ಮೈಸೂರು: ಪ್ರಿನ್ಸೆಸ್ ರಸ್ತೆ ಅಂತ ದಾಖಲೆ ಇದ್ರೆ ಬದಲಾವಣೆ ಬೇಡ ಎಂದಿರುವ ಮಾಜಿ ಸಂಸದ ಪ್ರತಾಪ್ ಸಿಂಹ, ಸಿದ್ದರಾಮಯ್ಯ ಹೆಸರನ್ನು ಬೇರೆ ರಸ್ತೆಗೆ ಇಡಲಿ ಎಂದು ನಾನು ಕಾಂಗ್ರೆಸ್ ಶಾಸಕ ಹರೀಶ್ ಗೌಡಗೆ ಮನವಿ ಮಾಡ್ತೀನಿ ಎಂದು ಹೇಳಿದ್ದಾರೆ.
ಮೈಸೂರಿನ ಶ್ರೀ ಲಕ್ಷ್ಮಿವೆಂಕಟರಮಣ ಸ್ವಾಮಿ ದೇವಸ್ಥಾನ ವೃತ್ತದಿಂದ ಆರಂಭವಾಗುವ ಮೇಟಗಳ್ಳಿಯ ರಾಯಲ್ ಇನ್ ಜಂಕ್ಷನ್ ವರೆಗಿನ ರಸ್ತೆಗೆ ಸಿದ್ದರಾಮಯ್ಯರ ಹೆಸರು ಇಡಲು ಪಾಲಿಕೆ ಮುಂದಾಗಿದೆ.
ಈ ಬಗ್ಗೆ ಪ್ರತಿಕ್ರಿಯಿಸಿದ್ದ ಪ್ರತಾಪ್ ಸಿಂಹ ಸಿದ್ದರಾಮಯ್ಯರ ಹೆಸರು ಇಟ್ಟರೆ ತಪ್ಪೇನು? ಎಂದು ಪ್ರಶ್ನಿಸಿದ್ದರು. ಈ ಹೇಳಿಕೆಗೆ ಪ್ರತಿಕ್ರಿಯಿಸಿದ್ದ ಸಂಸದ ಯದುವೀರ್ ಒಡೆಯರ್ ಪ್ರತಾಪ್ ಸಿಂಹಗೆ ಇತಿಹಾಸ ತಿಳಿದಿಲ್ಲ. ಪ್ರಿನ್ಸೆಸ್ ರಸ್ತೆ ಇತಿಹಾಸ ನಾನು ತಿಳಿಸಿದ ಮೇಲೆ ಅವರಿಗೆ ಗೊತ್ತಾಗಲಿದೆ ಎಂದಿದ್ದರು. ಒಡೆಯರ್ ಪ್ರತಿಕ್ರಿಯೆ ಬೆನ್ನಲ್ಲೇ ಮಾತನಾಡಿರುವ ಪ್ರತಾಪ್ ಸಿಂಹ.. ಒಂದೊಮ್ಮೆ ಪ್ರಿನ್ಸೆಸ್ ರಸ್ತೆ ಅಂತ ಕರೆಯೋದಕ್ಕೆ ದಾಖಲೆ ಇದ್ದರೆ ಬದಲಾವಣೆ ಬೇಡ ಎಂದಿದ್ದಾರೆ.
ಸಿದ್ದರಾಮಯ್ಯ ಹೆಸರಿಡಿ ಅಂದ ತಕ್ಷಣ ನಾನು ಸಿದ್ದರಾಮಯ್ಯ ಪರ ಅಂತಲ್ಲ. ಕಾಂಗ್ರೆಸ್ ಕೂಡ ಸೇರಲ್ಲ. ಕಳೆದ 11 ವರ್ಷದಿಂದ ಸಿದ್ದರಾಮಯ್ಯರನ್ನು ವಿರೋಧಿಸುತ್ತಿದ್ದೇನೆ. ನಾನು ಅವರ ಸಿದ್ಧಾಂತ ವಿರೋಧಿ. ನಾನು ಬದ್ಧತೆಯಿರುವ ವ್ಯಕ್ತಿ. ನಾನು ಕಾಂಗ್ರೆಸ್ ಸೇರುವ ಪ್ರಶ್ನೆಯೇ ಇಲ್ಲ ಎಂದು ಸ್ಪಷ್ಟನೆ ನೀಡಿದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx


