ಬಳ್ಳಾರಿ: ನಟ ದರ್ಶನ್ ಅವರನ್ನು ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಿಂದ ಬಳ್ಳಾರಿಯ ಕೇಂದ್ರೀಯ ಕಾರಾಗೃಹಕ್ಕೆ ಇಂದು ಶಿಫ್ಟ್ ಮಾಡಲಾಗಿದೆ. ಈ ನಡುವೆ ನಟ ದರ್ಶನ್ ಅವರಿಗೆ ಜೈಲು ಅಧಿಕಾರಿಗಳು ಕೈದಿ ನಂಬರ್ ನೀಡಿದ್ದಾರೆ.
ಬಳ್ಳಾರಿ ಜೈಲಿಗೆ ಪ್ರವೇಶಿಸುತ್ತಿದ್ದಂತೆಯೇ ಪೊಲೀಸರು ನಿಯಮ ಪ್ರಕಾರ ದರ್ಶನ್ ಅವರ ಹೆಸರು, ತಂದೆಯ ಹೆಸರು ಹಾಗೂ ವಿಳಾಸವನ್ನು ಜೈಲಿನ ಡೈರಿಯೊಳಗೆ ಬರೆದುಕೊಂಡಿದ್ದಾರೆ. ಅವರು ಧರಿಸಿದ್ದ ಸರ ಹಾಗೂ ಕೈಯಲ್ಲಿದ್ದ ಬೆಳ್ಳಿ ಕಡಗವನ್ನು ತೆಗೆಸಿದ್ದಾರೆ.
ನಟ ದರ್ಶನ್ ಅವರಿಗೆ ವಿಚಾರಣಾಧೀನ ಕೈದಿ ಸಂಖ್ಯೆ 511 ನೀಡಲಾಗಿದೆ. ಚಿತ್ರದುರ್ಗದ ರೇಣುಕಾಸ್ವಾಮಿ ಎಂಬುವರ ಹತ್ಯೆ ಕೇಸ್ ನಲ್ಲಿ ಜೂನ್ ತಿಂಗಳಲ್ಲಿ ಬಂಧನಕ್ಕೊಳಗಾಗಿದ್ದರು. ಅವರ ಜೊತೆಗೆ ಕೊಲೆಗೆ ಸಹಕರಿಸಿದ ಆರೋಪದಡಿ ದರ್ಶನ್ ಸೇರಿ ಒಟ್ಟು 17 ಆರೋಪಿಗಳ ಬಂಧನವಾಗಿದೆ. ಸದ್ಯ ದರ್ಶನ್ ನ್ಯಾಯಾಂಗ ಬಂಧನದಲ್ಲಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q


