ವಕೀಲರ ಮೇಲಿನ ದೌರ್ಜನ್ಯ ತಡೆಗಟ್ಟುವ ದಿಸೆಯಲ್ಲಿ ಜುಲೈ 3ರಿಂದ ಆರಂಭವಾಗಲಿರುವ ವಿಧಾನ ಮಂಡಲ ಅಧಿವೇಶನದಲ್ಲಿ ‘ಕರ್ನಾಟಕ ವಕೀಲರ ರಕ್ಷಣಾ ಕಾಯ್ದೆ’ಯನ್ನು ಮಂಡಿಸಿ ಅನುಮೋದನೆ ಪಡೆಯಲಾಗುವುದು ಎಂದು ಬೆಂಗಳೂರು ವಕೀಲರ ಸಂಘಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ.
ಬೆಂಗಳೂರು ವಕೀಲರ ಸಂಘದ ಅಧ್ಯಕ್ಷ ವಿವೇಕ್ ಸುಬ್ಬಾರೆಡ್ಡಿ ಅವರ ನೇತೃತ್ವದಲ್ಲಿ ವಕೀಲರ ನಿಯೋಗವು ಗುರುವಾರ ಸಂಜೆ ಗೃಹ ಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಕರ್ನಾಟಕ ವಕೀಲರ ರಕ್ಷಣಾ ಕಾಯ್ದೆಯನ್ನು ಜಾರಿ ಮಾಡುವಂತೆ ಕೋರಿ ಮನವಿ ಮತ್ರ ಸಲ್ಲಿಸಿತು.
ಈ ಮನವಿಗೆ ಸೂಕ್ತವಾಗಿ ಸ್ಪಂದಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಮುಂದಿನ ವಿಧಾನಮಂಡಲ ಅಧಿವೇಶನದಲ್ಲಿ ಕಾಯ್ದೆಯನ್ನು ಮಂಡಿಸಿ ಉಭಯ ಸದನಗಳಲ್ಲಿ ಅನುಮೋದನೆ ಪಡೆಯಲಾಗುವುದು. ವಕೀಲರ ವಿಮಾ ಯೋಜನೆ ಜಾರಿ ವಿಚಾರವನ್ನು ಪರಿಗಣಿಸಲಾಗುವುದು. ಈ ಸಂಬಂಧ ಕಾನೂನು ಸಚಿವ ಎಚ್. ಕೆ. ಪಾಟೀಲ್ ಮತ್ತು ಮುಖ್ಯಮಂತ್ರಿಗಳ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯೆಲ್ ಭೇಟಿ ಮಾಡಿ ಚರ್ಚಿಸುವಂತೆ ವಕೀಲರ ನಿಯೋಗಕ್ಕೆ ಸಲಹೆ ನೀಡಿದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IHoly2pCaZPEkuV6RjAGNC
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA


