ಯುವ ರಾಜಕುಮಾರ್ ಅವರ ವಿಚ್ಚೇದನ ವಿಚಾರ ಇದೀಗ ದೊಡ್ಡ ಸುದ್ದಿಯಾಗುತ್ತಿದೆ. ನಟ ರಾಘವೇಂದ್ರ ರಾಜ್ ಕುಮಾರ್ ಪುತ್ರ ನಟ ಯುವ ಮತ್ತು ಪತ್ನಿ ಶ್ರೀದೇವಿ ಅವರು ವಿಚ್ಚೇದನಕ್ಕೆ ಅರ್ಜಿ ಹಾಕಿದ್ದಾರೆ ಎಂದು ವರದಿಯಾಗಿದೆ.
ಇದರ ಬಗ್ಗೆ ಸುದ್ದಿಗಾರರು ಶಿವಮೊಗ್ಗದಲ್ಲಿ ನಟ ಶಿವರಾಜ್ ಕುಮಾರ್ ಅವರನ್ನು ಕೇಳಿದಾಗ, ನಟ ಯುವ ವಿಚ್ಛೇದನ ವಿಚಾರದ ಬಗ್ಗೆ ಗೊತ್ತಿಲ್ಲ, ಸತ್ಯವಾಗಿಯೂ ಗೊತ್ತಿಲ್ಲ ಎಂದರು. ‘ಯುವ ಡಿವೋರ್ಸ್ ವಿಚಾರದ ಬಗ್ಗೆ ನನಗೆ ಮಾಹಿತಿ ಇಲ್ಲ. ಹಾಗಾಗಿ, ಮಾಹಿತಿ ಇಲ್ಲದೇ ಮಾತನಾಡೋದು ಸರಿಯಿಲ್ಲ. ಈ ಬಗ್ಗೆ ಮೊಬೈಲ್ನಲ್ಲಿ ನೋಡಿ ತಿಳಿದುಕೊಂಡೆ. ಆ ರೀತಿ ಏನಾದರೂ ಆಗಿದ್ದರೆ ಮನಸ್ಸಿಗೆ ಬೇಜಾರಾಗುತ್ತದೆ’ ಎಂದು ಶಿವರಾಜ್ಕುಮಾರ್ ಅವರು ಹೇಳಿದ್ದಾರೆ.
ಗೀತಾ ಶಿವರಾಜ್ ಕುಮಾರ್ ಅವರು ಮಾತನಾಡಿ, ಇದು ನಮ್ಮ ಮನೆಯ ವಿಚಾರ. ಇಲ್ಲಿವರೆಗೂ ಅದರ ಬಗ್ಗೆ ಗೊತ್ತಿಲ್ಲ. ಅದರ ಬಗ್ಗೆ ವಿಚಾರ ಮಾಡುತ್ತೇವೆ. ಈ ವಿಚಾರದಲ್ಲಿ ನಾವು ಇಬ್ಬರು ಮಾತಾನಾಡಬಾರದು ಎಂದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA


