ಪೌಷ್ಟಿಕಾಂಶದ ಶಕ್ತಿ ಕೇಂದ್ರ ಅಂತಲೇ ಕರೆಯಲ್ಪಡುವ ಚಿಯಾ ಸೀಡ್ಸ್ ನ್ನು ದಿನನಿತ್ಯದ ಆಹಾರದಲ್ಲಿ ಬಳಸುವುದರಿಂದ ಆರೋಗ್ಯ ಸುಧಾರಿಸುವುದಲ್ಲದೇ ರೋಗಗಳಿಂದ ನಿಮ್ಮ ದೇಹವನ್ನು ರಕ್ಷಿಸುತ್ತದೆ.
ಮುಂಜಾನೆ ಚಿಯಾ ಸೀಡ್ಸ್ ಸೇವನೆ ಮಾಡುವುದರಿಂದ ನಿಮಗೆ ಅಗತ್ಯವಾದ ಶಕ್ತಿ, ಪೋಷಣೆ ಮತ್ತು ಚೈತನ್ಯ ಸಿಗುತ್ತದೆ. ಇದು ದಿನವಿಡೀ ದೇಹದ ಅಗತ್ಯಗಳನ್ನು ಪೂರೈಸುತ್ತದೆ.
ಚಿಯಾ ಸೀಡ್ಸ್ಗಳು ಫೈಬರ್, ಒಮೆಗಾ –3 ಕೊಬ್ಬಿನಾಮ್ಲಗಳು, ಪ್ರೋಟೀನ್, ಉತ್ಕರ್ಷಣ ನಿರೋಧಕಗಳು, ಕ್ಯಾಲ್ಸಿಯಂ ಮತ್ತು ಮೆಗ್ನೀಸಿಯಮ್ ಇತ್ಯಾದಿಗಳನ್ನು ಹೊಂದಿರುತ್ತವೆ. ಈ ಎಲ್ಲಾ ಪೋಷಕಾಂಶಗಳನ್ನು ಬೆಳಗ್ಗೆ ಪಡೆಯುವುದರಿಂದ ದೇಹದಲ್ಲಿ ಅವುಗಳ ಕೊರತೆ ಇರುವುದಿಲ್ಲ.
ಚಿಯಾ ಬೀಜಗಳು ಹೆಚ್ಚಿನ ಫೈಬರ್ ಅನ್ನು ಹೊಂದಿರುತ್ತವೆ. ಇದು ಕರುಳಿನ ಆರೋಗ್ಯಕ್ಕೆ ಒಳ್ಳೆಯದು. ಇದು ಮಲಬದ್ಧತೆ ಸಮಸ್ಯೆಗೂ ಪರಿಹಾರ ನೀಡುತ್ತದೆ.
ಚಿಯಾ ಸೀಡ್ಸ್ ಗಳು ನಿಧಾನವಾಗಿ ಜೀರ್ಣವಾಗುತ್ತವೆ. ಇದರಿಂದಾಗಿ ಹೊಟ್ಟೆಯು ದೀರ್ಘಕಾಲದವರೆಗೆ ತುಂಬಿರುತ್ತದೆ. ಅನಗತ್ಯವಾಗಿ ಹಸಿವಿನ ಭಾವನೆಯನ್ನು ಹೊಂದುವುದಿಲ್ಲ. ಇದನ್ನು ನಿಮ್ಮ ಡಯಟ್ ಲಿಸ್ಟ್ನಲ್ಲಿ ಸೇರಿಸಿಕೊಳ್ಳಬಹುದು.
ಚಿಯಾ ಬೀಜಗಳಲ್ಲಿ ಒಮೆಗಾ–3 ಕೊಬ್ಬಿನಾಮ್ಲಗಳು ಇರುತ್ತವೆ. ಇದು ಉರಿಯೂತವನ್ನು ಕಡಿಮೆ ಮಾಡುತ್ತದೆ ಮತ್ತು ಹೃದಯದ ಕಾರ್ಯವನ್ನು ಸುಧಾರಿಸುತ್ತದೆ. ಇದರ ಸಹಾಯದಿಂದ ಕೊಲೆಸ್ಟ್ರಾಲ್ ಮಟ್ಟವನ್ನು ನಿಯಂತ್ರಿಸಬಹುದು.
ಚಿಯಾ ಬೀಜಗಳು ಕ್ಯಾಲ್ಸಿಯಂ ಮತ್ತು ಮೆಗ್ನೀಸಿಯಮ್ ಅನ್ನು ಹೊಂದಿರುತ್ತವೆ. ಈ ಎರಡೂ ಖನಿಜಗಳು ಮೂಳೆಗಳಿಗೆ ಅತ್ಯಗತ್ಯ. ಇದರ ಸೇವನೆಯಿಂದ ಮೂಳೆಗಳು ದುರ್ಬಲಗೊಳ್ಳುವ ಅಪಾಯವನ್ನು ತಪ್ಪಿಸಲಾಗುತ್ತದೆ.
ಚಿಯಾ ಬೀಜಗಳು ಹೆಚ್ಚಿನ ಪ್ರಮಾಣದ ಫೈಬರ್ ಅನ್ನು ಹೊಂದಿರುತ್ತವೆ. ಆದ್ದರಿಂದ ಅವುಗಳ ಅತಿಯಾದ ಸೇವನೆಯು ಜೀರ್ಣಕಾರಿ ಸಮಸ್ಯೆಗಳನ್ನು ಉಂಟುಮಾಡಬಹುದು. ಅಲ್ಲದೆ ಇದು ಅಲರ್ಜಿಯನ್ನು ಉಂಟುಮಾಡಬಹುದು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q