ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣದ ಎ2 ಆರೋಪಿ ನಟ ದರ್ಶನ್ ಜಾಮೀನು ಅರ್ಜಿ ಸಲ್ಲಿಸಿದ್ದಾರೆ. ಆದ್ರೆ ಈ ಅರ್ಜಿಯ ವಿಚಾರಣೆ ಮತ್ತೆ ಅ.4ಕ್ಕೆ ಮುಂದೂಡಲಾಗಿದೆ.
ಸೋಮವಾರ ಬೆಂಗಳೂರಿನ 57ನೇ ಸಿಟಿ ಸಿವಿಲ್ ನ್ಯಾಯಾಲಯ ಅರ್ಜಿ ವಿಚಾರಣೆ ಕೈಗೆತ್ತಿಕೊಂಡಿತು. ಈ ವೇಳೆ ದರ್ಶನ್ ಪರ ವಕೀಲರು ವಾದ ಮಂಡಿಸಲು ಸಮಯ ಅವಕಾಶ ಬೇಕೆಂದು ನ್ಯಾಯಾಧೀಶರಿಗೆ ಮನವಿ ಮಾಡಿದರು.
ಇದನ್ನು ಮನ್ನಿಸಿದ ನ್ಯಾಯಾಲಯ ಮುಂದಿನ ಅರ್ಜಿ ವಿಚಾರಣೆಯನ್ನು ಅ.4ಕ್ಕೆ ಮುಂದೂಡಿತು. ಹೀಗಾಗಿ ದರ್ಶನ್ ಅವರು ಅ.4ರವರೆಗೆ ಜೈಲಿನಲ್ಲಿಯೇ ಇರಬೇಕಿದೆ.
ಕೊಲೆ ಪ್ರಕರಣದಲ್ಲಿ ಪೊಲೀಸರು ವಿಚಾರಣೆಯನ್ನು ಪೂರ್ಣಗೊಳಿಸಿ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದಾರೆ. ತನಿಖೆ ಮುಗಿದ ಹಿನ್ನಲೆಯಲ್ಲಿ ತಮಗೆ ಜಾಮೀನು ನೀಡಬೇಕೆಂದು ನ್ಯಾಯಾಲಯಕ್ಕೆ ಮೇಲನವಿ ಅರ್ಜಿ ಸಲ್ಲಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296