ತುಮಕೂರು: ತುಮಕೂರು–ರಾಯದುರ್ಗ ಹಾಗೂ ತುಮಕೂರು–ದಾವಣಗೆರೆ ಮಾರ್ಗದ ರೈಲ್ವೆ ಯೋಜನೆ ಮತ್ತು ಎತ್ತಿನಹೊಳೆ ಕುಡಿಯುವ ನೀರಿನ ಯೋಜನೆಯ ವಿವಿಧ ಹಂತವಾರು ಭೂಸ್ವಾಧೀನ ಪ್ರಕ್ರಿಯೆಯಲ್ಲಿ ಆಗುತ್ತಿರುವ ಸಮಸ್ಯೆಯ ಕುರಿತಂತೆ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಗೃಹ ಸಚಿವರಾದ ಡಾ.ಜಿ.ಪರಮೇಶ್ವರ ಅವರು ಜಿಲ್ಲಾಧಿಕಾರಿಗಳ ಕಾರ್ಯಾಲಯದಲ್ಲಿ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು. ಸಭೆ ಬಳಿಕ ಮಾಧ್ಯಮದವರಿಗೆ ನೀಡಿದ ಹೇಳಿಕೆಯ ಪ್ರಮುಖ ಅಂಶಗಳು.
ತುಮಕೂರು–ರಾಯದುರ್ಗ ಹಾಗೂ ತುಮಕೂರು-ದಾವಣಗೆರೆ ಮಾರ್ಗದ ರೈಲ್ವೆ ಯೋಜನೆ ಮತ್ತು ಎತ್ತಿನಹೊಳೆ ಕುಡಿಯುವ ನೀರಿನ ಯೋಜನೆಯು ನಿಧಾನಗತಿಯಲ್ಲಿ ಸಾಗಿದೆ. ವಿವಿಧ ಹಂತವಾರು ಭೂಸ್ವಾಧೀನ ಪ್ರಕ್ರಿಯೆ ಆಗಿಲ್ಲ, ಕೇಂದ್ರ ಸರ್ಕಾರದಲ್ಲಿ ಅನುಮೋದನೆಯಾಗಿ ಹಣ ಬಿಡುಗಡೆಯಾಗಬೇಕು. ಆ ಕೆಲಸಗಳು ಪ್ರಾರಂಭವಾಗುತ್ತವೆ. ಭೂಸ್ವಾಧೀನಕ್ಕೆ ಎಲ್ಲೆಲ್ಲಿ ಸಮಸ್ಯೆಗಳಿವೆ, ಯಾವ ಕಾರಣದಿಂದ ನಿಂತಿವೆ ಎಂಬುದನ್ನು ಸಭೆಯಲ್ಲಿ ಪರಿಶೀಲಿಸಿ ಮಾಹಿತಿ ಪಡೆದಿದ್ದೇನೆ. ಈ ಬಗ್ಹೆ ನಮ್ಮ ಜಿಲ್ಲಾಧಿಕಾರಿಗಳಿಗೆ ಸೂಚಿಸಿದ್ದೇನೆ ಎಂದರು.
ಹೇಮಾವತಿ ಯೋಜನೆಯ ಭೂಸ್ವಾಧೀನ ಆಗಿಲ್ಲ. ಕುಣಿಗಲ್ ಸೇರಿದಂತೆ ಜಿಲ್ಲೆಯ ನಾಲ್ಕು ಏತ ನೀರಾವರಿ ಯೋಜನೆಗಳ ಭೂಸ್ವಾಧೀನ ಪ್ರಕ್ರಿಯೆ ಸಮಸ್ಯೆಯಾಗುತ್ತಿದೆ. ಅದನ್ನು ಕೂಡ ಪರಿಶೀಲಿಸಿದ್ದೇನೆ. ಭದ್ರಾ ಮೇಲ್ದಂಡೆ ಯೋಜನೆಗೆ ಸಂಬಂಧಿಸಿದಂತೆ 160 ಎಕರೆ ಭೂಸ್ವಾಧೀನ ಆಗಬೇಕಿದೆ. ಕೆಐಎಡಿಬಿ 12 ಸಾವಿರ ಎಕರೆಗೂ ಹೆಚ್ಚು ಭೂಮಿಯಲ್ಲಿ ಇಂಡಸ್ಟ್ರೀಯಲ್ ಹಬ್ ಮಾಡಿದ್ದೇವೆ. 6 ಸ್ಟೇಜ್‌ಗಳ ಪೈಕಿ 3 ಸ್ಟೇಜ್ ಪೂರ್ಣಗೊಂಡಿದೆ. ಇದನ್ನು ಕೂಡ ಪರಿಶೀಲಿಸಿದ್ದೇನೆ.
ಎತ್ತಿನಹೊಳೆ ಕುಡಿಯುವ ನೀರಿನ ಯೋಜನೆಯಲ್ಲಿ ಕೊರಟಗೆರೆ ಭಾಗದಲ್ಲಿ 5000 ಎಕರೆ ನೀರು ಸಂಗ್ರಹಕ್ಕೆ ತೀರ್ಮಾನಿಸಲಾಗಿತ್ತು. ಕೊರಟಗೆರೆ ಭಾಗದ 2,500 ಎಕರೆ ಹಾಗೂ ದೊಡ್ಡಬಳ್ಳಾಪುರ 2,500 ಎಕರೆ ಅದನ್ನು ಬದಲಾಯಿಸಲಾಗಿದೆ. ಒಂದೇ ಕಡೆ ಮಾಡಲು ನಿರ್ಧರಿಸಿದ್ದಾರೆ. ನಮ್ಮ ಜಿಲ್ಲೆಗೆ ಅನ್ಯಾಯವಾಗಿದೆ. ಇದನ್ನು ಸರಿಪಡಿಸಿಕೊಳ್ಳುವ ಬಗ್ಗೆ ಸಭೆಯಲ್ಲಿ ಚರ್ಚಿಸಲಾಗಿದೆ.
ಬಜೆಟ್ ನಲ್ಲಿ ಜಿಲ್ಲೆಗೆ ಹೆಚ್ಚು ಹಣ ಮತ್ತು ಯೋಜನೆಗಳನ್ನು ನೀಡುವಂತೆ ಕೇಳಿದ್ದೇನೆ. ಹೆಚ್ಚು ನಿರೀಕ್ಷೆ ಇಟ್ಟುಕೊಂಡಿದ್ದೇನೆ. ಅದು ಯಾವ ರೀತಿ ಆಗುತ್ತದೆ ನೋಡಬೇಕು. ಈ ವರ್ಷ 4 ಲಕ್ಷ ಕೋಟಿ ರೂ. ಹೆಚ್ಚು ಬಜೆಟ್ ಗಾತ್ರ ಇದೆ ಎಂದರು.
ರಾಜ್ಯ ಸರ್ಕಾರ ಪರಿಶಿಷ್ಟರ ಹಣ ತಾರತಮ್ಯ ಮಾಡುತ್ತಿದೆ ಎಂದು ಆರೋಪಿಸಿ ಬಿಜೆಪಿಯವರು ಪ್ರತಿಭಟನೆ ನಡೆಸುತ್ತಿರುವ ಕುರಿತು ಪ್ರತಿಕ್ರಿಯಿಸಿ, ಕೇಂದ್ರ ಸರ್ಕಾರದ ಬಜೆಟ್ ನಲ್ಲಿ ಪರಿಶಿಷ್ಟರಿಗೆ ಎಷ್ಟು ಕೊಟ್ಟಿದ್ದಾರೆ ಎಂಬುದನ್ನು ರಾಜ್ಯ ಬಿಜೆಪಿ ಮುಖಂಡರು ತಿರುಗಿ ನೋಡಿಕೊಳ್ಳಲಿ ಸಾಕು. ಕೇಂದ್ರ ಸರ್ಕಾರವು ಬಜೆಟ್‌ನಲ್ಲಿ ಇಡೀ ದೇಶದಲ್ಲಿ ಪರಿಶಿಷ್ಟ ಜನಾಂಗಗಳಿಗೆ ಎಷ್ಟು ಪ್ರಮಾಣದಲ್ಲಿ ನೀಡಿದ್ದಾರೆ. 50 ಲಕ್ಷ ಕೋಟಿ ರೂ. ಬಜೆಟ್ ನಲ್ಲಿ 24% ಕೊಡಬೇಕಲ್ಲವೇ. ಉತ್ತರ ಭಾರತದ ಭಾಗದಲ್ಲಿ ಪರಿಶಿಷ್ಟ ಪಂಗಡದವರ ಸಂಖ್ಯೆ ಹೆಚ್ಚಿದೆ. ಉತ್ತರ ಪ್ರದೇಶ, ಪಂಜಾಬ್ ನಲ್ಲಿ 35% ಎಸ್ ಸಿ ಜನ ಇದ್ದಾರೆ.
ಅಷ್ಟು ಪ್ರಮಾಣ ಅನುದಾನವನ್ನು ಪರಿಶಿಷ್ಟ ಜಾತಿ ಮತ್ತು ಪಂಗಡಗಳಿಗೆ ನೀಡಬೇಕು ಎಂದು ಸಂವಿಧಾನದಲ್ಲಿದೆ. ಅದು ನೀಡಬೇಕಲ್ಲವೆ. ಹಣ ಖರ್ಚು ಮಾಡದಿದ್ದರೆ ಅಧಿಕಾರಿಗಳ ವಿರುದ್ಧ ಕ್ರಮ ತೆಗೆದುಕೊಲ್ಳಲುತ್ತೇವೆ ಎಂಬ ಕಾನೂನು ತಂದಿದ್ದೇವೆ. ಅದನ್ನು ಕೇಂದ್ರ ಸರ್ಕಾರ ಮಾಡಬೇಕು. ಇದಕ್ಕೆ ಬಿಜೆಪಿಯವರು ಉತ್ತರಿಸಬೇಕು ಎಂದು ಸಚಿವ ಪರಮೇಶ್ವರ ಅವರು ಹೇಳಿದರು.
ರಾಜ್ಯದಲ್ಲಿ ಪುಂಡರ ಹಾವಳಿ ವಿರುದ್ಧ ಕಠಿಣ ಕ್ರಮ ಕೈಗೊಳ್ಳುತ್ತಿದ್ದೇವೆ. ವ್ಹೀಲಿಂಗ್ ಮಾಡುವುದು ಸೇರಿದಂತೆ ಪುಂಡಾಟಿಕೆಯನ್ನು ಪೊಲೀಸ್ ಇಲಾಖೆ ಗಂಭೀರವಾಗಿ ಪರಿಗಣಿಸಿದೆ. ಮಾದಕವ್ಯಸನಿಗಳ ವಿರುದ್ಧ ಕಾನೂನುಕ್ರಮ ಕೈಗೊಳ್ಳುತ್ತಿದ್ದೇವೆ. ಡ್ರಗ್ಸ್ ಮುಕ್ತ ಕರ್ನಾಟಕವನ್ನಾಗಿಸುವ ನಿಟ್ಟಿನಲ್ಲಿ ಕಾರ್ಯಚರಣೆ ಕೈಗೊಳ್ಳಲಾಗಿದೆ. ನೂರಾರು ಕೆಜಿ ಡ್ರಗ್ಸ್ ಸುಟ್ಟು ಹಾಕಿದ್ದೇವೆ. ಶಿಕ್ಷೆ ಆಗುವ ನಿಟ್ಟಿನಲ್ಲಿ ಕ್ರಮ ತೆಗೆದುಕೊಂಡಿದ್ದೇವೆ. ಅಕ್ರಮವಾಗಿ ನೆಲೆಸಿರುವ ವಿದೇಶಿ ಪ್ರಜೆಗಳು ಹಾಗೂ ಡ್ರಗ್ಸ್ ದಂಧೆಯಲ್ಲಿ ತೊಡಗಿರುವವರನ್ನು ಗಡಿಪಾರು ಮಾಡಲಾಗಿದೆ. ವ್ಯಾಸಂಗಕ್ಕಾಗಿ ಬಂದುವವೀಸಾ ಮುಗಿದರು ಅಕ್ರಮವಾಗಿ ನೆಲೆಸಿರುಔರನದನು ಗುರುತಿಸಿ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಅವರು ಹೇಳಿದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4