾಮರಾ ಹಾಕೊಂಡು ಕುಳಿತಿರ್ತಿರಾ. ಪೊಲೀಸರಿಗೆ ಫ್ರೀಯಾಗಿ ಕೆಲಸ ಮಾಡಲು ಅವಕಾಶ ಬೇಕು. ಆ ದೃಷ್ಟಿಯಿಂದ ರಕ್ಷಣೆಗೆ ಶಾಮಿಯಾನ ಹಾಕಿಸಿಕೊಂಡಿದ್ದಾರೆ. ನಮ್ಮ ನಮ್ ಮಿನಿಸ್ಟರ್ ಇನ್ವಾಲ್ವ್ ಆಗಿಲ್ಲ. ಯಾರು ಈ ಪ್ರಕರಣದಲ್ಲಿ ಹಸ್ತಕ್ಷೇಪ ಮಾಡ್ತಿಲ್ಲ. ಈ ಪ್ರಕರಣದ ಬಗ್ಗೆ ನಾವು ರೆಸ್ಪಾನ್ಸ್ ಸಹ ಮಾಡ್ತಿಲ್ಲ ಎಂದರು.
ದರ್ಶನ ಪ್ರಕರಣ ಮುಚ್ಚಿಹಾಕಲು ನಿಮ್ಮ ಸಚಿವರು ಯಾರಾದರೂ ಒತ್ತಡ ಹಾಕಿದಾರಾ ಎಂಬ ಪ್ರಶ್ನೆಗೆ, “ಈ ವಿಚಾರವಾಗಿ ನನ್ನ ಬಳಿ ಯಾರೂ ಮಾತನಾಡಿಲ್ಲ. ನನಗೆ ಅಷ್ಟಾಗಿ ಸಂಪರ್ಕವಿಲ್ಲ. ಸಚಿವರ ಪ್ರಯತ್ನದ ಬಗ್ಗೆ ನಿಮ್ಮಿಂದ ಮಾಹಿತಿ ಬಂದಿದೆ. ಈ ಬಗ್ಗೆ ವಿಚಾರಿಸುತ್ತೇನೆ’ ಎಂದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA


