ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ & ಗ್ಯಾಂಗ್ ಜೈಲು ಪಾಲಾಪಾಗಿದೆ. ಇನ್ನು ದರ್ಶನ್‌ನನ್ನು ಹೊರತರಲು ಪತ್ನಿ ವಿಜಯಲಕ್ಷ್ಮಿ ಹಾಗೂ ಕುಟುಂಬಸ್ಥರು ಇನ್ನಿಲ್ಲದ ಪ್ರಯತ್ನಗಳನ್ನು ಮಾಡುತ್ತಿದ್ದಾರೆ.ವಿಜಯಲಕ್ಷ್ಮಿ ಪತಿಗಾಗಿ ಟೆಂಪಲ್ ರನ್ ಮುಂದುವರೆಸಿದ್ದಾರೆ. ಮತ್ತೊಂದೆಡೆ ಅಭಿಮಾನಿಗಳು ಕೂಡ ಹಲವೆಡೆ ದೇವಸ್ಥಾನಗಳಲ್ಲಿ ವಿಶೇಷ ಪೂಜೆಗಳನ್ನು ಸಹ ಮಾಡಿಸುತ್ತಿದ್ದಾರೆ.
ನಟ ದರ್ಶನ್ ಯಾವಾಗ ಬಿಡುಗಡೆ ಆಗುತ್ತಾರೆ ಎಂದು ದೇವಸ್ಥಾನದ ಅರ್ಚಕರೇ ದೈವದ ಮೊರೆ ಹೋಗಿರುವ ಘಟನೆ ನಡೆದಿದೆ. ಹಾಗಾದರೆ ದೈವ ನುಡಿದ ಭವಿಷ್ಯ ಏನು ಎಂದು ಇಲ್ಲಿ ತಿಳಿಯಿರಿ.
ಬೆಂಗಳೂರಿನ ಬಾಪೂಜಿನಗರದ ಶಾರದಾಂಬೆ ದೇವಸ್ಥಾನದ ಅರ್ಚಕರ ಮಗಳ ಮೂಲಕ ಕುಟ್ಟೊ ಕಲ್ಲು ಮೂಲವಾಗಿ ದರ್ಶನ್ ಬಗ್ಗೆ ಓಂ ಶಕ್ತಿ ಶಾರದಾಂಬೆ ದೇವಿ ಭವಿಷ್ಯ ನುಡಿದಿದೆ ಎನ್ನುವ ಮಾಹಿತಿ ತಿಳಿದುಬಂದಿದೆ. ಸದ್ಯ ಓಂ ಶಕ್ತಿ ಶಾರದಾಂಬೆ ಬಿಸುವ ಕಲ್ಲು ಮೂಲಕ ಭವಿಷ್ಯ ನುಡಿದ ದೈವ, ದರ್ಶನ್ ಸದ್ಯ ಮೀನ ರಾಶಿಯಲ್ಲಿದ್ದಾರೆ. ಯಾವುದಕ್ಕೂ ಗ್ರಹಚಾರ ಸರಿಯಾಗಿಲ್ಲ. ಗುರುಬಲ ಇಲ್ಲದೇ ಇರುವುದರಿಂದ ಕೆಟ್ಟ ದೆಸೆ ನಡೆಯುತ್ತಿದೆ, ಶನಿ ಬಂದು ಕೂತಿದ್ದಾನೆ ಎಂದು ಭವಿಷ್ಯ ನುಡಿದಿದೆ ಎಂದು ತಿಳಿದುಬಂದಿದೆ.
ಬೆಂಗಳೂರಿನಲ್ಲಿರುವ ರಾಜರಾಜೇಶ್ವರಿನಗರದ ದರ್ಶನ್ ನಿವಾಸಕ್ಕೆ ವಾಸ್ತುದೋಷ ಇದೆ. ಮನೆಯ ಮೂಲೆಯೇ ಸರಿಯಿಲ್ಲ. ಈ ಎಲ್ಲಾ ಕಾರಣದಿಂದ ಅವರ ಬಿಡುಗಡೆಗೆ ಅಡ್ಡಿ ಆಗಿದೆ. ಇನ್ನೂ 2 ತಿಂಗಳು ಬಿಡುಗಡೆಯ ಭಾಗ್ಯವಿಲ್ಲ. ಬಳಿಕ ಜೈಲಿನಿಂದ ಹೊರಬರಲಿದ್ದಾರೆ ಎಂದು ದೈವ ಭವಿಷ್ಯ ನುಡಿದಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


